Homeಮುಖಪುಟಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ: ಕನ್ಹಯ್ಯ ಕುಮಾರ್

ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಇದನ್ನು ತಡೆಯಲು ಕಾಂಗ್ರೆಸ್ ಸೇರುತ್ತಿದ್ದೇನೆ - ಜಿಗ್ನೇಶ್ ಮೇವಾನಿ

- Advertisement -
- Advertisement -

ಕಾಂಗ್ರೆಸ್ ಎಂಬುದು ಕೇವಲ ಒಂದು ಪಕ್ಷವಲ್ಲ, ಅದೊಂದು ಆದರ್ಶ. ಈ ದೇಶದ ಅತಿ ಪ್ರಾಚೀನ ಮತ್ತು ಪ್ರಜಾತಾಂತ್ರಿಕ ಪಕ್ಷವಾದ ಕಾಂಗ್ರೆಸ್ ಉಳಿಯದಿದ್ದರೆ, ಈ ದೇಶ ಉಳಿಯುವುದಿಲ್ಲ. ದೊಡ್ಡ ವಿಪಕ್ಷವನ್ನು ಉಳಿಸದಿದ್ದರೇ, ಚಿಕ್ಕ ಚಿಕ್ಕ ಪಕ್ಷಗಳು ಉಳಿಯುವುದಿಲ್ಲ ಎಂದು ಕಾಂಗ್ರೆಸ್ ಪಕ್ಷ ಸೇರಿದ ನಂತರ ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಮ್ಮ ದೇಶಕ್ಕೆ ಭಗತ್‌ ಸಿಂಗ್‌ ರವರ ಸಾಹಸ, ಅಂಬೇಡ್ಕರ್‌ರವರ ಸಮಾನತೆ ಮತ್ತು ಗಾಂಧೀಜಿಯವರ ಐಕ್ಯತೆ ಬೇಕಾಗಿದೆ ಎಂದರು.

ನಾನು ಹಿಂದೆ ಇದ್ದ ಪಕ್ಷಕ್ಕೆ ಅಭಾರಿಯಾಗಿದ್ದೇನೆ. ಅದು ನನಗೆ ಓದು-ಬರಹ ಕಲಿಸಿ ಬೆಳೆಸಿದೆ. ಹೋರಾಡುವುದನ್ನು ಕಲಿಸಿದೆ. ಅದರೊಟ್ಟಿಗೆ ನನ್ನ ಜೊತೆ ನಿಂತ ಲಕ್ಷಾಂತರ ಕಾರ್ಯಕರ್ತರಿಗೂ ಅಭಾರಿಯಾಗಿದ್ದೇನೆ ಎಂದು ಕನ್ಹಯ್ಯ ತಿಳಿಸಿದರು.

ದೇಶದಲ್ಲಿ ಇಂದು ವೈಚಾರಿಕ ಸಂಘ‍ರ್ಷ ನಡೆಯುತ್ತಿದೆ. ಇದಕ್ಕೆ ಕಾಂಗ್ರೆಸ್ ನಾಯಕತ್ವ ನೀಡುತ್ತದೆ. ಆರಾಮ ಖುರ್ಚಿಯಲ್ಲಿ ಕೂತು ಮಾತಾಡುವ ಸಮಯ ಇದಲ್ಲ. ಇದು ತುರ್ತು ಸಂದರ್ಭವಾಗಿದೆ. ಹಾಗಾಗಿ ಈ ದೇಶದ ಕೋಟ್ಯಾಂತರ ಯುವಕರ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದಿದ್ದಾರೆ.

