Homeಮುಖಪುಟದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಹೆಸರು!

ದೆಹಲಿ ಗಲಭೆ ಚಾರ್ಜ್‌ಶೀಟ್‌ನಲ್ಲಿ ಕಾಂಗ್ರೆಸ್ ಮುಖಂಡ ಸಲ್ಮಾನ್ ಖುರ್ಷಿದ್ ಹೆಸರು!

ಪ್ರಚೋದನಕಾರಿ ಹೇಳಿಕೆ ಏನು ಎಂದು ತಿಳಿಯಲು ನನಗೆ ಕುತೂಹಲವಿದೆ. ನಾನು ಸಾಂವಿಧಾನಿಕ, ನ್ಯಾಯಸಮ್ಮತವಾದ ಕಾರಣವನ್ನು ಬೆಂಬಲಿಸುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನೆ. ಇವರು ಮಾಡುತ್ತಿರುವುದು ಕಸ ಸಂಗ್ರಹಣೆಯ ಪ್ರಯತ್ನ...

- Advertisement -
- Advertisement -

ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಅವರ ಹೆಸರನ್ನು ದೆಹಲಿ ಪೊಲೀಸರು ಇತ್ತೀಚೆಗೆ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ.

ಸೆಪ್ಟೆಂಬರ್ 17 ರಂದು ಸಲ್ಲಿಸಲಾದ 17,000 ಪುಟಗಳ ಚಾರ್ಜ್‌ಶೀಟ್‌ನಲ್ಲಿನ ಸಾಕ್ಷಿಯೊಬ್ಬರ ಹೇಳಿಕೆಯಂತೆ, “ಉಮರ್ ಖಾಲಿದ್, ಸಲ್ಮಾನ್ ಖುರ್ಷಿದ್, ನದೀಮ್ ಖಾನ್ ಅವರೆಲ್ಲರೂ, ದೆಹಲಿಯ ಸಿಎಎ/ಎನ್‌ಆರ್‌ಸಿ ವಿರೋಧಿ ಧರಣಿಗಳಲ್ಲಿ ಜನರನ್ನು ಸಜ್ಜುಗೊಳಿಸಲು ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದರು” ಎಂದು ಸೇರಿಸಲಾಗಿದೆ.

ಪ್ರಚೋದನಕಾರಿ ಭಾಷಣಗಳ ನಿಖರ ಸ್ವರೂಪವನ್ನು ಪೊಲೀಸರು ಉಲ್ಲೇಖಿಸಿಲ್ಲ. ರಕ್ಷಣಾತ್ಮಕ ಸಾಕ್ಷಿ ಎಂದು ಪೊಲೀಸರು ಸಾಕ್ಷಿಯ ಗುರುತನ್ನು ಬಹಿರಂಗಗೊಳಿಸಿಲ್ಲ. ಗಲಭೆಗೆ ಸಂಚು ರೂಪಿಸಿದ ಆರೋಪಿಗಳು ಪಿತೂರಿಗಾರರ ಪ್ರಮುಖ ತಂಡದ ಭಾಗವಾಗಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ದೆಹಲಿ ಗಲಭೆ: ಬಿಜೆಪಿ ನಾಯಕರ ವಿರುದ್ಧದ ದೂರುಗಳಿಗೆ ಕ್ರಮವಿಲ್ಲ- ಎನ್‌ಡಿಟಿವಿ ತನಿಖಾ ವರದಿ

ಈ ಹೇಳಿಕೆಯನ್ನು CrPC ಸೆಕ್ಷನ್ 164 ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ. ಪ್ರತಿಭಟನಾ ಸ್ಥಳಗಳಲ್ಲಿ ಖುರ್ಷಿದ್ ಭಾಷಣ ಮಾಡಿದ್ದರು ಎಂದು ಮತ್ತೊಬ್ಬ ಆರೋಪಿಯೂ ಕೂಡ  ಹೇಳಿದ್ದಾನೆ ಎಂದು ಪೊಲೀಸರು ದಾಖಲಿಸಿದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮುಖಂಡರಾದ ಸಲ್ಮಾನ್ ಖುರ್ಷಿದ್ “ನಾನು ನೀಡಿದ ಪ್ರಚೋದನಕಾರಿ ಹೇಳಿಕೆ ಏನು ಎಂದು ತಿಳಿಯಲು ನನಗೆ ಕುತೂಹಲವಿದೆ. ನಾನು ಸಾಂವಿಧಾನಿಕ, ನ್ಯಾಯಸಮ್ಮತವಾದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

ಇದುವರೆಗೆ ಪೊಲೀಸ್ ಚಾರ್ಜ್‌ಶೀಟ್‌ಗಳಲ್ಲಿ ಹೆಸರಿಸಲಾದವರಲ್ಲಿ ಖುರ್ಷಿದ್ ಉನ್ನತ ಮಟ್ಟದ ರಾಜಕಾರಣಿಯಾಗಿದ್ದಾರೆ. ಸರ್ಕಾರದ ಟೀಕಾಕಾರರನ್ನು ದಮನಿಸಲು ಗಲಭೆಯ ತನಿಖೆಯಲ್ಲಿ ಅವರ ಹೆಸರನ್ನು ಬಳಸಲಾಗುತ್ತಿದೆ ಎಂಬ ಆರೋಪ ಪೊಲೀಸರ ಮೇಲಿದೆ.

ಸಿಪಿಎಂ ಮುಖಂಡರಾದ ಬೃಂದಾ ಕಾರಟ್, ವಕೀಲ ಪ್ರಶಾಂತ್ ಭೂಷಣ್ ಮತ್ತು ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರ ಹೆಸರನ್ನೂ ದ್ವೇಷ ಭಾಷಣ ಮಾಡಿದ್ದಾರೆ ಎಂದು ಚಾರ್ಜ್‌ಶೀಟ್‌ನಲ್ಲಿ ಹೆಸರಿಸಲಾಗಿದೆ.

ಆದರೆ, ಬಿಜೆಪಿ ನಾಯಕರು ಜನರನ್ನು ಪ್ರಚೋದಿಸಿದ್ದಾರೆ ಹಾಗೂ ಗಲಭೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದ್ದ ಕನಿಷ್ಠ ಎಂಟು ದೂರುಗಳಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಎನ್‌ಡಿಟಿವಿ ಹೇಳಿದೆ. ಅದರಲ್ಲಿ ನಾಲ್ಕು ದೂರುಗಳಲ್ಲಿ ಯಾವುದೇ ಎಫ್‌ಐಆರ್‌ ಕೂಡಾ ದಾಖಲಿಸಲಾಗಿಲ್ಲ. ಉಳಿದವುಗಳನ್ನು ಯಾವುದೇ ಸಂಬಂಧವಿಲ್ಲದ ಪ್ರಕರಣಗಳಿಗೆ ಲಿಂಕ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ದೆಹಲಿ ಗಲಭೆ: ನ್ಯಾಯಯುತ ತನಿಖೆಗೆ ಒತ್ತಾಯ; ಮಾಜಿ IPS ಅಧಿಕಾರಿಗಳ ಪತ್ರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...