Homeಮುಖಪುಟಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಒಪಿಎಸ್ ಜಾರಿಗೆ ಹಿಮಾಚಲ ಕ್ಯಾಬಿನೆಟ್ ಅಸ್ತು

ಬಜೆಟ್ ಅಧಿವೇಶನದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಒಪಿಎಸ್ ಜಾರಿಗೊಳಿಸುವ ಘೋಷಣೆ ಮಾಡಬೇಕು ಎಂದು ಎನ್‌ಪಿಎಸ್ ನೌಕರರ ಸಂಘ ಒತ್ತಾಯಿಸಿದೆ

- Advertisement -
- Advertisement -

ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ ನೀಡಿದ ಬೇಡಿಕೆಯನ್ನು ಕಾಂಗ್ರೆಸ್‌ ಈಡೇರಿಸಿದ್ದು, ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ಯಾಬಿನೇಟ್‌ನಲ್ಲಿಯೇ ಹಳೆಯ ಪಿಂಚಣಿ ಯೋಜನೆ (ಒಪಿಎಸ್‌) ಜಾರಿಗೆ ಕ್ರಮ ಜರುಗಿಸಿದೆ.

‘ವೋಟ್ ಫಾರ್‌ ಓಪಿಎಸ್‌’ (ಒಪಿಎಸ್ ಜಾರಿಗೊಳಿಸಿದವರಿಗೆ ವೋಟ್) ಎಂದು ಅಭಿಯಾನ ಮಾಡಿದ್ದ ಸರ್ಕಾರಿ ನೌಕರರು, ‘ಎನ್‌ಪಿಎಸ್’ (ನೂತನ ಪಿಂಚಣಿ ಯೋಜನೆ) ರದ್ದುಗೊಳಿಸುವಂತೆ ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಸರ್ಕಾರ ಯಾವುದೇ ಕ್ರಮ ಜರುಗಿಸದ ಕಾರಣ ದೊಡ್ಡ ಮಟ್ಟದಲ್ಲಿ ನೌಕರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅದರ ಗೆಲುವಿಗೂ ಕಾರಣವಾಗಿದ್ದರು.

ಕರ್ನಾಟಕದಲ್ಲಿಯೂ ‘ಓಟ್‌ ಫಾರ್‌ ಒಪಿಎಸ್’ ಅಭಿಯಾನವನ್ನು ಕೈಗೊಂಡಿರುವ ಸರ್ಕಾರಿ ನೌಕರರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಯಾಗುತ್ತಿರುವ ಒಪಿಎಸ್‌ನತ್ತ ಬೊಟ್ಟು ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರವೂ ಇದೇ ರೀತಿಯ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿರಿ: NPS ಅಥವಾ OPS? ನವ ಉದಾರವಾದಿ ’ಹೊಸ ಪಿಂಚಣಿ ಯೋಜನೆ’ಯಲ್ಲಿ ನಿಜಕ್ಕೂ ಲಾಭವಿದೆಯೇ?

ಒಪಿಎಸ್‌ ಜಾರಿಗೊಳಿಸುವ ನಿರ್ಧಾರ ಪ್ರಕಟಿಸಿದ ಬಳಿಕ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಸುಖವಿಂದರ್‌ ಸಿಂಗ್ ಸುಖು ಮಾತನಾಡಿ, “ಈ ವಿಷಯಕ್ಕೆ ಸಂಬಂಧಿಸಿದಂತೆ ಆಳವಾಗಿ ಅಧ್ಯಯನ ಮಾಡಲಾಗಿದೆ. ಹಣಕಾಸು ಇಲಾಖೆಗಳ ಅಧಿಕಾರಿಗಳು ಒಪಿಎಸ್ ಮರುಸ್ಥಾಪನೆಗೆ ಸಂಬಂಧಿಸಿದಂತೆ ಹಣವನ್ನು ಎತ್ತಿಟ್ಟಿದ್ದಾರೆ. ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ. ಪ್ರಸ್ತುತ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ಅಡಿಯಲ್ಲಿ ಇರುವ ಎಲ್ಲಾ ನೌಕರರು ಒಪಿಎಸ್‌ ವ್ಯಾಪ್ತಿಗೆ ಒಳಪಡುತ್ತಾರೆ. ಉದ್ಯೋಗಿಗಳೊಂದಿಗೆ ಸಮಾಲೋಚಿಸಿ ಕ್ರಮಗಳನ್ನು ರೂಪಿಸಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

“ನಾವು ಹಳೆಯ ಪಿಂಚಣಿ ಯೋಜನೆಯನ್ನು ವೋಟ್‌ಗಾಗಿ ಮರುಸ್ಥಾಪಿಸುತ್ತಿಲ್ಲ. ಸಾಮಾಜಿಕ ಭದ್ರತೆಯನ್ನು ನೀಡಲು ಮತ್ತು ಹಿಮಾಚಲದ ಅಭಿವೃದ್ಧಿಯ ಇತಿಹಾಸವನ್ನು ಬರೆದ ಉದ್ಯೋಗಿಗಳ ಆತ್ಮಗೌರವವನ್ನು ಕಾಪಾಡಲು ಈ ಕ್ರಮ ಜರುಗಿಸಿದ್ದೇವೆ” ಎಂದು ಹಿಮಾಚಲ ಪ್ರದೇಶ ಸಚಿವಾಲಯದಲ್ಲಿ ನೌಕರರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸುಖು ಮಾತನಾಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಒಪಿಎಸ್‌ ಪ್ರಮುಖ ಚುನಾವಣಾ ವಿಷಯವಾಗಿತ್ತು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆದ್ದರೆ ಒಪಿಎಸ್‌ ಮರುಸ್ಥಾಪಿಸುವುದಾಗಿ ಭರವಸೆ ನೀಡಲಾಗಿತ್ತು.

