Homeಕರ್ನಾಟಕಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

ಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿ.ಎಸ್. ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕ ಎಂದು ಬಿಎಸ್‌ವೈ ಪರ ಬ್ಯಾಟ್ ಬೀಸಿದ್ದಾರೆ.

“ಕರ್ನಾಟಕ ಸಿಎಂ ಬದಲಾವಣೆಯಾಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾತು” ಎಂಬ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಹೊಸ ಚರ್ಚೆಗಳಿಗೆ ದಾರಿಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಎಂ.ಬಿ. ಪಾಟೀಲ್‌ ಅವರ ಪ್ರತಿಕ್ರಿಯೆ ಬಂದಿದೆ.

“ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

ನಳೀನ್ ಕುಮಾರ್‌ ಕಟೀಲ್ ಅವರು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿರುವ ವೈರಲ್ ಆಗಿರುವ ಆಡಿಯೋದಲ್ಲಿ ತುಳು ಭಾಷೆಯಲ್ಲಿ “ಯಾರಿಗೆ ಹೇಳೋಕೆ ಹೋಗಬೇಡಿ, ಈಶ್ವರಪ್ಪ ಜಗದೀಶ್ ಶೆಟ್ಟರ್ ಟೀಮ್ ಅನ್ನೆ ತೆಗೆಯುತ್ತೇವೆ. ಎಲ್ಲ ಹೊಸ ಟೀಮ್ ಮಾಡುತ್ತಿದ್ದೇವೆ. ಯಾರಲ್ಲೂ ಹೇಳಲು ಹೋಗಬೇಡಿ, ಈಗ ಸಧ್ಯಕ್ಕೆ ಯಾರಿಗೂ ಕೊಡಬೇಡಿ ಎಂದು ಹೇಳಿದ್ದಾರೆ. ಇಲ್ಲ, ಯಾರಿಗೂ ಹೇಳಬೇಡಿ, ಏನು ತೊಂದರೆ ಇಲ್ಲ, ಹೆದರಬೇಡಿ ನಾವಿದ್ದೇವೆ, ಇನ್ನು ಯಾರಾದರೂ ನಮ್ಮ ಕೈಯಲ್ಲೆ ಎಲ್ಲಾ. ಮೂರು ಹೆಸರು ಉಂಟು, ಅದರಲ್ಲಿ ಯಾವುದಾದರೂ ಆಗುವ ಚಾನ್ಸ್ ಉಂಟು. ಇಲ್ಲ, ಇಲ್ಲಿಯವರನ್ನು ಯಾರನ್ನು ಮಾಡೋದಿಲ್ಲ. ದೆಹಲಿಯಿಂದಲೇ ಮಾಡುತ್ತಾರೆ” ಎಂದು ಹೇಳಲಾಗಿದೆ. ಸಣ್ಣ ದನಿಯಲ್ಲಿ ಮಾತನಾಡಿದ್ದು ನಡು ನಡುವೆ ನಗುವುದು ಕೇಳಿಬಂದಿದೆ.

ಕಾಂಗ್ರೆಸ್ ಕೂಡ ಮುಖ್ಯಮಂತ್ರಿ ಬದಲಾವಣೆ ವಿಚಾರದ ಆಡಿಯೋ ಬಗ್ಗೆ ಟ್ವೀಟ್ ಮಾಡಿದ್ದು, ಇದು ಬಿಜೆಪಿಯ ಮೀರದ್ ಸಾದಿಕ್ ನಳಿನ್ ಕುಮಾರ್‌ ಕಟೀಲ್‌ ಅವರ ಕೃತ್ಯ. ಬಿಜೆಪಿಯನ್ನ ಮುಳುಗಿಸಲು ಬೇರೆ ಯಾರ ಪ್ರಯತ್ನವೂ ಬೇಡ, ಕಟೀಲ್ ಒಬ್ಬರೇ ಸಾಕು ಎಂದಿದ್ದಾರೆ.

” ರಾಜ್ಯ ಬಿಜೆಪಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲ್‌ ಅವರೇ, ಬಿ.ಎಸ್.ಯಡಿಯೂರಪ್ಪ ಅವರಿಗೆ ದ್ರೋಹ ಬಗೆಯುತ್ತಿರುವ ನಾಯಕತ್ವ ಬದಲಾವಣೆಯ ಸಂಚುಕೋರ ಎನ್ನುವುದು ಆಡಿಯೋದಿಂದ ಬಯಲಾಗಿದೆ. ಜೊತೆಗೆ ಶೆಟ್ಟರ್, ಈಶ್ವರಪ್ಪರನ್ನೂ ಮಾರ್ಗದರ್ಶಕ ಮಂಡಳಿಗೆ ಕಳಿಸುವ ಹುನ್ನಾರ ನಡೆಸಿದ ಮೀರ್ ಸಾದಿಕ್ ಕಟೀಲ್‌ರ ಹಿಂದೆ ಇರುವುದು ಅ’ಸಂತೋಷಗೊಂಡ ವ್ಯಕ್ತಿ!” ಎಂದು ವ್ಯಂಗ್ಯವಾಡಿದ್ದಾರೆ.

ಇದೇ ಜುಲೈ 26ಕ್ಕೆ ಯಡಿಯೂರಪ್ಪನವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ 2 ವರ್ಷ ತುಂಬುತ್ತಿದೆ. ಆ ಸಂದರ್ಭದಲ್ಲಿಯೇ ಅವರು ಪದತ್ಯಾಗ ಮಾಡಲಿದ್ದಾರೆ ಎಂಬ ಚರ್ಚೆಗಳ ನಡುವೆ ಈ ಆಡಿಯೋ ವೈರಲ್ ಆಗಿರುವುದು ಕಾಕತಾಳಿಯವೇ..? ಅಥವಾ ಉದ್ದೇಶ ಪೂರ್ವಕವೇ..? ಈ ಎಲ್ಲಾ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ಉತ್ತರ ದೊರೆಯಲಿದೆ.


ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...