Homeಕರ್ನಾಟಕಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣವಲ್ಲ, ಬಹಿರಂಗ ಚರ್ಚೆಗೆ ನಾವು ಸಿದ್ಧ: ಉಗ್ರಪ್ಪ ಸವಾಲು

ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ- ವಿ.ಎಸ್.ಉಗ್ರಪ್ಪ

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಗೆ ಕಾಂಗ್ರೆಸ್ ನೀಡಿದ ತೈಲ ಬಾಂಡ್ ಗಳೇ ಕಾರಣ ಎಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಬಹಿರಂಗ ಚರ್ಚೆ ಮಾಡಲು ಸಿದ್ಧವಿದ್ದೇವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬ್ಯಾರೆಲ್ ಕಚ್ಚಾತೈಲ ಬೆಲೆ 120-130 ಡಾಲರ್ ಇದ್ದಾಗ ಜನರಿಗೆ ಹೊರೆ ಹೆಚ್ಚಾಗಬಾರದು ಎಂದು ಸಬ್ಸಿಡಿ ಮೂಲಕ ಹೊರೆ ಇಳಿಸಲು ಕಾಂಗ್ರೆಸ್ 1.34 ಲಕ್ಷ ಕೋಟಿಯಷ್ಟು ತೈಲ ಬಾಂಡ್ ನೀಡಿದ್ದು ನಿಜ. ನಾವು ಜನರ ಒತ್ತಡ ಕಡಿಮೆ ಮಾಡಲು ಇದನ್ನು ಜಾರಿಗೆ ತಂದಿದ್ದೆವೆಯೇ ಹೊರತು ಕಿಕ್ ಬ್ಯಾಕ್ ಪಡೆಯಲು ಇದನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ವರ್ಷ 10 ಸಾವಿರ ಕೋಟಿಯಷ್ಟು ಹಣವನ್ನು ಈ ತೈಲ ಬಾಂಡ್ ಗೆ ಪಾವತಿ ಮಾಡಬೇಕಾಗಿದೆ. ಆದರೆ ಈ ವರ್ಷ ಏಪ್ರಿಲ್- ಜುಲೈ ಅವಧಿಯಲ್ಲಿ ಕೇಂದ್ರ ಸರ್ಕಾರ ತೆರಿಗೆ ಮೂಲಕ 32,492 ಕೋಟಿಯಷ್ಟು ಹಣ ಸಂಗ್ರಹಿಸಿದೆ. ಬಿಜೆಪಿ ಸರ್ಕಾರ ಕಳೆದ 7 ವರ್ಷಗಳಲ್ಲಿ ಈ ಇಂಧನಗಳ ಮೇಲಿನ ತೆರಿಗೆಯಿಂದ 23 ಲಕ್ಷ ಕೋಟಿ ರೂ.ಗಳನ್ನು ಲೂಟಿ ಮಾಡಿದ್ದಾರೆ. ಕಷ್ಟದ ಸಮಯದಲ್ಲಿ ನಾವು ಬಾಂಡ್ ಮೂಲಕ ಹಣ ಸಂಗ್ರಹಿಸಿ ಜನರ ಮೇಲೆ ಹೊರೆ ಇಳಿಸಲು ಕಾಂಗ್ರೆಸ್ ಪ್ರಯತ್ನಿಸಿದರೆ, ಬಿಜೆಪಿ ಕಚ್ಚಾತೈಲ ಬೆಲೆ ಕಡಿಮೆ ಇದ್ದರೂ ಅದರ ಪ್ರಯೋಜನ ಜನರಿಗೆ ಸಿಗದಂತೆ ಮಾಡಿದೆ. ಆ ಮೂಲಕ ಪೆಟ್ರೋಲ್ ದರ 105, ಡೀಸೆಲ್ ದರ 94 ಹಾಗೂ ಅಡುಗೆ ಅನಿಲ 887 ರೂ. ಆಗಿದೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಣ ವ್ಯತ್ಯಾಸ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಅಚ್ಛೇ ದಿನ್ ಇದೇನಾ? ಜನರ ಬದುಕು ದುರ್ಬರ ಮಾಡುವುದೇ ಬಿಜೆಪಿಯ ಅಚ್ಛೇ ದಿನ. ದೇಶದ ಜನರ ಭಾವನೆಯಲ್ಲಿ ಪ್ರಧಾನಿ ಇಮೇಜ್ ಕಡಿಮೆಯಾಗಿದೆ. ಜಾಗತಿಕ ಸಂಸ್ಥೆಗಳು ಅಭಿವೃದ್ಧಿಶೀಲ ರಾಷ್ಟ್ರಗಳ ಪಟ್ಟಿಯಿಂದ ಭಾರತವನ್ನು ಕೈಬಿಟ್ಟಿವೆ. ದೇಶದ ಜಿಡಿಪಿ ಋಣಾತ್ಮಕವಾಗಿ ಸಾಗಿರುವ ಕಾರಣದಿಂದ ಈ ನಿರ್ಧಾರಕ್ಕೆ ಬಂದಿದ್ದು, ಇದು ದೇಶಕ್ಕೆ ಆಗಿರುವ ಅಪಮಾನ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತವೇ ಕಾರಣ ಎಂದು ಆರೋಪಿಸಿದ್ದಾರೆ.

ರಾಜ್ಯದಿಂದ ಸಂಗ್ರಹಿಸಲಾಗುವ ಜಿಎಸ್‌ಟಿ 2018-19ರಲ್ಲಿ 10,754 ಕೋಟಿ ರೂ.ಗಳಿದ್ದು, 2029-20ರಲ್ಲಿ 16,620 ಕೋಟಿ ರೂ.ಗಳಷ್ಟಾಗಿದೆ. 2020-21ರಲ್ಲಿ 12 ಸಾವಿರ ಕೋಟಿ ರೂ., 2021-22ರಲ್ಲಿ 8,542.17 ಕೋಟಿ ರೂ.ಗಳಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಏಪ್ರಿಲ್- ಮೇ ತಿಂಗಳಲ್ಲೇ 5,500 ಕೋಟಿ ರೂ. ಪರಿಹಾರ ಬರಬೇಕು. ಆದರೆ ಕೇಂದ್ರ ಸರ್ಕಾರ ಕಳೆದ ಮಾರ್ಚ್ 27ರಂದು 2970 ಕೋಟಿ ಮಾತ್ರ. ಇನ್ನು 11 ಸಾವಿರ ಕೋಟಿಗೂ ಹೆಚ್ಚು ಹಣ ನೀಡಬೇಕಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದ ಸ್ವಚ್ಛ ಭಾರತ, ಪಿಎಂಜಿಎಸ್, ಪಿಎಂ ಅವಾಸ್ ಯೋಜನೆ, ರಾಷ್ಟ್ರೀಯ ಸುಸ್ಥಿರ ಕೃಷಿ, ಪ್ರಧಾನಮಂತ್ರಿ ಕೃಷಿ ಸಂಚಯ್ ಯೋಜನೆ, ವಿದ್ಯಾರ್ಥಿ ವೇತನ ಸೇರಿದಂತೆ ಪ್ರಮುಖ ಯೋಜನಗೆಳಿಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಯಾಪೈಸೆ ಅನುದಾನ ರಾಜ್ಯಕ್ಕೆ ಬಿಡುಗಡೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಪ್ರಮುಖ ವಲಯಗಳಾದ ಗ್ರಾಮೀಣಾಭಿವೃದ್ಧಿ, ವಸತಿ, ಕೃಷಿ ಸೇರಿದಂತೆ ಇತರೆ ವಲಯಗಳಿಗೆ 3,890 