Homeಮುಖಪುಟಮೂರು ರಾಜ್ಯಗಳಲ್ಲಿ ಸೋಲು: ಇವಿಎಂ ವಿಶ್ವಾಸಾರ್ಹತೆ ಪ್ರಶ್ನಿಸಿದ ದಿಗ್ವಿಜಯ ಸಿಂಗ್

ಮೂರು ರಾಜ್ಯಗಳಲ್ಲಿ ಸೋಲು: ಇವಿಎಂ ವಿಶ್ವಾಸಾರ್ಹತೆ ಪ್ರಶ್ನಿಸಿದ ದಿಗ್ವಿಜಯ ಸಿಂಗ್

- Advertisement -
- Advertisement -

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ ಬಳಿಕ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ವಿದ್ಯುನ್ಮಾನ ಮತಯಂತ್ರ (ಇವಿಎಂ) ವಿಶ್ವಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಮೂರೂ ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನ ನಂತರ ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ ಅವರು ‘ಈ ಗೆಲುವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ’ ಎಂದಿದ್ದರು. ಇಂದು (ಡಿ.5) ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಇವಿಎಂಗಳ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

ಸೋಷಿಯಲ್ ಮೀಡಿಯಾ ಹ್ಯಾಂಡಲ್ ಎಕ್ಸ್‌ನಲ್ಲಿ ಬರೆದುಕೊಂಡಿರುವ ದಿಗ್ವಿಜಯ ಸಿಂಗ್, “ಚಿಪ್ ಹೊಂದಿರುವ ಯಾವುದೇ ಯಂತ್ರವನ್ನು ಹ್ಯಾಕ್ ಮಾಡಬಹುದು. ನಾನು 2003 ರಿಂದ ಇವಿಎಂ ಮೂಲಕ ಮತದಾನ ಮಾಡುವುದನ್ನು ವಿರೋಧಿಸುತ್ತಾ ಬಂದಿದ್ದೇನೆ. ನಮ್ಮ ಭಾರತೀಯ ಪ್ರಜಾಪ್ರಭುತ್ವವನ್ನು ವೃತ್ತಿಪರ ಹ್ಯಾಕರ್‌ಗಳಿಂದ ನಿಯಂತ್ರಿಸಲು ನಾವು ಅನುಮತಿಸಬಹುದೇ? ಇದು ಎಲ್ಲಾ ರಾಜಕೀಯ ಪಕ್ಷಗಳು ಪರಿಹರಿಸಬೇಕಾದ ಮೂಲಭೂತ ಪ್ರಶ್ನೆಯಾಗಿದೆ. ಗೌರವಾನ್ವಿತ ಚುನಾವಣಾ ಆಯೋಗ ಮತ್ತು ಗೌರವಾನ್ವಿತ ಸುಪ್ರೀಂ ಕೋರ್ಟ್, ನೀವು ದಯವಿಟ್ಟು ನಮ್ಮ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸುತ್ತೀರಾ?” ಎಂದು ಕೇಳಿದ್ದಾರೆ.

ಇದೇ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ದಿಗ್ವಿಜಯ ಸಿಂಗ್, “ನಾನು ಇವಿಎಂಗಳನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ಗೂ ಇವಿಎಂ ಮೇಲೆ ನಂಬಿಕೆ ಇಲ್ಲವೇ? ಎಂದು ಮಾಧ್ಯಮದವರು ಪ್ರಶ್ನಿಸಿದ್ದಕ್ಕೆ, “ಈ ಬಗ್ಗೆ ಕಾಂಗ್ರೆಸ್‌ಗೆ ಕೇಳಿ” ಎಂದಿದ್ದಾರೆ

ಎಕ್ಸ್‌ನಲ್ಲಿ ಆಂಗ್ಲ ಪತ್ರಿಕೆಯೊಂದರ ಲೇಖನವನ್ನೂ ದಿಗ್ವಿಜಯ ಸಿಂಗ್ ಹಂಚಿಕೊಂಡಿದ್ದಾರೆ. ವರದಿಗಳ ಪ್ರಕಾರ, ಮೂರು ರಾಜ್ಯಗಳ ಕಾಂಗ್ರೆಸ್ ಸೋಲಿನ ನಂತರ ವಿರೋಧ ಪಕ್ಷಗಳಲ್ಲಿ ಆತಂಕ ಮೂಡಿದೆ. ಇಂಡಿಯಾ ಒಕ್ಕೂಟದ ಸಭೆಯನ್ನೂ ಮುಂದೂಡಲಾಗಿದೆ. ಡಿಸೆಂಬರ್ 6 ರಂದು ಸಂಜೆ ಈ ಸಭೆ ನಡೆಯಲಿದೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಈಗಾಗಲೇ ಈ ಸಭೆಗೆ ಹಾಜರಾಗಲು ನಿರಾಕರಿಸಿದ್ದಾರೆ.

ಇದನ್ನೂ  ಓದಿ: ಚೌಹಾಣ್-ತೋಮರ್-ಸಿಂಧಿಯಾ: ಯಾರಾಗ್ತಾರೆ ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...