HomeUncategorizedಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

- Advertisement -
- Advertisement -

ಬಿಲ್ಲವರು ಆರಾಧಿಸುವ ತುಳುನಾಡಿನ ಅವಳಿ ದೈವವಾದ ಕೋಟಿ-ಚೆನ್ನಯರ ಬಗ್ಗೆ ಹಾಗೂ ಬಿಲ್ಲವ ಮುಖಂಡ, ಕಾಂಗ್ರೆಸ್‌ನ ಹಿರಿಯ ನಾಯಕ ಜನಾರ್ದನ ಪೂಜಾರಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ ನೀಡುವುದಾಗಿ ಮಂಗಳೂರು ಮಹಾನಾಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಘೋಷಿಸಿದ್ದಾರೆ.

ದಕ್ಷಿನ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕಿಯಾಗಿರುವ ಪ್ರತಿಭಾ ಕುಲಾಲ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈ ಘೋಷಣೆಯನ್ನು ಮಾಡಿದ್ದಾರೆ. ತಮ್ಮ ವಿಡಿಯೋದಲ್ಲಿ ಅವರು, “ಸಂಘಟನೆಗಾಗಿ ಸಾಯುತ್ತೀರಿ, ಬಿಜೆಪಿಗಾಗಿ ನಾಯಕರಿಗಾಗಿ ಜೈಲು ಸೇರುತ್ತೀರಿ. ಆದರೆ ನಿಮ್ಮನ್ನು ಬಿಡಿಸಿಕೊಂಡು ಬರಲು ಯಾರೂ ಮುಂದೆ ಬರುತ್ತಿಲ್ಲ. ಇದನ್ನು ಪ್ರಶ್ನಿಸುವ ತಾಕತ್ತೂ ನಮ್ಮ ಯುವಕರಿಗಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ’ಸಿಖ್ಖರನ್ನು ದಾರಿ ತಪ್ಪಿಸಲಾಗುತ್ತಿದೆ’-ರಾಜ್ಯಸಭೆಯಲ್ಲಿ ಕೃಷಿ ಕಾನೂನನ್ನು ಮತ್ತೆ ಸಮರ್ಥಿಸಿದ ಮೋದಿ

ಮುಂದಿನ ಮೂರು ದಿನದ ಒಳಗಾಗಿ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಬಿಲ್ಲವರ ಆರಾಧನ ಸ್ಥಳವಾದ ಗರಡಿಗೆ ಕ್ಷಮೆ ಕೇಳಬೇಕು ಎಂದಿರುವ ಪ್ರತಿಭಾ, “ಇಲ್ಲದಿದ್ದಲ್ಲಿ ಬಿಲ್ಲವ ಸಮುದಾಯದ ಯಾರಾದರೂ ಪ್ರಥಮವಾಗಿ ಅವರ ಮುಖಕ್ಕೆ ಮಸಿ ಬಳಿಯಿರಿ. ಅವರಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡುತ್ತೇನೆ” ಎಂದು ಹೇಳಿದ್ದಾರೆ.

“ಜಗದೀಶ್ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದ ತಕ್ಷಣವೆ ಉಚ್ಚಾಟನೆ ಮಾಡಬೇಕು. ಅವರು ಜನಾರ್ಧನ ಪೂಜಾರಿ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ 60% ದಷ್ಟಿರುವ ಬಿಲ್ಲವರು ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ” ಎಂದು ಅವರು ಎಚ್ಚರಿಸಿದ್ದಾರೆ.

ಪ್ರತಿಭಾ ಅವರ ವಿಡಿಯೋ ಇದೀಗ ವೈರಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಬಿಜೆಪಿ ವಿರುದ್ದ ಜನಾಂದೋಲನ: UAPA ಅಡಿಯಲ್ಲಿ ಹೋರಾಟಗಾರರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...