Homeಮುಖಪುಟಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ:...

ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

- Advertisement -
- Advertisement -

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ‘ಶೂನ್ಯ ದೂರುಗಳು’ ಬಂದಿವೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ವಿರುದ್ಧವಾಗಿ, 89 ಲಕ್ಷ ದೂರುಗಳನ್ನು ಸಲ್ಲಿಸಿದ್ದೇವೆ. ಅದಕ್ಕೆ ಪುರಾವೆಯಾಗಿ ಸೀಲ್ ಹಾಕಿರುವ ರಶೀದಿಗಳು ನಮ್ಮ ಬಳಿ ಇವೆ ಎಂದು ಕಾಂಗ್ರೆಸ್ ಭಾನುವಾರ (ಆ.31) ಹೇಳಿದೆ.

ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಎಲ್ಲಾ ಹೆಸರುಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಪಕ್ಷದ ಬಿಹಾರ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರಾಮ್ ಮತ್ತು ಅಖಿಲೇಶ್ ಪ್ರಸಾದ್, ಶಕೀಲ್ ಅಹ್ಮದ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

“ಯಾವುದೇ ರಾಜಕೀಯ ಪಕ್ಷಗಳಿಂದ ಯಾವುದೇ ದೂರುಗಳು ಬರುತ್ತಿಲ್ಲ ಎಂಬ ಸುದ್ದಿಯನ್ನು ಚುನಾವಣಾ ಆಯೋಗ ತನ್ನ ಮೂಲಗಳ ಮೂಲಕ ಹರಡುತ್ತಲೇ ಇದೆ. ಸತ್ಯ ಏನೆಂದರೆ, ಕಾಂಗ್ರೆಸ್ ಎಸ್‌ಐಆರ್‌ನಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ 89 ಲಕ್ಷ ದೂರುಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ” ಎಂದು ಖೇರಾ ಹೇಳಿದ್ದಾರೆ.

ಮತದಾರರ ಪಟ್ಟಿಯಲ್ಲಿ ಯಾವುದೇ ಅಕ್ರಮ ಮತದಾರರನ್ನು ಕಾಂಗ್ರೆಸ್ ಬಯಸುವುದಿಲ್ಲ. ಆದರೆ, ಯಾವುದೇ  ಹಕ್ಕುದಾರ ಮತದಾರರನ್ನು ಪಟ್ಟಿಯಿಂದ ಕೈಬಿಡಲೂ ಅನುಮತಿಸುವುದಿಲ್ಲ. ಉದ್ದೇಶಪೂರ್ವಕವಾಗಿಯೂ ಆಗಿರಬಹುದು ಅಥವಾ ಅಜಾಗರೂಕತೆಯಿಂದಲೂ ಆಗಿರಬಹುದು ಎಂದು ಪವನ್ ಖೇರಾ ಗುಡುಗಿದ್ದಾರೆ.

“ದೂರುಗಳಿಗೆ ಚುನಾವಣಾ ಆಯೋಗದ ಸ್ಪಷ್ಟ ಪ್ರತಿರೋಧದ ಹೊರತಾಗಿಯೂ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಸಹಿ ಮತ್ತು ಸೀಲ್ ಇರುವ ರಶೀದಿಗಳನ್ನು ಪಡೆದುಕೊಂಡಿದ್ದಾರೆ. ಬೂತ್ ಮಟ್ಟದ ಏಜೆಂಟ್‌ಗಳಿಂದ ದೂರುಗಳು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಚುನಾವಣಾ ಆಯೋಗ ನಿರಾಕರಿಸಿದೆ. ದೂರುಗಳು ವೈಯಕ್ತಿಕ ದೂರುದಾರರಿಂದ ಆಗಿರಬೇಕು ಮತ್ತು ರಾಜಕೀಯ ಪಕ್ಷಗಳಿಂದ ಅಲ್ಲ ಎಂದು ಹೇಳಿದೆ” ಎಂದು ಖೇರಾ ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡಲು ಚುನಾವಣಾ ಆಯೋಗವು ನಾಲ್ಕು ಕಾರಣಗಳನ್ನು ಉಲ್ಲೇಖಿಸಿದೆ. ವಲಸೆಯ ನೆಪದಲ್ಲಿ 25 ಲಕ್ಷ, ಸಾವನಪ್ಪಿದ್ದಾರೆ ಎಂದು 22 ಲಕ್ಷ ಮತ್ತು ವಿಳಾಸಗಳಲ್ಲಿ ಕಂಡುಬಂದಿಲ್ಲ ಎಂದು 9.7 ಲಕ್ಷ ಮತದಾರ ಹೆಸರುಗಳನ್ನು ಕೈ ಬಿಡಲಾಗಿದೆ.  ಒಂದಕ್ಕಿಂತ ಹೆಚ್ಚು ಬಾರಿ ನೋಂದಾಯಿಸಲಾಗಿದೆ ಎಂದು ಏಳು ಲಕ್ಷ ಹೆಸರುಗಳನ್ನು ಕೈ ಬಿಟ್ಟಿದ್ದಾರೆ ಎಂದು ಖೇರಾ ವಿವರಿಸಿದ್ದಾರೆ.

