Homeಮುಖಪುಟಕಾಂಗ್ರೆಸ್ ಹಿರಿಯ ಮುಖಂಡ ಮೋತಿಲಾಲ್ ವೋರಾ (93) ನಿಧನ

ಕಾಂಗ್ರೆಸ್ ಹಿರಿಯ ಮುಖಂಡ ಮೋತಿಲಾಲ್ ವೋರಾ (93) ನಿಧನ

- Advertisement -
- Advertisement -

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್​ನ ಹಿರಿಯ ನಾಯಕ ಮೋತಿಲಾಲ್ ವೋರಾ (93) ನಿಧನರಾಗಿದ್ದಾರೆ. ಅವರು ಕೆಲದಿನಗಳಿಂದ ದೆಹಲಿಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಯಾದ ಮೋತಿಲಾಲ್ ವೋರಾ ಈ ವರ್ಷದ ಏಪ್ರಿಲ್ ವರೆಗೆ ರಾಜ್ಯಸಭಾ ಸದಸ್ಯರಾಗಿದ್ದರು.

ಕಳೆದೆರಡು ದಿನಗಳ ಹಿಂದೆ ಮೂತ್ರಪಿಂಡದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದು ಸಾವಿಗೆ ಕಾರಣವಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಮೋತಿಲಾಲ್ ಅವರ ನಿಧನಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ’ಮುಸ್ಲಿಮರು ಗೋಮಾಂಸ ತಿನ್ನಬೇಡಿ’ ಹೇಳಿಕೆಗೆ ಮಲಯಾಳಂನಲ್ಲಿ ಸ್ಪಷ್ಟನೆ ನೀಡಿದ ಸಿ.ಎಂ. ಇಬ್ರಾಹಿಂ!

“ವೋರಾ ಅವರು ನಿಜವಾದ ಕಾಂಗ್ರೆಸ್‌ನವರಾಗಿದ್ದು, ಅದ್ಭುತ ಮನುಷ್ಯರಾಗಿದ್ದರು, ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇವೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಮೋತಿಲಾಲ್ ಅವರಿಗೆ ಕಳೆದ ಅಕ್ಟೋಬರ್​ನಲ್ಲಿ ಕೊರೊನಾ ಸೋಂಕು ತಗುಲಿತ್ತು. ನಂತರ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿದ್ದರು.


ಇದನ್ನೂ ಓದಿ: ಮೋದಿ ಮನ್ ಕಿ ಬಾತ್ ಸಮಯದಲ್ಲಿ ತಟ್ಟೆ ಬಾರಿಸಿ: ಹೋರಾಟನಿರತ ರೈತರ ಕರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...