ಕೋಟಿ ರೂ. ಅನುದಾನ ಬೇಕಾಗಿದೆ. ಅದರಲ್ಲಿ ಕೇಂದ್ರದ ಪಾಲು 2,410 ಕೋಟಿ ರೂ., ರಾಜ್ಯದ ಪಾಲು 1,479 ಕೋಟಿ ರೂ. ಇದೆ. ಇದರಲ್ಲಿ ಕೇಂದ್ರದಿಂದ ಒಂದು ಪೈಸೆಯೂ ಕೇಂದ್ರ ಸರ್ಕಾರದಿಂದ ನೀಡುತ್ತಿಲ್ಲ. ಪಿಎಂಜಿಎಸ್ ವೈ ಒಂದೇ ಯೋಜನೆಯಲ್ಲಿ 900 ಕೋಟಿ ರೂ., ಸ್ವಚ್ಛ ಭಾರತ ಯೋಜನೆಯಲ್ಲಿ 290 ಕೋಟಿ ರೂ., ಅವಾಸ್ ಯೋಜನೆಯಲ್ಲಿ 300 ಕೋಟಿ ರೂ., ಸುಸ್ಥಿರ ಯೋಜನೆಗೆ 117 ಕೋಟಿ ರೂ., ಆಹಾರ ಭದ್ರತೆಗೆ 98.3 ಕೋಟಿ ರೂ., ಕೃಷಿ ಸಂಚಯ್ ಯೋಜನೆಗೆ 270 ಕೋಟಿ ರೂ. ನೀಡಬೇಕಿದೆ. ಕೊಟ್ಟಿಲ್ಲ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಜನರಿಗೆ ತೆರಿಗೆ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಮತ್ತೊಂದೆಡೆ ನಮ್ಮ ಜಿಎಸ್ಟಿ ಪಾಲು ನೀಡುತ್ತಿಲ್ಲ. ಈ ಪ್ರಧಾನಿಯನ್ನು ಏನೆಂದು ಕರೆಯಬೇಕು? ಈ ದೇಶ ಕಂಡ ಅತ್ಯಂತ ಸುಳ್ಳುಗಾರ, ಜನರ ದಾರಿ ತಪ್ಪಿಸುವ ಪ್ರಧಾನಿ ಎಂದರೆ ಅದು ಮೋದಿ. ಈ ದೇಶ ಕಂಡ ಅತ್ಯಂತ ಭ್ರಷ್ಟ ಪ್ರಧಾನಿ ಮೋದಿ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಬೋಫೋರ್ಸ್ ನಲ್ಲಿ 63 ಕೋಟಿ ರೂ., ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ 2ಜಿ, ಕಲ್ಲಿದ್ದಲಿನಲ್ಲಿ 1.74 ಲಕ್ಷ ಕೋಟಿ ಹಗರಣ ಆಗಿದೆ ಎಂದು ಆರೋಪ ಮಾಡಿದ್ದರು. ನಾವು ತಪ್ಪು ಮಾಡಿಲ್ಲ ಎಂಬ ವಿಶ್ವಾಸದಿಂದ ತನಿಖೆಗೆ ಆದೇಶ ಮಾಡಿದ್ದೆವು. ಇವರು ಅಧಿಕಾರಕ್ಕೆ ಬಂದು 7 ವರ್ಷವಾಗಿದೆ ನಾವು ಹಗರಣ ಮಾಡಿದ್ದರೆ ನಮ್ಮನ್ನು ಜೈಲಿಗೆ ಹಾಕಬೇಕಿತ್ತು. ಏಕೆ ಹಾಕಿಲ್ಲ ಎಂದರೆ ಭ್ರಷ್ಟಾಚಾರ ನಡೆದಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ‘ಅಧಿಕಾರ ದುರ್ಬಳಕೆಯಿಂದ ಬಿಜೆಪಿಗೆ 114 ಸ್ಥಾನ, ಪ್ರಚಾರವಿಲ್ಲದೆಯೂ ಕಾಂಗ್ರೆಸ್‌ಗೆ 100 ಸ್ಥಾನ’

