Homeಮುಖಪುಟಮಧ್ಯಪ್ರದೇಶ: ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ; 39 ನಾಯಕರು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ

ಮಧ್ಯಪ್ರದೇಶ: ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ; 39 ನಾಯಕರು ಕಾಂಗ್ರೆಸ್‌ ಪಕ್ಷದಿಂದ ಉಚ್ಚಾಟನೆ

- Advertisement -
- Advertisement -

ಮಧ್ಯಪ್ರದೇಶ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆಗೆ ಇಳಿದ ಮಧ್ಯಪ್ರದೇಶದ ಕಾಂಗ್ರೆಸ್‌ನ 39 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಕಮಲ್ ನಾಥ್ ಅವರ ಆದೇಶದ ಮೇರೆಗೆ 39 ನಾಯಕರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜೀವ್ ಸಿಂಗ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಚ್ಚಾಟಿತ ನಾಯಕರು ಸ್ವತಂತ್ರ ಅಭ್ಯರ್ಥಿಗಳಾಗಿ ಅಥವಾ ಬಹುಜನ ಸಮಾಜ ಪಕ್ಷ , ಸಮಾಜವಾದಿ ಪಕ್ಷ  ಮತ್ತು ಆಮ್ ಆದ್ಮಿ ಪಾರ್ಟಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಉಚ್ಛಾಟಿತರಲ್ಲಿ ಮಾಜಿ ಸಂಸದ ಪ್ರೇಮಚಂದ್ ಗುಡ್ಡು, ಮಾಜಿ ಶಾಸಕ ಅಂತರ್ ಸಿಂಗ್ ದರ್ಬಾರ್, ಮಾಜಿ ಶಾಸಕ ಯದ್ವೇಂದ್ರ ಸಿಂಗ್, ಪಕ್ಷದ ರಾಜ್ಯ ವಕ್ತಾರ ಅಜಯ್ ಸಿಂಗ್ ಯಾದವ್, ನಾಸಿರ್ ಇಸ್ಲಾಂ ಮತ್ತು ಅಮೀರ್ ಅಕ್ವಿಲ್ ಸೇರಿ 39ಮಂದಿ ನಾಯಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ನ.17ರಂದು ಮಧ್ಯಪ್ರದೇಶದ 230 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್‌ ಪಕ್ಷವು ಪ್ರಯತ್ನಿಸುತ್ತಿದೆ.

ಮಧ್ಯಪ್ರದೇಶದಲ್ಲಿ ಈಗಾಗಲೇ ಚುನಾವಣೆಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಪಕ್ಷವು ಘೋಷಿಸಿದ್ದು, ಟಿಕೆಟ್‌ ವಂಚಿತರು ಪಕ್ಷದ ವಿರುದ್ಧ ಸಿಡಿದೆದ್ದು ಸ್ವತಂತ್ರವಾಗಿ ಸ್ಪರ್ಧಿಸಲು ಮುಂದಾಗಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶ: ABVP ಬಗ್ಗೆ ಹೇಳಿಕೆ; ಕಾಂಗ್ರೆಸ್‌ ರಾಜ್ಯಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...