Homeಮುಖಪುಟಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

- Advertisement -
- Advertisement -

ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಗ್ಗೆ ತಮ್ಮ ಆತಂಕವನ್ನು ಪುನರುಚ್ಚರಿಸಿದ್ದು, ಇವಿಎಂಗಳನ್ನು ಸರಿಪಡಿಸದಿದ್ದರೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದ್ದಾರೆ.

ಇವಿಎಂಗಳಲ್ಲಿ ಬಗ್ಗೆ ನಂಬಿಕೆಯ ಕೊರತೆಯಿದೆ ಎಂದು ಹೇಳಿದ ಸ್ಯಾಮ್ ಪಿತ್ರೋಡಾ, ಈ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೂ (ಇಸಿಐ) ಪತ್ರ ಬರೆದಿರುವುದಾಗಿ ಹೇಳಿದ್ದಾರೆ. ಚುನಾವಣಾ ಆಯೋಗದ ಪ್ರತಿಕ್ರಿಯೆಗಾಗಿ ನಾನು ಕಾಯುತ್ತಿದ್ದೆ, ಆದರೆ ಅದು ಪ್ರತಿಕ್ರಿಯಿಸದಿದ್ದಾಗ ನಾನು ಮಾತನಾಡಲು ನಿರ್ಧರಿಸಿದೆ.  ಪಂಚ ರಾಜ್ಯಗಳ ಚುನಾವಣೆಗಳು ಮುಗಿದು 2024ರ ಚುನಾವಣೆ ಬರುತ್ತಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಇವಿಎಂ ಬಗ್ಗೆ ನಂಬಿಕೆಯ ಕೊರತೆಯಿದೆ ಎಂದು ನಾನು ಭಾವಿಸುತ್ತೇನೆ. ಈ ವರದಿಯನ್ನು ಆಧರಿಸಿ ಚುನಾವಣಾ ಆಯೋಗವು ವಿಶ್ವಾಸವನ್ನು ಪುನರ್‌ ನಿರ್ಮಿಸಲು ಸ್ಪಂದಿಸಬೇಕು. ಮುಂದಿನ ಚುನಾವಣೆಗೆ ಮೊದಲು ಇವಿಎಂ ಸರಿಪಡಿಸಬೇಕು. ಇವಿಎಂ ಸರಿಪಡಿಸದಿದ್ದರೆ 400 ಸ್ಥಾನಗಳು ನಿಜವಾಗಬಹುದು. ಇವಿಎಂ ಸರಿಪಡಿಸಿದರೆ ಅಷ್ಟು ಬರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇವಿಎಂಗಳ  ಪಾರದರ್ಶಕತೆ ಬಗ್ಗೆ ಪ್ರಶ್ನೆಗಳು ಹೊಸದೇನಲ್ಲ ಏಕೆಂದರೆ ವಿರೋಧ ಪಕ್ಷಗಳು ಬಿಜೆಪಿ ವಿರುದ್ದ ಹಲವಾರು ಬಾರಿ ಎಲೆಕ್ಟ್ರಾನಿಕ್ ಮತಯಂತ್ರಗಳ ದುರ್ಬಳಕೆ ಬಗ್ಗೆ ಆರೋಪಿಸಿದೆ. ಚುನಾವಣಾ ಆಯೋಗ ಈ ರೀತಿಯ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದೆ ಮತ್ತು ರಾಜಕೀಯ ಪಕ್ಷಗಳು ತಮ್ಮ ವಾದವನ್ನು ಸಾಬೀತುಪಡಿಸುವಂತೆ ಹೇಳಿದೆ. ಬಿಜೆಪಿಯು ಈ ವಿಷಯದ ಬಗ್ಗೆ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡಿದ್ದು, ಚುನಾವಣೆಯಲ್ಲಿ ಸೋಲಿನ ಹತಾಶೆಯಿಂದ ಪ್ರತಿಪಕ್ಷಗಳು ಈ ರೀತಿ ಹೇಳುತ್ತಿದ್ದಾರೆ ಎಂದು ಹೇಳಿಕೊಂಡು ಬಂದಿದೆ.

ರಾಮ ಮಂದಿರದ ಬಗ್ಗೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಸ್ಯಾಮ್ ಪಿತ್ರೋಡಾ, ಭಾರತದ ಶೇ.60ರಷ್ಟು ಜನರು ಬಿಜೆಪಿಗೆ ಮತ ಹಾಕುವುದಿಲ್ಲ. ಆದರೆ ಪ್ರಧಾನಿ ಮೋದಿ ಎಲ್ಲರ ಪ್ರಧಾನಿಯಾಗಿದ್ದಾರೆ. ಉದ್ಯೋಗ, ಹಣದುಬ್ಬರ, ವಿಜ್ಞಾನ ಮತ್ತು ತಂತ್ರಜ್ಞಾನದಂತಹ ವಿಷಯಗಳ ಬಗ್ಗೆ ಪ್ರಧಾನಿ ಮೋದಿ ಹೆಚ್ಚು ಮಾತನಾಡಬೇಕು ಎಂದು ಹೇಳಿದರು.

ರಾಮ ಮಂದಿರದ ಬಗ್ಗೆ ನನ್ನ ಹೇಳಿಕೆಗಳು ತಿರುಚಲ್ಪಟ್ಟಿವೆ. ನಾನು ಧರ್ಮವು ವೈಯಕ್ತಿಕ ವಿಷಯ ಎಂದು ಹೇಳುತ್ತಿದ್ದೇನೆ. ಅದನ್ನು ಜನರಿಗೆ ಬಿಡಿ, ಜನರು ತಮಗೆ ಬೇಕಾದುದನ್ನು ಆಚರಿಸಬೇಕು. ರಾಜಕೀಯಕ್ಕೆ ಧರ್ಮವನ್ನು ಎಳೆದು ತರುವುದು ಬೇಡ ಎಂದು ಅವರು ರಾಮ ಮಂದಿರದ ಕುರಿತು ತಮ್ಮ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದಾರೆ.  ರಾಮ ಮಂದಿರ ನಿಜವಾದ ಸಮಸ್ಯೆಯೋ ಅಥವಾ ಅದಕ್ಕಿಂತ ನಿರುದ್ಯೋಗ, ಹಣದುಬ್ಬರ ಸಮಸ್ಯೆಯೋ ಎಂದು ಇದಕ್ಕೂ ಮೊದಲು ಸ್ಯಾಮ್ ಪಿತ್ರೋಡಾ ಪ್ರಶ್ನಿಸಿದ್ದರು.

ಇದನ್ನು ಓದಿ: ನಿರುದ್ಯೋಗ, ಹಣದುಬ್ಬರಕ್ಕಿಂತ ರಾಮ ಮಂದಿರ ನೈಜ ಸಮಸ್ಯೆಯೇ: ಸ್ಯಾಮ್ ಪಿತ್ರೋಡಾ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...