ಒಬ್ಬರು ಮತದಾರರಿಗೆ ಎರಡು ಎಪಿಕ್ (ಮತದಾರರ ಫೋಟೋ ಗುರುತಿನ ಚೀಟಿ) ಸಂಖ್ಯೆಗಳನ್ನು ನೀಡಲಾದ ಪ್ರಕರಣಗಳು ಸಾಕಷ್ಟಿವೆ ಎಂದು ಖೇರಾ ಆರೋಪಿಸಿದ್ದಾರೆ.

ಎಸ್‌ಐಆರ್‌ನಲ್ಲಿ ಕೆಲವು ಕುತೂಹಲಕಾರಿ ಮಾದರಿಗಳನ್ನು ಗಮನಿಸಲಾಗಿದೆ. 20,638 ಬೂತ್‌ಗಳಲ್ಲಿ 100ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 1,988 ಬೂತ್‌ಗಳಲ್ಲಿ 200ಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಡಲಾಗಿದೆ. 7,613 ಬೂತ್‌ಗಳಲ್ಲಿ, ಅಳಿಸಲಾದ ಹೆಸರುಗಳಲ್ಲಿ 70% ಮಹಿಳಾ ಮತದಾರರಾಗಿದ್ದು, 635 ಬೂತ್‌ಗಳಲ್ಲಿ, ವಲಸೆ ವರ್ಗದ ಅಡಿಯಲ್ಲಿ ಅಳಿಸಲಾದ ಮತದಾರರಲ್ಲಿ 75% ಕ್ಕಿಂತ ಹೆಚ್ಚು ಮಹಿಳೆಯರು ಎಂದು ಖೇರಾ ಹೇಳಿದ್ದಾರೆ.

ಸಾಮಾನ್ಯವಾಗಿ ಪುರುಷರು ಕೆಲಸಕ್ಕಾಗಿ ವಲಸೆ ಹೋಗುತ್ತಿದ್ದರಿಂದ ಇದು ವಿಚಿತ್ರವಾಗಿ ಕಾಣಿಸಿದೆ. ಮಹಿಳೆಯರ ಹೆಸರನ್ನು ನಿರ್ದಿಷ್ಟವಾಗಿ ಕೈಬಿಡಲಾಗಿದೆ ಎಂದು ಪವನ್ ಖೇರಾ ಆರೋಪಿಸಿದ್ದಾರೆ.

7,931 ಬೂತ್‌ಗಳಲ್ಲಿ, ಶೇ. 75 ರಷ್ಟು ಮತದಾರರನ್ನು ಕೈಬಿಡಲಾಗಿದೆ. ಅವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎಸ್‌ಐಆರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲ್ಪಟ್ಟ ಅನೇಕ ಮತದಾರರು ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಆದ್ದರಿಂದ ಈ ವರ್ಗದಲ್ಲಿ ಗಂಭೀರ ವ್ಯತ್ಯಾಸಗಳಿವೆ ಎಂದು ಖೇರಾ ಹೇಳಿದ್ದಾರೆ.

ಈ ವ್ಯತ್ಯಾಸಗಳನ್ನು ಗಮನದಲ್ಲಿಟ್ಟುಕೊಂಡು, ಕೈಬಿಡಲಾದ ಎಲ್ಲಾ ಹೆಸರುಗಳನ್ನು ಚುನಾವಣಾ ಆಯೋಗವು ಮತ್ತೊಮ್ಮೆ ಪರಿಶೀಲಿಸಬೇಕು. ಆಯೋಗವು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವ ಮೂಲಕ ಅಂತಹ ಪ್ರತಿಯೊಬ್ಬ ಮತದಾರರ ಸ್ಥಿತಿಯನ್ನು ದೃಢೀಕರಿಸಬೇಕು ಎಂದು ಖೇರಾ ಒತ್ತಾಯಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...