Homeಮುಖಪುಟಲೋಕಸಭೆಯಲ್ಲಿ ರಾಹುಲ್‌ಗೆ ಮಾನಹಾನಿ ಮಾಡಿದ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ ವಿಶೇಷ ಹಕ್ಕು ಉಲ್ಲಂಘನೆ ನೋಟಿಸ್

ಲೋಕಸಭೆಯಲ್ಲಿ ರಾಹುಲ್‌ಗೆ ಮಾನಹಾನಿ ಮಾಡಿದ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ ವಿಶೇಷ ಹಕ್ಕು ಉಲ್ಲಂಘನೆ ನೋಟಿಸ್

- Advertisement -
- Advertisement -

ರಾಹುಲ್ ಗಾಂಧಿ ಅವರ ‘ಪ್ರಜಾಪ್ರಭುತ್ವ’ ಹೇಳಿಕೆಗಳ ಕುರಿತು ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವಿನ ಕಾಳಗ ಮುಂದುವರಿದಿದ್ದು, ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ವಿಶೇಷ ಹಕ್ಕು ಉಲ್ಲಂಘನೆಗೆ ನೋಟಿಸ್ ದಾಖಲಿಸಿದೆ.

ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು, ಲೋಕಸಭೆಯ ಕಾರ್ಯವೈಖರಿ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ 222ರ ಅಡಿಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಲ್ಲಿಸಿದ ಪತ್ರದಲ್ಲಿ, ”ಮಾರ್ಚ್ 13ರಂದು ಲೋಕಸಭೆಯಲ್ಲಿ ಅವರು ಮಾಡಿದ ಭಾಷಣದಲ್ಲಿ ನಿಯಮ 352 (vii) ಮತ್ತು ನಿಯಮ 353ನ್ನು ಉಲ್ಲಂಘಿಸಿದ್ದಕ್ಕಾಗಿ ರಾಜನಾಥ್ ಸಿಂಗ್ ವಿರುದ್ಧ ಅವರು ನೋಟಿಸ್ ನೀಡುತ್ತಿರುವುದಾಗಿ ಹೇಳಿದ್ದಾರೆ.

”ಮಾರ್ಚ್ 13, 2023 ರಂದು (ಬೆಳಿಗ್ಗೆ 11 ಗಂಟೆಗೆ), ಸಂಸತ್ತಿನ ಅಧಿವೇಶನಕ್ಕೆ ಸೇರಿದಾಗ ರಾಜನಾಥ್ ಸಿಂಗ್ ಅವರು ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿ, ಯಾವುದೇ ಮುಂಗಡ ಸೂಚನೆ ನೀಡದೆಯೇ ಸಂಸತ್ ಸದಸ್ಯ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಟ್ಯಾಗೋರ್ ಪತ್ರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವರ ಈ ಅವಹೇಳನಕಾರಿ ಹೇಳಿಕೆಗಳನ್ನು ಆಡಳಿತ ಪಕ್ಷದ ಸದಸ್ಯರು ಆಧಾರರಹಿತ ಆರೋಪಗಳಿಂದ ಬೆಂಬಲಿಸಿದರು. ಸಂಸತ್ತಿನ ಹಲವು ಸದಸ್ಯರು ಅದನ್ನು ಮುಂದುವರೆಸಿದ್ದಾರೆ ಎಂದು ಅವರು ಗಮನಸೆಳೆದಿದ್ದಾರೆ.

ಇದನ್ನೂ ಓದಿ: ಲೋಕಸಭೆಯಲ್ಲಿ 20 ನಿಮಿಷ ಮೈಕ್ರೊಫೋನ್‌ ಮ್ಯೂಟ್: ಇದು ಪ್ರಜಾಪ್ರಭುತ್ವವೇ? ಎಂದ ಕಾಂಗ್ರೆಸ್

