Homeಕರ್ನಾಟಕಮಲ್ಲಿಕಾರ್ಜುನ ಖರ್ಗೆಗೆ ನಿಂದನೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಮಲ್ಲಿಕಾರ್ಜುನ ಖರ್ಗೆಗೆ ನಿಂದನೆ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

- Advertisement -
- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನಿಂದಿಸಿದ ಆರೋಪದ ಮೇಲೆ ಹಿಂದುತ್ವವಾದಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿಯಲ್ಲಿ ದೂರು ದಾಖಲಾಗಿದೆ. ಕಲಬುರಗಿ ಪೊಲೀಸ್‌ ಆಯುಕ್ತ ಆರ್‌ ಚೇತನ್ ಅವರಿಗೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಯಚೂರಿನ ಶಿರವಾದಲ್ಲಿ ಇತ್ತೀಚೆಗೆ ನಡೆದ ‘ನಮೋ ಭಾರತ’ ಎಂಬ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ವಿರುದ್ದ ಆಕ್ಷೇಪಾರ್ಹ ಪದ ಬಳಸಿ, ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. “ಕಲಬುರಗಿಯಲ್ಲಿ ಖರ್ಗೆ ಸಾಹೇಬರ ಕಾಲದಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಾಣ‌ ಮಾಡಲಾಗಿದೆ. ಆಸ್ಪತ್ರೆ ಮೇಲ್ಭಾಗವನ್ನು ಡ್ರೋನ್ ಕ್ಯಾಮರಾ ಮೂಲಕ ನೋಡಿದರೆ ಕಟ್ಟಡಗಳ ಆಕಾರದಲ್ಲಿ ‘ಮೊದಲ ಅಕ್ಷರ ಖ, ಎರಡನೇ ಅಕ್ಷರ ಗೆ, ಮೂರನೆಯದು ಅರ್ಕವತ್ತು’ ಕಾಣಿಸುತ್ತದೆ. ಆ ಕಟ್ಟಡ ಖರ್ಗೆ ಅಂತಾ ಇದೆ. ಕಟ್ಟಡ ಇರೋವರೆಗೆ ಅವರ ಹೆಸರು ಉಳಿಯಬೇಕೆಂದು ಹೀಗೆ ಮಾಡಲಾಗಿದೆ. ಆಸ್ಪತ್ರೆಯನ್ನು ಅವರ ಸ್ವಂತ ದುಡ್ಡಿಂದ, ಪಕ್ಷ ದುಡ್ಡಿಂದ ಕಟ್ಟಿಲ್ಲ. ಜನರ ತೆರಿಗೆ ದುಡ್ಡಲ್ಲಿ ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ” ಎಂದಿದ್ದರು.

ಈ ಹೇಳಿಕೆಯ ವಿರುದ್ದ ಜಗದೇವ್ ಗುತ್ತೇದಾರ್ ದೂರು ದಾಖಲಿಸಿದ್ದು, ಸೂಲಿಬೆಲೆ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಸೂಲಿಬೆಲೆ ಗಡಿಪಾರಿಗೆ ಕಾಂಗ್ರೆಸ್ ಆಗ್ರಹ:

“ಅಯೋಗ್ಯ ಚಕ್ರವರ್ತಿ ಸೂಲಿಬೆಲೆ ಎನ್ನುವ ಸಮಾಜದ ಕೊಳಕು ಕ್ರಿಮಿಯೊಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ. ಸುಳ್ಳುಗಳನ್ನು ಹಬ್ಬಿಸುತ್ತಾ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಲ್ಲಿ ಮನವಿ ಮಾಡುತ್ತೇವೆ” ಎಂದು ಕಾಂಗ್ರೆಸ್‌ ಎಕ್ಸ್‌ ಮೂಲಕ ಹೇಳಿದೆ.

ಇದನ್ನೂ ಓದಿ : ಶಾಸಕ ರಮೇಶ್‌ ಜಾರಕಿಹೊಳಿಯಿಂದ ವಂಚನೆ ಆರೋಪ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...