Homeಮುಖಪುಟಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

ಪ್ರಧಾನಿ ಮೋದಿ ಸೇರಿದಂತೆ ಹಲವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಕಾಂಗ್ರೆಸ್

- Advertisement -
- Advertisement -

“ಪಕ್ಷದ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಸಿದ್ಧಾಂತವನ್ನು ಪ್ರತಿ ಬಿಂಬಿಸುತ್ತದೆ ಮತ್ತು ಪ್ರತಿ ಪುಟವು ಭಾರತವನ್ನು ತುಂಡು ತುಂಡಾಗಿಸುವ ಅಂಶವನ್ನು ಹೊಂದಿದೆ” ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ರಾಜ್ಯಸಭಾ ಸಂಸದರಾದ ಮುಕುಲ್ ವಾಸ್ನಿಕ್, ಪವನ್ ಖೇರಾ ಮತ್ತು ಗುರುದೀಪ್ ಸಪ್ಪಲ್ ಅವರ ನಿಯೋಗವು ಚುನಾವಣಾ ಆಯೋಗದ ಕೇಂದ್ರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ.

ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಬಿಜೆಪಿಯು ಚುನಾವಣಾ ಪ್ರಚಾರದಲ್ಲಿ ಸಶಸ್ತ್ರ ಪಡೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ತನ್ನ ದೂರಿನಲ್ಲಿ ಆರೋಪಿಸಿದೆ.

ಕೇಂದ್ರ ಸಚಿವ ಮತ್ತು ಬಿಜೆಪಿಯ ತಿರುವನಂತಪುರಂ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ‘ಚುನಾವಣಾ ಅಫಿಡವಿಟ್‌ನಲ್ಲಿ ತಮ್ಮ ಆರ್ಥಿಕ ಸ್ಥಿತಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ್ದಾರೆ’ ಎಂದು ಕಾಂಗ್ರೆಸ್ ಮತ್ತೊಂದು ದೂರು ದಾಖಲಿಸಿದೆ.

‘ವಿಕಸಿತ ಭಾರತ @ 2047: ಯುವ ಜನರ ಧ್ವನಿ ಅಭಿಯಾನ’ ಅಡಿಯಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ವಿವಿಧ ಕಾಲೇಜುಗಳಲ್ಲಿ ಅಳವಡಿಸಲಾದ ಪ್ರಧಾನಿಯವರ ಬೃಹತ್ ಗಾತ್ರದ ಹೋರ್ಡಿಂಗ್‌ಗಳು ಮತ್ತು ಬ್ಯಾನರ್‌ಗಳ ವಿಷಯವನ್ನೂ ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದಿದೆ.

ದೂರ ದರ್ಶನದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಪ್ರಸಾರಕ್ಕೆ ಮುಂದಾಗಿರುವುದರ ವಿರುದ್ದವೂ ಕಾಂಗ್ರೆಸ್ ದೂರು ನೀಡಿದ್ದು, “ಇದು ಧಾರ್ಮಿಕ ಸಮುದಾಯವನ್ನು ನಿಂದಿಸುವ ಮತ್ತು ದೇಶದಲ್ಲಿ ಲವ್ ಜಿಹಾದ್ ಎಂಬ ಕಾಲ್ಪನಿಕ ವಿಷಯವನ್ನು ದೊಡ್ಡದಾಗಿ ಬಿಂಬಿಸುತ್ತದೆ ಎಂದಿದೆ. ಇಂತಹ ಚಲನಚಿತ್ರಗಳನ್ನು ಪ್ರಸಾರ ಮಾಡುವುದರಿಂದ ಮತದಾರರನ್ನು ಧ್ರುವೀಕರಿಸಬಹುದು, ಧಾರ್ಮಿಕ ಗುರುತಿನ ರೀತಿಯಲ್ಲಿ ಕೋಮು ವೈಷಮ್ಯವನ್ನು ಉಂಟು ಮಾಡಬಹುದು. ಇದು ಸಂಪೂರ್ಣವಾಗಿ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳ ಮನೋಭಾವ ಮತ್ತು ಮಾದರಿ ನೀತಿ ಸಂಹಿತೆಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ತ್ರಿಪುರಾದ ಪಶ್ಚಿಮ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿರುದ್ಧವೂ ಕಾಂಗ್ರೆಸ್ ದೂರು ದಾಖಲಿಸಿದೆ. ಚುನಾವಣಾಧಿಕಾರಿ ಚುನಾವನಾ ಬ್ಯಾನರ್‌ ಮತ್ತು ಪೋಸ್ಟರ್‌ಗಳನ್ನು ಪ್ರಕಟಿಸುವ ಮಾರಾಟಗಾರರ ನಡುವೆ ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲು ಅಭ್ಯರ್ಥಿಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದೆ.

ಇದನ್ನೂ ಓದಿ : ಮೋದಿ-ಶಾ ಅವರ ಸೈದ್ಧಾಂತಿಕ ಪೂರ್ವಜರು ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ವಿರುದ್ಧ ಬ್ರಿಟಿಷರು, ಮುಸ್ಲಿಂ ಲೀಗ್‌ನ್ನು ಬೆಂಬಲಿಸಿದರು: ಪ್ರಣಾಳಿಕೆ ಕುರಿತ ಟೀಕೆಗೆ ಖರ್ಗೆ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...