ಅಷ್ಟೇ ಅಲ್ಲದೇ, ಮತ್ತೊಂದು ಗಾಬರಿ ಹುಟ್ಟಿಸುವ ಸಂಗತಿಯೆಂದರೆ, ಸಂಸತ್ತಿನಲ್ಲಿ ಸದಸ್ಯರೊಬ್ಬರ ಮೇಲೆ ಈ ರೀತಿ ಚಾರಿತ್ರ್ಯ ಹರಣಕ್ಕೆ ಅವಕಾಶ ನೀಡಲಾಗುತ್ತಿರುವುದು ಮಾತ್ರವಲ್ಲ, ಅದನ್ನು ಪ್ರೋತ್ಸಾಹಿಸಲಾಗುತ್ತಿದೆ. ರಾಹುಲ್ ಗಾಂಧಿ ವಿರುದ್ಧ ಮಾಡಲಾಗುತ್ತಿರುವ ಆರೋಪಗಳ ವಿಚಾರವಾಗಿ ತಮ್ಮನ್ನು ಸಮರ್ಥಿಸಿಕೊಳ್ಳಲು ಅಥವಾ ಅವರ ವಿರುದ್ಧ ಎತ್ತಿರುವ ಆರೋಪಗಳನ್ನು ನಿರಾಕರಿಸಲು ರಾಹುಲ್‌ ಗಾಂಧಿ ಅವರಿಗೆ ಯಾವುದೇ ಅವಕಾಶವನ್ನು ನೀಡಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

ರಾಜನಾಥ್ ಸಿಂಗ್ ಮಾಡಿದ ಭಾಷಣದ ಸಂಬಂಧಿತ ಭಾಗವನ್ನು ಕಾಂಗ್ರೆಸ್ ಸಂಸದರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಲೋಕಸಭೆಯಲ್ಲಿ ರಕ್ಷಣಾ ಸಚಿವರು, ”ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರು ಲಂಡನ್‌ಗೆ ಹೋಗಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುವ ಮೂಲಕ ದೇಶದ ಘನತೆಗೆ ಧಕ್ಕೆ ತಂದಿದ್ದಾರೆ. ವಿದೇಶಿ ಶಕ್ತಿಗಳು ಭಾರತದ ಪ್ರಜಾಪ್ರಭುತ್ವವನ್ನು ಉಳಿಸಬೇಕು. ರಾಹುಲ್ ಭಾರತದ ಗೌರವ ಮತ್ತು ಪ್ರತಿಷ್ಠೆಗೆ ಧಕ್ಕೆ ತರಲು ಯತ್ನಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

”ರಾಜನಾಥ್ ಸಿಂಗ್ ಅವರ ಈ ಹೇಳಿಕೆಗಳು ಮಾನಹಾನಿಕರಕವಾಗಿವೆ. ಇಂತಹ ಸುಳ್ಳು ಹೇಳಿಕೆಗಳನ್ನು ನೀಡುವಾಗ ಅವರು ಸಾಕ್ಷಿಗಳನ್ನು ಒದಗಿಸಿಲ್ಲ ಅಥವಾ ಅವರು ರಾಹುಲ್ ಗಾಂಧಿ ವಿರುದ್ಧದ ಹಕ್ಕುಗಳನ್ನು ಬೆಂಬಲಿಸಲು ಯಾವುದೇ ವಿಡಿಯೋ ಅಥವಾ ದಾಖಲೆಗಳನ್ನು ಒದಗಿಸಿಲ್ಲ. ಆದ್ದರಿಂದ, ರಾಜನಾಥ್ ಸಿಂಗ್ ಅವರು ಲೋಕಸಭಾ ನಿಯಮಗಳ ನಿಯಮ 352 (ii) ಮತ್ತು ನಿಯಮ 353 ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ ಮತ್ತು ಈ ವಿಷಯವನ್ನು ಆದ್ಯತೆಯ ಮೇರೆಗೆ ಸದರಿ ಸದಸ್ಯರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಟ್ಯಾಗೋರ್ ಆಗ್ರಹಿಸಿದ್ದಾರೆ.

ಕಳೆದ ವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಹುಲ್ ಗಾಂಧಿಯವರ  ಉಚ್ಚಾಟನೆಯನ್ನು ಪರಿಗಣಿಸಲು ವಿಶೇಷ ಸಮಿತಿಯನ್ನು ರಚಿಸುವಂತೆ ಕೋರಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ರಾಹುಲ್ ಮತ್ತು ಸೋನಿಯಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಶೇಷ ಹಕ್ಕು ಮಂಡಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Idiot bjp , if they done right others done wrong what the hell bjp concept and agenda iff rss comes to india india will go back 30 yrs and we will not survive in the country again we wil go raja jithadallu system

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...