Homeಮುಖಪುಟರಾಹುಲ್ ಗಾಂಧಿ ಕುರಿತ ಪೋಸ್ಟರ್: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಮಾಳವಿಯಾ ವಿರುದ್ಧ ಕೋರ್ಟ್...

ರಾಹುಲ್ ಗಾಂಧಿ ಕುರಿತ ಪೋಸ್ಟರ್: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಮಾಳವಿಯಾ ವಿರುದ್ಧ ಕೋರ್ಟ್ ಮೊರೆ

- Advertisement -
- Advertisement -

ರಾಹುಲ್ ಗಾಂಧಿಯನ್ನು ‘ನವಯುಗದ ರಾವಣ’ ಎಂದು ತೋರಿಸುವ ಭಾರತೀಯ ಜನತಾ ಪಕ್ಷದ ಸಾಮಾಜಿಕ ಜಾಲತಾಣದ ಪೋಸ್ಟ್‌ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ನಾಯಕರೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಕಾಂಗ್ರೆಸ್‌ನ ರಾಜಸ್ಥಾನ ಘಟಕದ ಪ್ರಧಾನ ಕಾರ್ಯದರ್ಶಿ ಜಸ್ವಂತ್ ಗುರ್ಜರ್ ಅವರು ಜೈಪುರ ಮೆಟ್ರೋಪಾಲಿಟನ್ ಕೋರ್ಟ್-11 ರಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 499 (ಇನ್ನೊಬ್ಬ ವ್ಯಕ್ತಿಯ ವಿರುದ್ಧ ಸುಳ್ಳು ಆರೋಪ), 500 (ಮಾನನಷ್ಟ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದ್ದಾರೆ. ಅಕ್ಟೋಬರ್ 9 ರಂದು ಅರ್ಜಿಯ ಕುರಿತು ವಿಚಾರಣೆ ನಡೆಯಲಿದೆ.

ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿ ರಾವಣನ ರೂಪದಲ್ಲಿರುವ ಚಿತ್ರವನ್ನು ಶೇರ್ ಮಾಡಿದ ಬಿಜೆಪಿ, ರಾಹುಲ್‌ ಗಾಂಧಿಗೆ ಹೊಸ ಯುಗದ ರಾವಣ ಎಂದು ಬರೆದುಕೊಂಡಿದೆ. ಅವರು ಧರ್ಮ ವಿರೋಧಿ ಮತ್ತು ರಾಮ ವಿರೋಧಿ. ಭಾರತವನ್ನು ನಾಶ ಮಾಡುವುದು ಇವರ ಗುರಿಯಾಗಿದೆ ಎಂದು ಬರೆಯಲಾಗಿದೆ.

ಭಾರತೀಯ ಜನತಾ ಪಕ್ಷದ ಅಧಿಕೃತ ಖಾತೆ ಎಕ್ಸ್‌ನಲ್ಲಿ ಹಾಕಲಾದ ಪೋಸ್ಟರ್‌ನಲ್ಲಿ ರಾಹುಲ್ ಗಾಂಧಿಯನ್ನು ರಾವಣನಂತೆ ಚಿತ್ರೀಕರಿಸಿದ ಫೋಟೋ ವಿವಾದವನ್ನು ಹುಟ್ಟುಹಾಕಿದೆ. ಇದನ್ನು ಸ್ವೀಕಾರಾರ್ಹವಲ್ಲ ಮತ್ತು ಅಪಾಯಕಾರಿ ಎಂದು ಕಾಂಗ್ರೆಸ್ ಹೇಳಿದೆ.

ಆರೋಪಿಗಳು ಉದ್ದೇಶಪೂರ್ವಕವಾಗಿ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ ಮತ್ತು ಆರೋಪಿಗಳ ಉದ್ದೇಶವು ಕಾಂಗ್ರೆಸ್ ಮತ್ತು ಅದಕ್ಕೆ ಸಂಬಂಧಿಸಿದ ಜನರಿಗೆ ಅವಮಾನಿಸುವುದು ಮತ್ತು ಹಾನಿ ಮಾಡುವುದು ಮತ್ತು ರಾಜಕೀಯ ಲಾಭ ಗಳಿಸುವುದು ಎಂದು ಆರೋಪಿಸಲಾಗಿದೆ.

ಬಿಜೆಪಿ ನಾಯಕರು ಉದ್ದೇಶಪೂರ್ವಕವಾಗಿ ರಾಹುಲ್‌ ಗಾಂಧಿಯನ್ನು ರಾಮ ವಿರೋಧಿ ಮತ್ತು ಧರ್ಮ ವಿರೋಧಿ ಎಂದು ಬಿಂಬಿಸಿ ಅವರ ವಿರುದ್ಧ ಜನರನ್ನು ಪ್ರಚೋದಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಈ ಪೋಸ್ಟರ್ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಹಲವು ಕಡೆ ಪ್ರತಿಭಟನೆ ನಡೆಸಿದೆ. ಪೋಸ್ಟರ್‌ನಲ್ಲಿ ರಾವನನಂತೆ ರಾಹುಲ್‌ ಗಾಂಧಿಗೆ ಹಲವಾರು ತಲೆಗಳನ್ನು ಜೋಡಿಸಿರುವುದು ಕಂಡು ಬಂದಿದೆ.

ಇದನ್ನು ಓದಿ: 2010ರಿಂದ 16 ಪತ್ರಕರ್ತರ ಮೇಲೆ ಕಠೋರ UAPA ಕಾಯ್ದೆಯಡಿ ಕೇಸ್ ದಾಖಲು: ಹೆಚ್ಚಿನವರು ಮುಸ್ಲಿಂ ಸಮುದಾಯದವರು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...