Homeಕರ್ನಾಟಕಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

ಇಂದಿರಮ್ಮನ ಕಾಲದಿಂದಲೂ ಲಿಂಗತ್ವ ಅಲ್ಪಸಂಖ್ಯಾತರ ಜೊತೆ ಇದ್ದದ್ದು ಕಾಂಗ್ರೆಸ್‌: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಕ್ಕಯ್‌ ಮನದಾಳ

- Advertisement -
- Advertisement -

ಲಿಂಗತ್ವ ಅಲ್ಪಸಂಖ್ಯಾತರ ದಿಟ್ಟ ದನಿ ‘ಅಕ್ಕಯ್‌ ಪದ್ಮಶಾಲಿ’ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಕಾಂಗ್ರೆಸ್‌ ನಾಯಕರು ನೇಮಿಸಿದ್ದಾರೆ. ಈ ರೀತಿಯ ರಾಜಕೀಯ ಸ್ಥಾನವಮಾನವನ್ನು ಪಡೆದ ಮೊದಲ ಲಿಂಗತ್ವ ಅಲ್ಪಸಂಖ್ಯಾತರಾಗಿಯೂ ‘ಅಕ್ಕಯ್‌’ ಗುರುತಿಸಿಕೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಅಕ್ಕಯ್‌ ಪದ್ಮಶಾಲಿ ಅವರನ್ನು ‘ನಾ ನಾಯಕಿ’ ಕಾರ್ಯಕ್ರಮದ ರಾಜ್ಯ ಸಂಚಾಲಕರನ್ನಾಗಿ ನೇಮಿಸಿದ್ದರು. ಈಗ ಮತ್ತೊಂದು ಗುರುತರ ಜವಾಬ್ದಾರಿಯನ್ನು ಅಕ್ಕಯ್‌ ಅವರಿಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ನೀಡಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅಕ್ಕಯ್‌ ಅವರು, ತಮ್ಮ ಮುಂದಿನ ಗುರಿ ಹಾಗೂ ಉದ್ದೇಶಗಳನ್ನು ಹಂಚಿಕೊಂಡರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಲಿಂಗತ್ವ ಅಲ್ಪಸಂಖ್ಯಾತಳು. ಸಾಮಾಜಿಕ, ರಾಜಕೀಯ ಹಕ್ಕುಗಳ ಹೋರಾಟಗಾರ್ತಿಯಾಗಿ ಹಲವು ಸವಾಲುಗಳು ನನ್ನ ಮುಂದಿವೆ. ಇಂದು ಜಾತಿ, ಧರ್ಮ, ವರ್ಗ, ಜನಾಂಗೀಯ ಆಧಾರದಲ್ಲಿ, ತಿನ್ನುವ ಆಹಾರದಲ್ಲಿ ಸಮಸ್ಯೆಗಳನ್ನು ಹುಟ್ಟುಹಾಕಲಾಗುತ್ತಿದೆ. ಈ ಅಸಹಿಷ್ಣುತೆಯ ಕಾಲದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸ್ಥಿತಿ ಇನ್ನೂ ಶೋಚನೀಯವಾಗಿದೆ. ಸಮಾಜದ ಎಲ್ಲ ಶೋಷಿತರ ಪರ ಹೋರಾಟ ಮುಂದುವರಿಸುತ್ತೇನೆ” ಎಂದರು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರೊಂದಿಗೆ ಅಕ್ಕಯ್ ಪದ್ಮಶಾಲಿಯವರು ಮಾತನಾಡುತ್ತಿರುವುದು.

“ಇತರ ಪಕ್ಷಗಳಿಗಿಂತ ಮೊದಲಿಗೆ ಕಾಂಗ್ರೆಸ್, ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಧನ್ಯವಾದಗಳು” ಎಂದ ಅವರು, “ಶೋಷಿತರಲ್ಲೇ ಶೋಷಿತರಾದ ನಮ್ಮನ್ನು ಕಂಡರೆ ಸಮಾಜದಲ್ಲಿ ತಾತ್ಸಾರದ ಮನೋಭಾವ ಇದೆ, ಮಹಿಳಾ ವಿರೋಧಿ ನೀತಿಗಳು ದೇಶದಲ್ಲಿವೆ. ಅದರ ವಿರುದ್ಧ ಹೋರಾಟಬೇಕಿದೆ” ಎಂದು ತಿಳಿಸಿದರು.

“ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಸ್ಥಾನಮಾನ ಅನುಷ್ಠಾನವಾಗಿಲ್ಲ. ಆದರೆ ಮಹಿಳೆಯರನ್ನು ಮುಖ್ಯವಾಹಿನಿಗೆ ತರಲು ಡಿ.ಕೆ.ಶಿವಕುಮಾರ್‌ ಅವರು ‘ನಾ ನಾಯಕಿ’ ಕಾರ್ಯಕ್ರಮ ಆರಂಭಿಸಿದರು. ಅವರ ಕನಸು ನನಸು ಮಾಡುವತ್ತ ಗಮನ ಹರಿಸಿದ್ದೇನೆ. ‘ನಾ ನಾಯಕಿ’ ಕಾರ್ಯಕ್ರಮಕ್ಕೆ ರಾಜ್ಯ ಸಂಯೋಜಕಿಯನ್ನಾಗಿ ನೇಮಿಸಲಾಗಿತ್ತು. ಈಗ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಲೈಂಗಿಕ ಅಲ್ಪಸಂಖ್ಯಾತರೂ ಸಮಾನರೆಂಬ ಸಿದ್ಧಾಂತ ಕಾಂಗ್ರೆಸ್‌ನದ್ದು. ಇದಕ್ಕೆ ನಾನು ಆಭಾರಿಯಾಗಿದ್ದೇನೆ” ಎಂದು ಹೇಳಿದರು.

“ದೇಶದಲ್ಲಿ ಅಸಹಿಷ್ಣುತೆ ಇದೆ. ಮಹಿಳೆಯ ಹಿಜಾಬ್‌, ರೈತ ವಿರೋಧಿ ಕಾಯ್ದೆಗಳು, ಹೆಣ್ಣುಮಕ್ಕಳ ಶಿಕ್ಷಣ, ಮದುವೆ, ಮಕ್ಕಳ ಸಾಗಾಣಿಕೆ, ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದಂತೆ ದನಿ ಎತ್ತಬೇಕಿದೆ. ಪಕ್ಷದ ಮೂಲಕ ಏನೆಲ್ಲ ಬದಲಾವಣೆ ತರಲು ಸಾಧ್ಯವಾಗುತ್ತದೆಯೋ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ” ಎನ್ನುತ್ತಾರೆ ಅಕ್ಕಯ್‌.

“ನಮ್ಮಂಥ ಅಲ್ಪಸಂಖ್ಯಾತರಲ್ಲೇ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷ ಬಿಟ್ಟರೆ ಬೇರೆಡೆ ಜಾಗವಿಲ್ಲ. ರಾಜಕೀಯಕ್ಕಾಗಿ ಈ ಮಾತು ಹೇಳುತ್ತಿಲ್ಲ. ಕಾಂಗ್ರೆಸ್‌ ಪಕ್ಷ ಸಮುದಾಯಕ್ಕೆ ನೀಡಿದ ಬೆಂಬಲವನ್ನು ಅನುಭವಿಸಿ ಹೇಳುತ್ತಿದ್ದಾರೆ. ನಮ್ಮ ಸಮುದಾಯದ ರಾಜಕೀಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದರು. ಆದರೆ ನಮಗೂ ರಾಜಕೀಯ ಸ್ಥಾನವಿದೆ ಎಂದು ತೋರಿಸಿಕೊಟ್ಟವರು ಡಿ.ಕೆ.ಶಿವಕುಮಾರ್‌. ಹೀಗಾಗಿ ಯುವಕರು, ಮಹಿಳೆಯರು, ಮಕ್ಕಳು, ದಲಿತರು, ಅಲ್ಪಸಂಖ್ಯಾತರು, ವಿಶೇಷ ಚೇತನರು, ಲೈಂಗಿಕ ಕಾರ್ಮಿಕರು- ಎಲ್ಲರನ್ನೂ ಒಟ್ಟಿಗೆ ತರುವ ಕೆಲಸ ಮಾಡುತ್ತೇನೆ” ಎಂದು ತಮ್ಮ ಗುರಿಯನ್ನು ಹಂಚಿಕೊಂಡರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಅಕ್ಕಯ್ ಪದ್ಮಶಾಲಿ ಹಾಗೂ ಇತರ ಕಾಂಗ್ರೆಸ್ ಮುಖಂಡರು.

ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷ ಮೊದಲಿನಿಂದಲೂ ನೀಡಿರುವ ಆದ್ಯತೆಯನ್ನು ಸ್ಮರಿಸಿದ ಅವರು, “ಇಂದಿರಾ ಗಾಂಧಿಯಮ್ಮನ ಫೋಟೋವನ್ನು ಸಮುದಾಯದ ಪ್ರತಿ ಮನೆಯಲ್ಲೂ ಕಾಣಬಹುದು” ಎಂದರು.

“ಇಂದಿರಾ ಗಾಂಧಿಯವರು ಮನೆ ಇಲ್ಲದವರಿಗೆ ಮನೆ ಕೊಟ್ಟರು. ಟ್ರೈನ್‌ನಲ್ಲಿ ಉಚಿತವಾಗಿ ಓಡಾಡುವ ಅವಕಾಶ ನೀಡಿದರು. ಇಂದಿರಾ ಗಾಂಧಿಯಮ್ಮನನ್ನು ಲೈಂಗಿಕ ಅಲ್ಪಸಂಖ್ಯಾತರು ಸದಾ ನೆನೆಯುತ್ತಾರೆ” ಎಂದು ತಮ್ಮ ಹೋರಾಟದ ಬದುಕನ್ನು ಮೆಲುಕು ಹಾಕಿದರು.

ಇದನ್ನೂ ಓದಿರಿ: ರಾಮ ದೇವರಲ್ಲ, ಕಥೆಯಲ್ಲಿನ ಕಾಲ್ಪನಿಕ ಪಾತ್ರವಷ್ಟೆ: ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಜಿ

“ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 377 ನಮ್ಮನ್ನು ಅಪರಾಧೀಕರಣಗೊಳಿಸಿತ್ತು. ಈ ಸಮುದಾಯದ ಪರವಾಗಿ ನಿಲ್ಲುವ ನಿರ್ಧಾರವನ್ನು 2005ನೇ ಇಸವಿಯಲ್ಲಿ ಕಾಂಗ್ರೆಸ್‌ ಪಕ್ಷ ಮಾಡಿತು. 2009ನೇ ಇಸವಿಯಲ್ಲಿ ದೆಹಲಿ ಹೈಕೋರ್ಟ್ ನಮ್ಮ ಪರ ತೀರ್ಪು ನೀಡಿದಾಗ ಕಾಂಗ್ರೆಸ್ ಪಕ್ಷ ನೇರವಾಗಿ ನಮ್ಮ ಸಮುದಾಯಕ್ಕೆ ಸಹಕಾರ ನೀಡಿತು. ಬೇರೆ ಯಾವುದೇ ಪಕ್ಷ ನಮ್ಮೊಂದಿಗೆ ಬಂದು ನಿಲ್ಲಲಿಲ್ಲ. ಸ್ವಲ್ಪ ಸಮಯದ ನಂತರ ಸಿಪಿಐ, ಸಿಪಿಎಂ ಹಾಗೂ ಜೆಡಿಎಸ್‌ ಬೆಂಬಲ ನೀಡಿದವು. ಎಚ್‌.ಡಿ.ದೇವೇಗೌಡರು ಹಾಗೂ ಎಚ್‌.ಡಿ.ಕುಮಾರಸ್ವಾಮಿಯವರ ಸಹಾಯವನ್ನು ನೆನೆಯುತ್ತೇನೆ. ಸದಾ ನಮ್ಮೊಂದಿಗಿದ್ದ ಪಕ್ಷ, ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯವನ್ನು ನೀಡಿರುವುದು ಮಹತ್ತರ ಬೆಳವಣಿಗೆ” ಎಂದು ಅಭಿಪ್ರಾಯಪಡುತ್ತಾರೆ ಅಕ್ಕಯ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...