Homeಮುಖಪುಟಇಂದೋರ್‌ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಹಿಂಪಡೆಯಲು ಬೆದರಿಕೆ, ಚಿತ್ರಹಿಂಸೆ ಕಾರಣ?

ಇಂದೋರ್‌ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಹಿಂಪಡೆಯಲು ಬೆದರಿಕೆ, ಚಿತ್ರಹಿಂಸೆ ಕಾರಣ?

- Advertisement -
- Advertisement -

ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ಅವರು ಸೋಮವಾರ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದು, ಅವರನ್ನು ಬೆದರಿಸಿ ಚಿತ್ರಹಿಂಸೆ ನೀಡಿ ನಾಮಪತ್ರ ಹಿಂಪಡೆಯುವಂತೆ ಮಾಡಲಾಗಿದೆ ಎಂದು ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ ಜಿತು ಪಟ್ವಾರಿ  ಆರೋಪಿಸಿದ್ದಾರೆ.

ನಿನ್ನೆ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಾಮ್ ತಮ್ಮ ನಾಮಪತ್ರ ಹಿಂಪಡೆಯುವ ಮೂಲಕ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು. ಮೂರು ದಿನಗಳ ಹಿಂದೆ, ಬಾಮ್ ವಿರುದ್ಧದ ಹಳೆಯ ಪ್ರಕರಣಕ್ಕೆ ಸಂಬಂಧಿಸಿ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ಸೆಕ್ಸನ್‌ನ್ನು ಸೇರಿಸಲಾಗಿದೆ. ಅವರಿಗೆ ಬೆದರಿಕೆ ಹಾಕಲಾಗಿದೆ. ಇಡೀ ರಾತ್ರಿ ಅವರಿಗೆ ವಿವಿಧ ರೀತಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಮತ್ತು ಇದರಿಂದಾಗಿ ಅವರು ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ ಎಂದು ಪಟ್ವಾರಿ ಆರೋಪಿಸಿದ್ದಾರೆ.

ಬಾಮ್ ಮತ್ತು ಅವರ ತಂದೆ ಕಾಂತಿಲಾಲ್ ಮತ್ತು ಇತರರ ವಿರುದ್ಧ ಅಕ್ಟೋಬರ್ 2007ರಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಇದೇ ಕೇಸ್‌ಗೆ ಸಂಬಂಧಿಸಿ ಓರ್ವ ಆರೋಪಿ ಪೈರಿಂಗ್‌ ಮಾಡಿದ್ದಾರೆ ಎಂದು 307 ಸೆಕ್ಸನ್‌ನ್ನು ಸೇರಿಸಲು ದೂರುದಾರೆ ಏಪ್ರಿಲ್ 5ರಂದು ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ(ಜೆಎಂಎಫ್‌ಸಿ) ನ್ಯಾಯಾಲಯದ ಮೊರೆ ಹೋಗಿದ್ದರು. ಈ ಮನವಿಯನ್ನು ಏಪ್ರಿಲ್ 24ರಂದು ನ್ಯಾಯಾಲಯ ಅಂಗೀಕರಿಸಿದೆ ಮತ್ತು ಬಾಮ್ ಮತ್ತು ಅವರ ತಂದೆಯನ್ನು ಮೇ 10ರಂದು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಲು ತಿಳಿಸಲಾಗಿದೆ.

ಇದರಲ್ಲಿ ಏನು ಸಂದೇಶವಿದೆ? ಇಂದೋರ್‌ನ ಜನರಿಗೆ ತಮ್ಮ ಮತವನ್ನು ಚಲಾಯಿಸುವ ಹಕ್ಕು ಇಲ್ಲವೇ? ನಿಮಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ದಯವಿಟ್ಟು ಈ ಸರ್ವಾಧಿಕಾರದ ವಿರುದ್ಧ ಸೆಟೆದು ನಿಲ್ಲಿ. ಇದು ಕಾಂಗ್ರೆಸ್ ಮತ್ತು ಬಿಜೆಪಿ ವಿಷಯಕ್ಕಲ್ಲ. ಮತ ಚಲಾಯಿಸಲು ಮತ್ತು ಮೀಸಲಾತಿ ಮತ್ತು ಸಂವಿಧಾನವನ್ನು ಬಲವಾಗಿ ಇರಿಸಿಕೊಳ್ಳಲು ಬಯಸುವ ಯಾರಾದರೂ ಎದ್ದು ನಿಲ್ಲಬೇಕು ಎಂದು ಪಟ್ವಾರಿ ಹೇಳಿದ್ದಾರೆ.

ಗುಜರಾತ್‌ನ ಸೂರತ್‌ನಲ್ಲಿ ಇದೇ ರೀತಿಯ ಘಟನೆ ನಡೆದಿದೆ. ಸೂರತ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ತನ್ನ ನಾಮಪತ್ರದಲ್ಲಿ ಮೂವರು ಅನುಮೋದಕರ ಸಹಿಯಲ್ಲಿ ಅಕ್ರಮ ಮಾಡಿದ್ದಾರೆ ಎಂದು ಅವರ ನಾಮಪತ್ರ ತಿರಸ್ಕರಿಸಲಾಗಿತ್ತು. ಇದರ ಬೆನ್ನಲ್ಲಿ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಸಂಸದರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಬಿಜೆಪಿ ತನ್ನನ್ನು ತಾನೇ ಹೊಗಳಿಕೊಳ್ಳುತ್ತಿದೆ ಆದರೆ ತಮ್ಮ ಮತದ ಬಲದಿಂದ ಸಂಸದರನ್ನು ಆಯ್ಕೆ ಮಾಡಲು ಬಯಸಿದ ಸೂರತ್‌ನ ಜನರು ಮಾಡಿದ ತಪ್ಪೇನು? ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಬಿಜೆಪಿ ಸೇರುತ್ತಿರುವುದನ್ನು ಪ್ರಶ್ನಿಸಿದ ಪಟ್ವಾರಿ, ಆಡಳಿತ ವ್ಯವಸ್ಥೆಯು ಅಧಿಕೃತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನ ಅಪಾಯದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

0
ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ. ಭಾರತದಾದ್ಯಂತ ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ...