Homeಮುಖಪುಟಕಾಂಗ್ರೆಸ್ ಕಾರ್ಯಕರ್ತರ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ: ರಾಹುಲ್ ಗಾಂಧಿ

ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾನಹಾನಿ ಪ್ರಕರಣಗಳ ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ಸೂರತ್ ನ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಮಾನಹಾನಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾದರು.

ಲೋಕಸಭೆ ಚುನಾವಣೆ ವೇಳೆ ನರೇಂದ್ರ ಮೋದಿ ವಿರುದ್ಧ ವಾಕ್ಪ್ರಹಾರ ನಡೆಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಮೋದಿ ಉಪನಾಮ ಹೊಂದಿದವರೆಲ್ಲರೂ ಕಳ್ಳರು” ಎಂದು ಅಪಹಾಸ್ಯ ಮಾಡಿದ್ದರು. ಇದನ್ನು ಪ್ರಶ್ನಿಸಿ ಸೂರತ್ ನ ಸ್ಥಳೀಯ ಬಿಜೆಪಿ ಶಾಸಕ ಪೂರ್ಣೇಶ್ ಮಾನಹಾನಿ ಮೊಕದ್ದಮೆ ಸಲ್ಲಿಸಿದ್ದರು. ಐಪಿಸಿ ಸೆಕ್ಷನ್ 499, 500 ಅಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಇಂದು ರಾಹುಲ್ ಗಾಂಧಿ ಸೂರತ್ ನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಕೇಸ್ ವಿಚಾರಣೆ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನಾನಿಂದು ಸೂರತ್ ನಲ್ಲಿದ್ದೇನೆ. ನನ್ನ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲಾಗಿದೆ. ಈ ಮೂಲಕ ರಾಜಕೀಯ ವಿರೋಧಿಗಳು ನನ್ನ ಬಾಯಿ ಮುಚ್ಚಿಸಲು ಹೊರಟಿದ್ದಾರೆ.

ನನ್ನೊಂದಿಗೆ ತಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ಇಲ್ಲಿ ಜಮಾಯಿಸಿರುವ ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಆಭಾರಿಯಾಗಿದ್ದೇನೆ. ಸತ್ಯಕ್ಕೆ ಜಯವಾಗಲಿದೆ ಎಂದು ಬರೆದಿದ್ದಾರೆ.

ಕರ್ನಾಟಕದ ಕೋಲಾರದಲ್ಲಿ ಏಪ್ರಿಲ್‌ನಲ್ಲಿ ನಡೆದಿದ್ದ ಚುನಾವಣಾ ರ್‍ಯಾಲಿ ವೇಳೆ ರಾಹುಲ್ ಗಾಂಧಿ, ಭಾರತೀಯ ಬ್ಯಾಂಕುಗಳಿಗೆ ವಂಚಿಸಿ, ವಿದೇಶಕ್ಕೆ ಪರಾರಿಯಾಗಿರುವ ನೀರವ್ ಮೋದಿ, ಲಲಿತ್ ಮೋದಿ ಮತ್ತು ನರೇಂದ್ರ ಅವರ ಹೆಸರುಗಳನ್ನು ಭಾಷಣದಲ್ಲಿ ಉಲ್ಲೇಖಿಸಿದ್ದರು. ಜತೆಗೆ “ಈ ಮೋದಿ ಉಪನಾಮ ಹೊಂದಿದವರೆಲ್ಲರೂ ಕಳ್ಳರು” ಎಂದಿದ್ದರು. ರಫೇಲ್‌ ವ್ಯವಹಾರದಲ್ಲಿ ನರೇಂದ್ರ ಮೋದಿಯವರು ಭ್ರಷ್ಟಾಚಾರ ಮಾಡಿದ್ದಾರೆ ಎಂದೂ ಅವರು ಆರೋಪಿಸಿದ್ದರು.

ರಾಹುಲ್ ಆಡಿದ ಮಾತು ಮೋದಿ ಬಳಗಕ್ಕೆ ಅವಮಾನ ಮಾಡಿದಂತಾಗಿದೆ ಎಂದು ಬಿಜೆಪಿ ಶಾಸಕ ಪೂರ್ಣೇಶ್ ಮೊಕದ್ದಮೆ ಸಲ್ಲಿಸಿದ್ದರು. ದೂರು ಸ್ವೀಕರಿಸಿದ್ದ ಸೂರತ್ ಮ್ಯಾಜಿಸ್ಟ್ರೇಟ್ ಬಿ.ಎಚ್,ಕಪಾಡಿಯಾ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದರು. ನಂತರ ನ್ಯಾಯಾಲಯಕ್ಕೆ ಹಾಜರಾಗಲು ಕಾಲಾವಕಾಶ ಕೋರಿ, ರಾಹುಲ್ ಪರ ವಕೀಲರು ಮನವಿ ಸಲ್ಲಿಸಿದ್ದರು. ಮನವಿಗೆ ಸಮ್ಮತಿ ಸೂಚಿಸಿದ್ದ ಕೋರ್ಟ್, ಇಂದಿಗೆ ವಿಚಾರಣೆ ಮುಂದೂಡಿ, ರಾಹುಲ್ ಖುದ್ದು ಹಾಜರಾಗಬೇಕೆಂದು ಆದೇಶಿಸಿತ್ತು.

ಇನ್ನು ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಅಹಮದಾಬಾದ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಪ್ರಕರಣ ಕೂಡ ವಿಚಾರಣೆ ಹಂತದಲ್ಲಿದೆ. ಅಮಿತ್ ಶಾ ಅಹಮದಾಬಾದ್ ಜಿಲ್ಲಾ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾಗಿದ್ದಾಗ, ನೋಟು ಅಮಾನ್ಯೀಕರಣದ ವೇಳೆ 750 ಕೋಟಿ ಹಳೆಯ ನೋಟುಗಳನ್ನು ಬದಲಿಸಿ ಹಗರಣ ಮಾಡಿದ್ದಾರೆ ಎಂದು ರಾಹುಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...