ನಮ್ಮ ಪರಿವಾರವನ್ನು ಬಿಟ್ಟು ದೇಶವನ್ನು ಉಳಿಸಲು ಸಾಧ್ಯವಿಲ್ಲ. ಮನೆ, ಮಠದ ಜೊತೆಗೆ ಇದ್ದು ಇಂದು ಪರಿವಾರ ಕಟ್ಟಬೇಕಿದೆ. ಪರಿವಾರವನ್ನು ಬಿಟ್ಟು ಕಟ್ಟುವ ಪರಿವಾರ ಹೇಗಾಗುತ್ತದೇ…? ಕಸ್ತೂರ ಬಾ ಬಿಟ್ಟು ಹೇಗೆ ಗಾಂಧಿ ಹೋರಾಡಲಿಲ್ಲವೋ ಹಾಗೆ. ಅಂಬೇಡ್ಕರ್ ಪರಿವಾರ ಬಿಟ್ಟು ಬರಲಿಲ್ಲ. ದೇಶದ ಮಹನೀಯರೆಲ್ಲ ಪರಿವಾರದೊಟ್ಟಿಗೆ ಇದ್ದು ಹೋರಾಡಿದ್ದಾರೆ ಎಂದರು.

ನಾನು ಕ್ರಾಂತಿಕಾರಿ ಹುತಾತ್ಮ ಭಗತ್‌ ಸಿಂಗ್‌ರವರ ಧೈರ್ಯ ಮತ್ತು ತ್ಯಾಗವನ್ನು ಇಲ್ಲಿ ಸ್ಮರಿಸುತ್ತೇನೆ. ಅದೇ ಸಂದರ್ಭದಲ್ಲಿ ಇಂದು ನಮ್ಮ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ನಾನು ಈ ದುರ್ಘಟನೆಗೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದು ಕನ್ಹಯ್ಯ ಕುಮಾರ್ ತಿಳಿಸಿದ್ದಾರೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮಾತನಾಡಿ, ಇದು ಗುಜರಾತ್‌ನಿಂದ ಶುರುವಾದ ಕಥೆ. ನಮ್ಮ ಸಂವಿಧಾನದ ಮೇಲೆ ಹಲ್ಲೆಯಾಗಿದೆ. ರಸ್ತೆಗಳಲ್ಲಿ ಸಂವಿಧಾನ ಸುಡಲಾಗಿದೆ. ನಮ್ಮ ವಿಚಾರಗಳ ಮೇಲೆ, ನಮ್ಮ ಪ್ರಜಾಪ್ರಭುತ್ವದ ಮೇಲೆ ಹಲ್ಲೆಯಾಗುತ್ತಿದೆ. ಒಬ್ಬ ಶಾಸಕನಾಗಿ ಅಲ್ಲ, ಒಬ್ಬ ನಾಗರಿಕನಾಗಿ ಕೇಳುತ್ತೇನೆ ಈ ಸಮಯದಲ್ಲಿ ನಾನು ಏನು ಮಾಡಬೇಕು..? ಅದಕ್ಕೆ ನಾನು ನಮ್ಮ ಸಂವಿಧಾನ ಉಳಿಸುವವರ ಜೊತೆಗೆ ಬೆರೆಯಬೇಕು. ಇದಕ್ಕಾಗಿ ನಾವು ಸ್ವಾತಂತ್ರಕ್ಕಾಗಿ ಹೋರಾಡಿದ ದೇಶದ ಹಳೆಯ ಪಕ್ಷವನ್ನು ಸೇರಬೇಕು ಎಂದರು.

ಹೀಗಾಗಿ ನಾನು ನನ್ನ ಕ್ಷೇತ್ರದ ಜನ, ನನ್ನ ಪಕ್ಷದ ಹಿರಿಯ ನಾಯಕರು ಮತ್ತು ನನ್ನ ಜೊತೆಗೆ ನಾನು ಮಾತನಾಡಿದೆ. ನಾನು ಅಧಿಕೃತವಾಗಿ ಅಲ್ಲ. ನೈತಿಕವಾಗಿ ಕಾಂಗ್ರೆಸ್ ಸೇರಿದ್ದೇನೆ. ಸದಸ್ಯತ್ವವನ್ನು ನಾಳೆಯೂ ಪಡಯಬಹುದು. ಆದರೆ, ಮುಂದಿನ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಬಾವುಟ ಹಿಡಿದು ಎದುರಿಸುತ್ತೇನೆ. ಇನ್ನು ಹಾರ್ದಿಕ್ ಪಾಟೇಲ್ ಬಗ್ಗೆ ಹೇಳಬೇಕು. ನಾವು ಗುಜರಾತ್‌ನಲ್ಲಿ ಎಲ್ಲವನ್ನು ನೋಡಿದ್ದೇವೆ. 30 ಸಾವಿರ ಕೋಟಿಯ ಡ್ರಗ್ಸ್ ಬಂದ ಬಗ್ಗೆ ಯಾರು ಮಾತಾಡಿಲ್ಲ. ಗುಜರಾತ್‌ನಲ್ಲಿ ನಿರುದ್ಯೋಗಿ ಯುವಕರಿಗೆ ಉದ್ಯೋಗ ನೀಡದೆ ನಶೆಯಲ್ಲಿ ಮುಳುಗಿಸಲಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೀಗಾಗಿ ಅಂಬೇಡ್ಕರ್ ಸಂವಿಧಾನ ಉಳಿಸಬೇಕಿದೆ. ರೈತ, ಕಾರ್ಮಿಕ, ಮಹಿಳೆ, ದಲಿತ, ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಪ್ಪಿಸಬೇಕಿದೆ. ಹೊಸ ಆಂದೋಲನ ನಡೆಯಬೇಕಿದೆ. ಅಂತಹ ಒಂದು ಸ್ಥಿತಿಯನ್ನು ನಾವು ಅದನ್ನು ಸೃಷ್ಟಿಸಬೇಕಿದೆ. ಎಲ್ಲರೂ ಈ ಮಿಷನ್‌ನಲ್ಲಿ ಸೇರಿ ಪ್ರಜಾಪ್ರಭುತ್ವ ಉಳಿಸಬೇಕಿದೆ. ಕಾಂಗ್ರೆಸ್ ಪಕ್ಷಕ್ಕೆ ಯುವಜನರು ಸೇರಬೇಕಿದೆ. ಯುವಕರನ್ನು ಸೇರಿಸಲು ನಾವು ಮೂವರು ಕಣಕ್ಕೆ ಇಳಿಯುತ್ತೇವೆ ಎಂದರು.

ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾರ್ದಿಕ್ ಪಟೇಲ್ ಸಮ್ಮುಖದಲ್ಲಿ ದೆಹಲಿಯ ಶಹೀದ್ ಅಜಮ್ ಭಗತ್ ಸಿಂಗ್ ಪಾರ್ಕ್‌ನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಯುವ ನಾಯಕರು ಕೈಗೆ ಕೈ ಜೋಡಿಸಿ ಹೊಸ ರಾಜಕಾರಣಕ್ಕೆ ಮುಂದಾಗಿದ್ದಾರೆ.

ಕೆಂಪು ಧಿರಿಸಿನಲ್ಲಿ ಕನ್ಹಯ್ಯ ಕುಮಾರ್, ನೀಲಿ ಧಿರಿಸಿನಲ್ಲಿ ಜಿಗ್ನೇಶ್ ಮತ್ತು ಬಳಿ ಧಿರಿಸಿನಲ್ಲಿ ರಾಹುಲ್ ಗಾಂಧಿ ಕಾಣಿಸಿಕೊಂಡಿದ್ದಾರೆ. ಆ ಮೂಲಕ ತಮ್ಮ ಸಿದ್ದಾಂತಗಳನ್ನು ರೂಪಕಗಳ ಮೂಲಕ ಮುಂದಿಟ್ಟಿದ್ದಾರೆ. ಕನ್ಹಯ್ಯ ಕುಮಾರ್, ಜಿಗ್ನೇಶ್‌ ಮೇವಾನಿಯವರಿಗೆ ಅಂಬೇಡ್ಕರ್, ಗಾಂಧಿ ಮತ್ತು ಭಗತ್ ಸಿಂಗ್ ಚಿತ್ರಗಳಿರುವ ಫೋಟೊ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಮದನ್ ಮೋಹನ್, ಗುಜರಾತ್ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಸೇರಿದಂತೆ ಇತರರು ಇದ್ದರು.


ಇದನ್ನೂ ಓದಿ: ಭಗತ್ ಸಿಂಗ್ ಜನ್ಮದಿನದಂದು ಕಾಂಗ್ರೆಸ್ ಸೇರಿದ ಕನ್ಹಯ್ಯ ಕುಮಾರ್‌, ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...