Homeಕರ್ನಾಟಕಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ್ ನಿಧನ

ಕಾಂಗ್ರೆಸ್ ನಾಯಕ ಆರ್‌.ಧ್ರುವನಾರಾಯಣ್ ನಿಧನ

- Advertisement -
- Advertisement -

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ, ಮಾಜಿ ಸಂಸದ, ಮಾಜಿ ಶಾಸಕ ಆರ್‌.ಧ್ರುವ ನಾರಾಯಣ ಅವರು ಶನಿವಾರ ಮೃತಪಟ್ಟಿದ್ದಾರೆ.

ಧುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡಿದೆ ಎಂದು ಶನಿವಾರ ಬೆಳಿಗ್ಗೆ 6.30ಕ್ಕೆ ಚಾಲಕನಿಗೆ ಕರೆ ಮಾಡಿದ್ದರು. ಚಾಲಕ 6.40ಕ್ಕೆ ಬಂದು ಕರೆದುಕೊಂಡು ಹೋಗಿದ್ದರು. ಅವರಿಗೆ ರಕ್ತವಾಂತಿ ಆಗಿತ್ತು, ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆಂದೇ ಹೇಳಲಾಗುತ್ತಿತ್ತು.

ಚಾಮರಾಜನಗರ ಲೋಕಸಭೆಯನ್ನು ಪ್ರತಿನಿಧಿಸಿ ಎರಡು ಭಾರಿ ಸಂಸದರಾಗಿದ್ದ ಅವರು ಅತ್ಯುತ್ತಮ ಲೋಕಸಭಾ ಸದಸ್ಯರಾಗಿ ಗುರುತಿಸಿಕೊಂಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ವಿ.ಶ್ರೀನಿವಾಸ ಪ್ರಸಾದ್ ಅವರ ವಿರುದ್ಧ ಸೋತಿದ್ದರು.

2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧ್ರುವನಾರಾಯಣ್ ಸೋಲಿಸಿದ್ದರು.

2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾಗಿದ್ದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದರು. ಚಾಮರಾಜನಗರ ಜಿಲ್ಲೆಯ ರಾಜಕಾರಣದಲ್ಲಿ ಸಹೃದಯಿ, ಮೆಲು ಮಾತಿನ ರಾಜಕಾರಣಿ ಗುರುತಿಸಿದ್ದರು.

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಇಬ್ಬರಿಗೂ ಆತ್ಮೀಯರಾಗಿದ್ದ ಧ್ರುವನಾರಾಯಣ ಪಕ್ಷವನ್ನು ಸಂಘಟಿಸುವಲ್ಲಿ ಸಕ್ರಿಯರಾಗಿದ್ದರು.

ಧ್ರುವ ನಾರಾಯಣ್ ನಿಧನಕ್ಕೆ ಸಂತಾಪ ಸೂಚಿಸಿರುವ ಸಿದ್ದರಾಮಯ್ಯನವರು, “ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ” ಎಂದು ತಿಳಿಸಿದ್ದಾರೆ.

“ರಾಜಕೀಯ ನಾಯಕ ಮತ್ತು ಸಂಸದೀಯ ಪಟುವಾಗಿ ತನ್ನ ಶ್ರಮ, ಪ್ರಬುದ್ದತೆ ಮತ್ತು ಬದ್ಧತೆಯಿಂದ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲ ಲಕ್ಷಣಗಳನ್ನು ಹೊಂದಿದ್ದ ಧ್ರುವನಾರಾಯಣ್ ಅವರ ಬದುಕು ಅರ್ಧ ದಾರಿಯಲ್ಲಿಯೇ ಕೊನೆಗೊಂಡದ್ದು ನಾಡಿಗೆ ಮತ್ತು ಜನತೆಗೆ ತುಂಬಲಾರದ ನಷ್ಟ. ಅವರ ಸಾಧನೆಯ ಬದುಕು ಶಾಶ್ವತವಾಗಿ ನಮ್ಮ ನೆನಪಲ್ಲಿರುತ್ತದೆ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಸಂತಾಪ ಸೂಚಿಸಿದ್ದು, “ನಗುಮುಖ ನಮ್ಮ ಸ್ನೇಹಿತ, ನಮ್ಮ ನಾಯಕ ಮತ್ತು ಕಾಂಗ್ರೆಸ್‌ನ ಅತ್ಯಂತ ಸಮರ್ಪಿತ ಕಾಲಾಳು ಆರ್‌.ಧ್ರುನಾರಾಯಣ್ ಅವರ ನಿಧನದಿಂದಾಗಿರುವ ನಷ್ಟವನ್ನು ಪದಗಳಿಂದ ವಿವರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...