Homeಮುಖಪುಟಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ

- Advertisement -
- Advertisement -

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ 2024ರ ಲೋಕಸಭೆ ಚುನಾವಣೆಯ ‘ಮತಗಳ್ಳತನ’ ಆರೋಪ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಅಖಿಲ ಭಾರತ ಕಾಂಗ್ರೆಸ್ ‘ವೋಟ್ ಚೋರಿ’ (ಮತಗಳ್ಳತನ) ಎಂಬ ಹೆಸರಿನಲ್ಲಿ ವೆಬ್‌ ಪೋರ್ಟಲ್ ತೆರೆದಿದೆ. ಈ ಮೂಲಕ ಮತಗಳ್ಳತನದ ವಿರುದ್ದ ಅಭಿಯಾನ ಆರಂಭಿಸಿದೆ.

‘ಮತಗಳ್ಳತನದ ಆಧಾರ’, ‘ಚುನಾವಣಾ ಆಯೋಗದ ಪಾರದರ್ಶಕತೆಗೆ ಆಗ್ರಹ’ ಮತ್ತು ‘ಮತಗಳ್ಳತನದ ಬಗ್ಗೆ ವರದಿ’ ಎಂಬ ಮೂರು ಆಯ್ಕೆಗಳು ವೆಬ್‌ ಪೋರ್ಟಲ್‌ನಲ್ಲಿದ್ದು, ಜನರು ಪೋರ್ಟಲ್‌ಗೆ ಭೇಟಿ ನೀಡಿ ಮತಗಳ್ಳನದ ಆಧಾರಗಳನ್ನು ಪರಿಶೀಲಿಸಿ, ಆ ಬಗ್ಗೆ ವರದಿ ಮಾಡಿ, ಚುನಾವಣಾ ಪಾರದರ್ಶಕತೆಗೆ ಆಯೋಗವನ್ನು ಆಗ್ರಹಿಸಬಹುದು.

ಬಿಜೆಪಿ ಮತ್ತು ಚುನಾವಣಾ ಆಯೋಗ ಪರಸ್ಪರ ಒಪ್ಪಂದ ಮಾಡಿಕೊಂಡು ಕಳೆದ ಲೋಕಸಭೆ ಚುನಾವಣೆಯಲ್ಲಿ “ದೊಡ್ಡ ಕ್ರಿಮಿನಲ್ ವಂಚನೆ” ಎಸಗಿದೆ ಎಂಬ ಆರೋಪವನ್ನು ರಾಹುಲ್ ಗಾಂಧಿಯ ಪುನರುಚ್ಚರಿಸುವ ವೀಡಿಯೊ ಕೂಡ ವೆಬ್‌ ಪೋರ್ಟನಲ್ಲಿದೆ. ವಿಡಿಯೋದಲ್ಲಿ ಕರ್ನಾಟಕದ ಒಂದು ಕ್ಷೇತ್ರದ ವಿಶ್ಲೇಷಣೆಯನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಇದು “ಸಂವಿಧಾನದ ವಿರುದ್ಧದ ಅಪರಾಧ” ಎಂದು ಹೇಳಿದ್ದಾರೆ.

ಈ ಪೋರ್ಟಲ್‌ನಲ್ಲಿ ಮತದಾನವು ನಮ್ಮ ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಆದರೆ, ಅದು ‘ಚುನಾವಣಾ ಆಯೋಗದ ಶಾಮೀಲಿನೊಂದಿಗೆ ಬಿಜೆಪಿಯಿಂದ ವ್ಯವಸ್ಥಿತ ದಾಳಿಗೆ ಒಳಗಾಗಿದೆ’ ಎಂಬ ಸಂದೇಶವಿದೆ.

“ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದ ಕೇವಲ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಲೋಕಸಭಾ ಚುನಾವಣೆ ಗೆಲ್ಲಲು ಸಹಾಯಕ ಮಾಡಿದ 1 ಲಕ್ಷಕ್ಕೂ ಹೆಚ್ಚು ನಕಲಿ ಮತದಾರರನ್ನು ನಾವು ಕಂಡುಕೊಂಡಿದ್ದೇವೆ. ಸುಮಾರು 70-100 ಸ್ಥಾನಗಳಲ್ಲಿ ಇದು ಸಂಭವಿಸಿದೆ. ಹಾಗಾದರೆ ಊಹಿಸಿ, ಇದು ಮುಕ್ತ ಚುನಾವಣೆಗಳನ್ನು ನಾಶಪಡಿಸುತ್ತದೆ ಎಂದು ಪೋರ್ಟಲ್‌ನಲ್ಲಿ ಹೇಳಲಾಗಿದೆ.

ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳ ಕುರಿತು ಕಾಂಗ್ರೆಸ್ ಮತ್ತು ಇಂಡಿಯಾ ಒಕ್ಕೂಟದ ಈ ಹಿಂದೆಯೂ ಎಚ್ಚರಿಕೆ ನೀಡಿವೆ. ಈಗ ನಮ್ಮ ಬಳಿ ಪುರಾವೆಗಳಿವೆ. ನಾವು ಈ ಮತಗಳ್ಳತನದ ವಿರುದ್ಧ ನಮ್ಮೆಲ್ಲ ಶಕ್ತಿಯಿಂದ ಹೋರಾಡುತ್ತೇವೆ. ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಮ್ಮೊಂದಿಗೆ ನೀವು ಕೈಜೋಡಿಸಿ ಎಂದು ಪೋರ್ಟಲ್‌ನಲ್ಲಿ ಮನವಿ ಮಾಡಲಾಗಿದೆ.

ಒಬ್ಬರು ವ್ಯಕ್ತಿ ಪೋರ್ಟಲ್‌ನಲ್ಲಿ ನೋಂದಾಯಿಸಿದ ನಂತರ, ಅವರ ಹೆಸರಿನಲ್ಲಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಮೂಲಕ ಅವರು ಮತಗಳ್ಳತನವನ್ನು ವಿರೋಧಿಸುತ್ತಾರೆ ಎಂದು ಹೇಳಲಾಗುತ್ತದೆ.

“ಚುನಾವಣಾ ಆಯೋಗ ಡಿಜಿಟಲ್ ಮತದಾರರ ಪಟ್ಟಿಯನ್ನು ಒದಗಿಸಬೇಕು ಎಂಬ ರಾಹುಲ್ ಗಾಂಧಿಯವರ ಬೇಡಿಕೆಯನ್ನು ನಾನೂ ಬೆಂಬಲಿಸುತ್ತೇನೆ” ಎಂದು ಪ್ರಮಾಣಪತ್ರದಲ್ಲಿ ಹೇಳಲಾಗಿದೆ. ಜನರು ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳುವ ಮತ್ತು ಎಸ್‌ಎಂಎಸ್‌ನಲ್ಲಿರುವ ಲಿಂಕ್ ಅನ್ನು ಭರ್ತಿ ಮಾಡುವ ಆಯ್ಕೆಯನ್ನು ಕೂಡ ಪೋರ್ಟಲ್ ನೀಡುತ್ತದೆ.

ಪ್ರಮಾಣಪತ್ರವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಮತ್ತು ಖಜಾಂಚಿ ಅಜಯ್ ಮಾಕನ್ ಅವರ ಸಹಿಗಳನ್ನು ಹೊಂದಿದೆ.

ಹಲವಾರು ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಮಾಣಪತ್ರಗಳನ್ನು ಹಂಚಿಕೊಂಡಿದ್ದಾರೆ.

ರಾಹುಲ್ ಗಾಂಧಿಯವರ ‘ಮತಗಳ್ಳತನ’ ಆರೋಪವನ್ನು ಕಾಂಗ್ರೆಸ್ ನಾಯಕರು ಪ್ರತಿಧ್ವನಿಸುತ್ತಿದ್ದಂತೆ, ಚುನಾವಣಾ ಆಯೋಗದ ಅಧಿಕಾರಿಗಳು ಶನಿವಾರ ಮತ್ತೊಮ್ಮೆ ರಾಹುಲ್ ಗಾಂಧಿ ತನ್ನ ಆರೋಪವನ್ನು ದೃಢೀಕರಿಸುವ ಘೋಷಣಾ ಪತ್ರಕ್ಕೆ ಸಹಿ ಹಾಕಬೇಕು ಅಥವಾ ಸುಳ್ಳಾರೋಪ ಮಾಡಿದ್ದಕ್ಕಾಗಿ ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕನಿಷ್ಠ ಮೂರು ರಾಜ್ಯಗಳಲ್ಲಿ ನಡೆದ ಮತ ಕಳ್ಳತನದ ಆರೋಪದ ಕುರಿತು ರಾಹುಲ್ ಗಾಂಧಿ ಮತ್ತು ಚುನಾವಣಾ ಆಯೋಗದ ನಡುವೆ ಜಟಾಪಟಿ ಏರ್ಪಟ್ಟಿದೆ.

334 ರಾಜಕೀಯ ಪಕ್ಷಗಳನ್ನು ಪಟ್ಟಿಯಿಂದ ಕೈಬಿಟ್ಟ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...