Homeಮುಖಪುಟಕಾಂಗ್ರೆಸ್ ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ

ಕಾಂಗ್ರೆಸ್ ದ್ವೇಷ ಹರಡುವ ಕಾರ್ಖಾನೆ: ಪ್ರಧಾನಿ ಮೋದಿ

- Advertisement -
- Advertisement -

ಕಾಂಗ್ರೆಸ್ ಅನ್ನು ಬೇಜವಾಬ್ದಾರಿ ಪಕ್ಷ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಬಯಸುತ್ತಿರುವ “ದ್ವೇಷವನ್ನು ಹರಡುವ” ಕಾರ್ಖಾನೆ ಎಂದು ಬುಧವಾರ ಹೇಳಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಯನ್ನು ಆನ್‌ಲೈನ್ ಮೂಲಕ ಉದ್ಘಾಟಿಸುವ ವೇಳಿ ಈ ಹೇಳಿಕೆ ನೀಡಿರುವ ಅವರ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರಿ ಕಾರ್ಯಕ್ರಮದಲ್ಲಿ ”ರಾಜಕೀಯ ಭಾಷಣ” ಮಾಡಿದ್ದಾರೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೋದಿ ಈ ಹೇಳಿಕೆಗಳ ವಿರುದ್ಧ ತಿರುಗೇಟು ನೀಡಿರುವ ಕಾಂಗ್ರೆಸ್, ತೆರಿಗೆದಾರರ ಹಣವನ್ನು “ರಾಜಕೀಯ ಭಾಷಣ” ದಲ್ಲಿ ತೊಡಗಿಸಿಕೊಳ್ಳಬಾರದು ಎಂದು ಹೇಳಿದೆ. ರಾಜಕೀಯ ಭಾಷಣ ಮಾಡಲು ಮತ್ತು ಪ್ರತಿಪಕ್ಷಗಳ ಮೇಲೆ ದಾಳಿ ಮಾಡಲು ಪ್ರಧಾನಿ ಮೋದಿ ಸರ್ಕಾರಿ ವೇದಿಕೆ ಮತ್ತು ಸರ್ಕಾರಿ ಕಾರ್ಯಕ್ರಮವನ್ನು ಏಕೆ ಬಳಸಬೇಕು? ಎಂದು ಕೇಳಿದೆ.

ಇದನ್ನೂಓದಿ: ರಾಹುಲ್ ಗಾಂಧಿ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯಾವಕಾಶ ನೀಡಿದ ದೆಹಲಿ ಹೈಕೋರ್ಟ್

ಬುಧವಾರ ಮುಂಜಾನೆ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ದೇಶದ ಮನಸ್ಥಿತಿಯನ್ನು ತೋರಿಸುತ್ತದೆ. “ಮಹಾರಾಷ್ಟ್ರದಲ್ಲಿ ಕೂಡಾ ನಾವು ದೊಡ್ಡ ಗೆಲುವು ಪಡೆಯಬೇಕು” ಎಂದು ಅವರು ಹೇಳಿದ್ದಾರೆ. ವಿರೋಧ ಪಕ್ಷವಾದ ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರ ಪಡೆಯಲು ಮಹಾರಾಷ್ಟ್ರವನ್ನು ದುರ್ಬಲಗೊಳಿಸಲು ಬಯಸಿದೆ, ಆದರೆ ಆಡಳಿತಾರೂಢ ಮಹಾಯುತಿಯು ರಾಜ್ಯವನ್ನು ಬಲಪಡಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಯೋಜನೆಗಳ ಈ ರೀತಿಯ ತ್ವರಿತ ಅಭಿವೃದ್ಧಿಯನ್ನು ಮಹಾರಾಷ್ಟ್ರ ಹಿಂದೆಂದೂ ಕಂಡಿರಲಿಲ್ಲ ಎಂದು ಪ್ರತಿಪಾದಿಸಿದ ಮೋದಿ, ಕಾಂಗ್ರೆಸ್ ಆಡಳಿತದಲ್ಲಿ ಭ್ರಷ್ಟಾಚಾರದ ವಿಷಯದಲ್ಲಿ ಅದೇ ವೇಗ ಇತ್ತು ಎಂದು ಹೇಳಿದ್ದಾರೆ. “ಕಾಂಗ್ರೆಸ್ ಬೇಜವಾಬ್ದಾರಿ ಪಕ್ಷವಾಗಿದ್ದು, ಅದು ದ್ವೇಷವನ್ನು ಹರಡುವ ಕಾರ್ಖಾನೆಯಾಗಿದೆ. ಕಾಂಗ್ರೆಸ್‌ಗೆ ಅಭಿವೃದ್ಧಿ ಮತ್ತು ಪರಂಪರೆಯ ಬಗ್ಗೆ ಕಾಳಜಿಯಿಲ್ಲ, ಆದರೆ ನಾವು ಎರಡಕ್ಕೂ ಗಮನ ಹರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಡವರು, ರೈತರು, ಯುವಕರು ಮತ್ತು ಮಹಿಳೆಯರ ಅಭಿವೃದ್ಧಿಯೊಂದಿಗೆ ವಿಕ್ಷಿತ್ ಭಾರತ್ ನಮ್ಮ ಗುರಿಯಾಗಿದೆ. ಕಾಂಗ್ರೆಸ್ ಮುಸ್ಲಿಮರಲ್ಲಿ ಭಯವನ್ನು ಹುಟ್ಟುಹಾಕುತ್ತದೆ ಮತ್ತು ಅವರನ್ನು ತನ್ನ ಮತಬ್ಯಾಂಕ್ ಆಗಿ ಪರಿವರ್ತಿಸುತ್ತದೆ. ಅದು ಹಿಂದೂಗಳನ್ನು ವಿಭಜಿಸಲು ಮತ್ತು ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಎತ್ತಿಕಟ್ಟಲು ಬಯಸುತ್ತದೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಎಎಪಿ

ಪ್ರಧಾನಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು “ರಾಜಕೀಯ ಭಾಷಣ ಮಾಡಲು ಮತ್ತು ಪ್ರತಿಪಕ್ಷಗಳ ಮೇಲೆ ದಾಳಿ ಮಾಡಲು ಪ್ರಧಾನಿ ಕಚೇರಿಯು ಸರ್ಕಾರಿ ವೇದಿಕೆ ಮತ್ತು ಸರ್ಕಾರಿ ಕಾರ್ಯಕ್ರಮವನ್ನು ಏಕೆ ಬಳಸಬೇಕು?” ಎಂದು ಕೇಳಿದ್ದಾರೆ.

“ತೆರಿಗೆದಾರರ ಹಣವನ್ನು ರಾಜಕೀಯ ಭಾಷಣದಲ್ಲಿ ತೊಡಗಿಸಿಕೊಳ್ಳಲು ಬಳಸಬಾರದು. ಅದಕ್ಕಾಗಿ ಅವರು ಬಿಜೆಪಿಯ ವೇದಿಕೆಯನ್ನು ಬಳಸಬೇಕು” ಎಂದು ಪವನ್‌ ಖೇರಾ ಹೇಳಿದ್ದಾರೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಮುಂದಿನ ತಿಂಗಳು ಚುನಾವಣೆ ನಡೆಯುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಮಹಾರಾಷ್ಟ್ರದಲ್ಲಿ 7,600 ಕೋಟಿ ರೂ.ಗಿಂತ ಹೆಚ್ಚಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಆನ್‌ಲೈನ್ ಮೂಲಕ ಶಂಕುಸ್ಥಾಪನೆ ಮಾಡಿದ್ದಾರೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...