Homeಕರ್ನಾಟಕಕಾಂಗ್ರೆಸ್ ಸರಕಾರ ಇರುವವರೆಗೆ ರಾಜ್ಯದ ಜನತೆಗೆ 5 'ಗ್ಯಾರಂಟಿ ಸ್ಕೀಂ' ಸಿಗಲಿದೆ: ಡಿ.ಕೆ ಶಿವಕುಮಾರ್

ಕಾಂಗ್ರೆಸ್ ಸರಕಾರ ಇರುವವರೆಗೆ ರಾಜ್ಯದ ಜನತೆಗೆ 5 ‘ಗ್ಯಾರಂಟಿ ಸ್ಕೀಂ’ ಸಿಗಲಿದೆ: ಡಿ.ಕೆ ಶಿವಕುಮಾರ್

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವವರೆಗೆ ಐದು ʼಗ್ಯಾರಂಟಿʼ ಯೋಜನೆಗಳು ಮುಂದುವರೆಯಲಿವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದು, ಗ್ಯಾರೆಂಟಿ ಯೋಜನೆಗಳು ರಾಜ್ಯದಲ್ಲಿ ಸ್ಥಗಿತವಾಗಲಿದೆ ಎಂದು ಬಿಜೆಪಿ ಸೃಷ್ಟಿಸುತ್ತಿರುವ ಊಹಾಪೋಹಗಳಿಗೆ ಸ್ಪಷ್ಟನೆಯನ್ನು ನೀಡಿದ್ದಾರೆ.

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ನಗರದ ಅಲ್ಲಮ್ಮ ಪ್ರಭು ಆವರಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ  ಡಿಸಿಎಂ ಡಿ.ಕೆ ಶಿವಕುಮಾರ್, ಗ್ಯಾರಂಟಿಗಳನ್ನು ಜಾತಿ ಮೇಲೆ ಕೊಟ್ಟಿಲ್ಲ. ಕಾಂಗ್ರೆಸ್ ಸರಕಾರ ಎಲ್ಲಾ ವರ್ಗದ ಬಗ್ಗೆಯೂ ಚಿಂತನೆ ಮಾಡಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಏನೇ ಟೀಕೆ ಮಾಡಬಹುದು. ಕಾಂಗ್ರೆಸ್ ಸರಕಾರ ಗಟ್ಟಿಯಾಗಿದೆ. ಈ ಐದು ವರ್ಷವಲ್ಲ, ಇನ್ನೊಂದು ಸಲ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಯವರು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಬಡವರ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ ಹಾಗಾಗಿ ರಾಜಕಾರಣದಲ್ಲಿ ಧರ್ಮ ಇರಬಾರದು.  ದೇವಸ್ಥಾನ ಯಾರ ಆಸ್ತಿಯಲ್ಲ. ರಾಮಮಂದಿರ ಮೇಲೆ ಬಹಳ ಪ್ರಚಾರ ಮಾಡಲು ಬಿಜೆಪಿ ಮುಂದಾಗಿದೆ. ಅರಣ್ಯ ಭೂಮಿ ಹಕ್ಕಿನ ಅರ್ಜಿಯ ಮಾನ್ಯತೆ ಮಿತಿಯನ್ನು 25 ವರ್ಷಕ್ಕೆ ಇಳಿಸಬೇಕು ಎಂದು ನಿರ್ಣಯ ಮಾಡಿ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಶರಾವತಿ ಮುಳುಗಡೆ ಸಂತ್ರಸ್ಥರ ರಕ್ಷಣೆ ಸರಕಾರದ ಕರ್ತವ್ಯ, ಬದ್ದತೆಯೂ ಹೌದು. ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಅವಕಾಶ ನೀಡುವುದಿಲ್ಲ. ಇದು ನಮ್ಮ ಸರಕಾರದ ಜವಾಬ್ದಾರಿ ಎಂದು ಶಿವಕುಮಾರ್‌ ಅವರು ಹೇಳಿದ್ದಾರೆ.

ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಹೋದಳು. ಕರ್ನಾಟಕ ಪ್ರಬುದ್ಧವಾಯಿತು. ಸಮೃದ್ಧಿಯಾಯಿತು ಎಂದೂ ಕವಿತೆ ವಾಚಿಸಿದರು. ಗ್ಯಾರಂಟಿ ಯೋಜನೆಗಳನ್ನು ಅಲ್ಪಸಂಖ್ಯಾತರಿಗೆ ಕೊಟ್ಟಿರುವುದಕ್ಕೆ ಬಿಜೆಪಿಯವರು ವಿರೋಧ ಮಾಡುತ್ತಾರೆ. ಆ ಸಮುದಾಯದವರು ತೆರಿಗೆ ಕಟ್ಟುವುದಿಲ್ಲವೇ ಎಂದು ಪ್ರಶ್ನಿಸಿದ ಡಿಕೆ ಶಿವಕುಮಾರ್‌, ಬಿಜೆಪಿಯವರು ಈ ರಾಜ್ಯದ ಜನರಿಗೆ ನೀಡಿದ ಕಾರ್ಯಕ್ರಮ ಏನು ಎಂಬುದನ್ನು ಹೇಳಬೇಕು. ನಾನು ಇಷ್ಟೆಲ್ಲಾ ಯೋಜನೆಗಳನ್ನು ಹೇಳುತ್ತೇನೆ. ಆದರೆ ನಿಮ್ಮ ಶಾಸಕ ಆರಗ ಜ್ಞಾನೇಂದ್ರ ಇದು 420 ಗ್ಯಾರಂಟಿ ಎಂದು ಹೇಳುತ್ತಾರೆ. ಆರಗ ಜ್ಞಾನೇಂದ್ರ ನಿನಗೆ ಜ್ಞಾನ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಕಾಂಗ್ರೆಸ್ ವಕ್ತಾರ ನಿಕೇತರಾಜ್ ಮೌರ್ಯ, ಆಯನೂರು ಮಂಜುನಾಥ್ ಸೇರಿ ಹಲವು ಕಾಂಗ್ರೆಸ್‌ ನಾಯಕರು ಉಪಸ್ಥಿತರಿದ್ದರು.

ಇದನ್ನು ಓದಿ: ದಲಿತರ ಬಗ್ಗೆ ಕೇಂದ್ರ ಸರಕಾರ ಹಗೆತನದ ಧೋರಣೆ ಅನುಸರಿಸುತ್ತಿದೆ: ಪಿಣರಾಯ್‌ ವಿಜಯನ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...