Homeಮುಖಪುಟಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ರಾಹುಲ್ ಗಾಂಧಿ, ಖರ್ಗೆ ಭಾಗಿ

ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ರಾಹುಲ್ ಗಾಂಧಿ, ಖರ್ಗೆ ಭಾಗಿ

- Advertisement -
- Advertisement -

ಕರ್ನಾಟಕ ಕಾಂಗ್ರೆಸ್ ಸರಕಾರದ ಮಹತ್ವದ ಐದು ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗೃಹಲಕ್ಷ್ಮಿ ಖಾತೆಗೆ ಬಟನ್ ಹೊತ್ತಿ 2 ಸಾವಿರ ರೂ. ಚೆಕ್ ಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತವಾಗಿ ಯೋಜನೆಗೆ ಚಾಲನೆ ನೀಡಿದರು. ಈ ವೇಳೆ ರಾಹುಲ್ ಗಾಂಧಿ ಗೃಹಲಕ್ಷ್ಮಿಯರ ಖಾತೆಗೆ ನೇರ ಹಣ ವರ್ಗಾವಣೆ ಮಾಡಿದ್ದಾರೆ.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಗೃಹ ಸಚಿವ ಡಾ.ಜಿ‌ಪರಮೇಶ್ವರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೃಷಿ ಸಚಿವ, ಮಂಡ್ಯ ಜಿಲ್ಲಾ ಉಸ್ತುವಾರಿ ಚಲುವರಾಯಸ್ವಾಮಿ, ಪಶುಸಂಗೋಪನಾ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ  ಕೆ.ವೆಂಕಟೇಶ್, ಸಣ್ಣ ನೀರಾವರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಕಂದಾಯ ಸಚಿವ ಕೃಷ್ಣ ಭೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸೇರಿದಂತೆ ರಾಜ್ಯ ಸಚಿವ ಸಂಪುಟದ ಸಚಿವರುಗಳು ಭಾಗಿಯಾಗಿದ್ದರು.

ಇದಕ್ಕೆ ಮೊದಲು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಸಿಎಂ ಸಿದ್ದರಾಮಯ್ಯ,  ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ ಗೃಹಲಕ್ಷ್ಮಿ ಯೋಜನೆಯಿಂದ ಸ್ವತಂತ್ರ, ಸ್ವಾವಲಂಬಿ ಬದುಕಿಗೆ ಪಾದಾರ್ಪಣೆ‌ ಮಾಡಲಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ 2000 ರೂಪಾಯಿಗಳನ್ನು ನೇರವಾಗಿ ವರ್ಗಾವಣೆ ಮಾಡಿ ನುಡಿದಂತೆ ನಡೆಯಲಿದೆ. ಇದೊಂದು ಐತಿಹಾಸಿಕ ದಿನ. ಕಾರ್ಯಕ್ರಮದ ಚಾಲನೆಗೆ ಇನ್ನೇನು ಕೆಲವೇ ನಿಮಿಷಗಳು ಉಳಿದಿರುವ ಈ ಹೊತ್ತಿನಲ್ಲಿ ನಾಡಿನ ತಾಯಂದಿರ ಮುಖದಲ್ಲಿ ಮೂಡುವ ನೆಮ್ಮದಿಯ ನಗೆ ಕಾಣಲು ಉತ್ಸುಕನಾಗಿದ್ದೇನೆ ಎಂದು ಬರೆದಿದ್ದರು.

ಇದನ್ನು ಓದಿ: ಅರುಣಾಚಲ ಪ್ರದೇಶ ಸೇರಿಸಿ ಚೀನಾ ಮ್ಯಾಪ್ ರಿಲೀಸ್: ಮೋದಿ ಪ್ರತಿಕ್ರಿಯಿಸುವಂತೆ ರಾಹುಲ್ ಗಾಂಧಿ ಆಗ್ರಹ 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...