ಹಿಮಾಚಲ ಪ್ರದೇಶ ಸರ್ಕಾರ ಮಹತ್ತರವಾದ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಅವರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯಿಸಿದರು. “ಬೇರೆ ಬೇರೆ ರಾಜ್ಯಗಳಲ್ಲಿ ಒಪಿಎಸ್‌ ಮರುಸ್ಥಾಪಿಸುತ್ತಿರುವುದರಿಂದ ನಮ್ಮ ಹೋರಾಟಕ್ಕೆ ಹೆಚ್ಚಿನ ಬಲ ಬಂದಿದೆ. ಇಲ್ಲಿನ ಸರ್ಕಾರಕ್ಕೆ ನಿರಂತರ ಆಗ್ರಹ ಮಾಡಲಾಗುತ್ತಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಲು ನಿಯೋಗವನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಸಚಿವ ಸುಧಾಕರ್‌ ಹೇಳಿದ್ದರು. ಆದರೆ ಈವರೆಗೂ ಮಾತುಕತೆಯ ಪ್ರಕ್ರಿಯೆ ಆರಂಭವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

“ಯಾವುದೇ ಪಕ್ಷದ ಪರವಾಗಿ ನಾವು ನಿಂತಿಲ್ಲ. ಒಪಿಎಸ್‌ ಜಾರಿಗೊಳಿಸಿದವರಿಗೆ ನಮ್ಮ ಬೆಂಬಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ. ಸರ್ಕಾರಕ್ಕೆ ಇನ್ನೂ ಸಮಯಾವಕಾಶವಿದೆ. ಸರ್ಕಾರ ಯಾವುದೇ ಪ್ರತಿಕ್ರಿಯೆಯನ್ನು ನೀಡದಿದ್ದರೆ, ನಮ್ಮ ಬೇಡಿಕೆಗೆ ಸ್ಪಂದಿಸುವ ಯಾವುದೇ ಪಕ್ಷಕ್ಕಾದರೂ ನಾವು ಮತ ಚಲಾಯಿಸುತ್ತೇವೆ” ಎಂದು ಪುನರುಚ್ಚರಿಸಿದರು.

ಇದನ್ನೂ ಓದಿರಿ: ಏನಿದು ಎನ್‌ಪಿಎಸ್‌, ಒಪಿಎಸ್? ಲಕ್ಷಾಂತರ ನೌಕರರ ಆತಂಕವೇನು?

“ಬಿಜೆಪಿ ನೇತೃತ್ವದ ಸರ್ಕಾರ ಕೂಡ ನೌಕರರ ಪರ ಕಾಳಜಿಯನ್ನು ಹೊಂದಿದೆ ಎಂದು ನಾವು ಭಾವಿಸಿದ್ದೇವೆ. ಮಾನವೀಯ ನೆಲೆಗಟ್ಟಿನಲ್ಲಿ ನಮ್ಮ ಆಗ್ರಹವನ್ನು ಪರಿಗಣಿಸಬೇಕು. ಬಜೆಟ್‌ ಅಧಿವೇಶನದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರುತ್ತದೆ ಎಂಬ ನಂಬಿಕೆ ಇದೆ. ಅದನ್ನು ಹುಸಿಗೊಳಿಸಿದರೆ ಪರಿಣಾಮ ಎದುರಿಸುತ್ತದೆ” ಎಂದು ಎಚ್ಚರಿಸಿದರು.

“ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆಯುತ್ತಿದ್ದ ಒಪಿಎಸ್ ಜಾರಿಗಾಗಿ ಹೋರಾಟ ಈಗ ತಾಲ್ಲೂಕು ಕೇಂದ್ರಗಳಿಗೆ ವರ್ಗಾವಣೆಗೊಂಡಿದೆ. ತಹಸೀಲ್ದಾರ್‌, ಡಿಸಿ ಕಚೇರಿಗಳ ಎದುರಿಗೆ ಹೋರಾಟ ಮಾಡುತ್ತಿದ್ದೇವೆ, ಮನವಿಗಳನ್ನು ಸಲ್ಲಿಸುತ್ತಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷಕ್ಕೂ ಮನವಿಯನ್ನು ಸಲ್ಲಿಸಿ, ತಮ್ಮ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿಯ ಭರವಸೆ ನೀಡಬೇಕೆಂದು ಕೋರುತ್ತಿದ್ದೇವೆ. ಬಜೆಟ್‌ ಅಧಿವೇಶನದಲ್ಲಿ ಒಪಿಎಸ್‌ ಹೋರಾಟವನ್ನು ಪರಿಗಣಿಸದಿದ್ದರೆ ನಮ್ಮ ಹೋರಾಟ ತಾಲ್ಲೂಕು ಕೇಂದ್ರದಿಂದ ರಾಜ್ಯ ಮಟ್ಟಕ್ಕೆ ಮತ್ತೆ ವಿಸ್ತರಣೆಯಾಗಲಿದೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...