Homeಕರ್ನಾಟಕಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ: ಎಚ್.‌ಡಿ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದಲ್ಲಿ ಶಿರಾ ಮತ್ತು ಆರ್‌.ಆರ್‌.ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

ಕಾಂಗ್ರೆಸ್ ಪಕ್ಷ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಶಿರಾ ಮತ್ತು ಆರ್‌.ಆರ್‌.ನಗರ ಕ್ಷೇತ್ರಗಳಿಗೆ ಉಪ ಚುನಾವಣೆ ಎದುರಾಗಿದ್ದು, ಈ ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್‌ ಜೊತೆ ಮೈತ್ರಿ ಇಲ್ಲದೇ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯೆ ನೀಡಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್‌ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ವರಿಷ್ಠರ ಗಡುವು

ಇನ್ನೊಂದು ಟ್ವೀಟ್‌ನಲ್ಲಿ ’ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ BSP ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ’ ಎಂದು ಹೇಳಿದ್ದಾರೆ.

’ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್‌ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂದು ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಎರಡು ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಸಂಬಂಧ ಕಾಂಗ್ರೆಸ್ ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಸ್ವತಂತ್ರವಾಗಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುತ್ತೇವೆ ಎಂದಿತ್ತು. ಜೆಡಿಎಸ್ ಹೆಸರು ಪ್ರಸ್ತಾಪ ಮಾಡಿದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.


ಇದನ್ನೂ ಓದಿ:  ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...