ಈ ಸರ್ಕಾರ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 39,600 ಕೋಟಿ ಕಿಕ್ ಬ್ಯಾಗ್ ಪಡೆದಿದೆ. ವಾಜಪೇಯಿ ಅವರು 2001ರಲ್ಲಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ದೇಶಕ್ಕೆ 126 ಫೈಟರ್ ಜೆಟ್ ಬೇಕು ಎಂದು ಸಂಪುಟದಲ್ಲಿ ನಿರ್ಧಾರ ಕೈಗೊಂಡಿದ್ದರು. ನಂತರ 2008ರಲ್ಲಿ ಅದು ಟೆಂಡರ್ ಕರೆದು 2011ರಲ್ಲಿ ಅಂತಿಮವಾಗುತ್ತದೆ. ಆಗ ಒಂದು ಯುದ್ಧ ವಿಮಾನಕ್ಕೆ 570 ಕೋಟಿ ರೂ. ದರ ನಿಗದಿ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ 2015ರಲ್ಲಿ ಕೇವಲ 36 ಯುದ್ಧ ವಿಮಾನವನ್ನು ಪ್ರತಿ ವಿಮಾನಕ್ಕೆ 1670 ಕೋಟಿ ರೂ.ಗೆ ದರ ಏರಿಸುತ್ತಾರೆ. ಇದರ ನಿರ್ಮಾಣದ ಜವಾಬ್ದಾರಿಯನ್ನು 11 ದಿನಗಳ ಹಿಂದಷ್ಟೇ ಹುಟ್ಟುಕೊಂಡಿದ್ದ ಅನಿಲ್ ಅಂಬಾನಿ ಅವರ ಕಂಪನಿಗೆ ನೀಡುತ್ತಾರೆ. ಒಂದು ವಿಮಾನಕ್ಕೆ 1100 ಕೋಟಿ ಎಂಬಂತೆ 36 ಯುದ್ಧ ವಿಮಾನಕ್ಕೆ 39,600 ಕೋಟಿ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ಯುಪಿಎ ಇದ್ದಾಗ ಪೆಟ್ರೋಲ್ ಮೇಲೆ 9 ರೂಪಾಯಿ ಡೀಸೆಲ್ ಮೇಲೆ 3 ರೂಪಾಯಿ ತೆರಿಗೆ ಹಾಕಲಾಗುತ್ತಿತ್ತು. ಆದರೆ ಇಂದು 32.90 ಹಾಗೂ 31.80 ರೂಪಾಯಿ ತೆರಿಗೆ ಹಾಕಲಾಗಿದೆ. ಮಾತೆತ್ತಿದರೆ ಬಾಂಡ್ ಸಾಲ ತೀರಿಸಬೇಕು ಎನ್ನುವ ಬಿಜೆಪಿಗರಿಗೆ ನಾಚಿಕೆಯಾಗಬೇಕು. ಅವರು ರಾಜಕಾರಣ ಮಾಡಲಿ, ಆದರೆ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ಅವರಿಗೆ ದಮ್ಮು, ತಾಕತ್ತು ಇದ್ದರೆ ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಬರಲಿ. ಬಿಜೆಪಿ ಅಸಮರ್ಥ ಆಡಳಿತ, ಜನವಿರೋಧಿ ಪ್ರವೃತ್ತಿಯಿಂದ ಇಂದು ಬೆಲೆ ಏರಿಕೆ ಆಗಿದೆ. ಇದೇ ಕಾರಣಕ್ಕೆ ಪ್ರಧಾನಿ ಅವರ ಜನಪ್ರಿಯತೆ ಶೇ.64ರಿಂದ ಶೇ.24ಕ್ಕೆ ಕುಸಿದಿದೆ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...