Homeಮುಖಪುಟ‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದ ಕಾಂಗ್ರೆಸ್ ನಾಯಕ; ಬಿಜೆಪಿ ವಾಗ್ದಾಳಿ

‘ಸಂವಿಧಾನ ಉಳಿಸಲು ಮೋದಿಯನ್ನು ಕೊಲ್ಲಿರಿ’ ಎಂದ ಕಾಂಗ್ರೆಸ್ ನಾಯಕ; ಬಿಜೆಪಿ ವಾಗ್ದಾಳಿ

- Advertisement -
- Advertisement -

ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ರಾಜ್ಯ ಸಚಿವ ರಾಜಾ ಪಟೇರಿಯಾ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಬಿರುಗಾಳಿ ಎಬ್ಬಿಸಿದ್ದಾರೆ. “ಸಂವಿಧಾನವನ್ನು ಉಳಿಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಬೇಕು” ಎಂದು ಪ್ರೇಕ್ಷಕರನ್ನು ಉದ್ದೇಶಿಸಿ ಪಟೇರಿಯಾ ಮಾತನಾಡಿರುವುದು ವಿವಾದದ ಕೇಂದ್ರಬಿಂದುವಾಗಿದೆ.

ಪಟೇರಿಯಾ ತಕ್ಷಣವೇ ಸ್ಪಷ್ಟನೆ ನೀಡಿದ್ದಾರೆ. “ಈ ಮಾತಿನ ಅರ್ಥ ಕೊಲೆ ಮಾಡಿರಿ ಎಂದಲ್ಲ. ಆದರೆ ರಾಜಕೀಯವಾಗಿ ಸೋಲಿಸಿ ಎಂಬುದಾಗಿದೆ” ಎಂದಿದ್ದಾರೆ. ಈ ಹೇಳಿಕೆಗೆ ಹಲವಾರು ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದು ಪಟೇರಿಯಾ ಅವರ ಬಂಧನಕ್ಕೆ ಆಗ್ರಹಿಸಿದ್ದಾರೆ. “ಕಾಂಗ್ರೆಸ್‌ನ ನೈಜ ಮುಖ ಬಹಿರಂಗಗೊಂಡಿದೆ” ಎಂದು ಬಿಜೆಪಿ ಟೀಕಿಸಿದೆ.

ಈ ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ಗೃಹ ಸಚಿವರು, ರಾಜಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಕೇಂದ್ರ ಸಚಿವರೊಬ್ಬರು ಇದನ್ನು ‘ಕ್ಷಮಿಸಲಾಗದ ಅಪರಾಧ’ ಎಂದು ಕರೆದಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಡಿಯೋ ಹೇಳಿಕೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, “ಭಾರತ್ ಜೋಡೋ ಯಾತ್ರೆ ಮಾಡುವವರ ನಿಜವಾದ ಮುಖ ಹೊರಬರುತ್ತಿದೆ” ಎಂದು ತಿಳಿಸಿದ್ದಾರೆ.

ವೈರಲ್ ವೀಡಿಯೊದಲ್ಲಿ ಪಟೇರಿಯಾ ಅವರು ಹೇಳಿರುವುದೇನು?

ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ರಾಜಾ ಪಟೇರಿಯಾ ಮಾತನಾಡುತ್ತಾ ಪ್ರಧಾನಿ ಮೋದಿಯವರನ್ನು ಉಲ್ಲೇಖಿಸುತ್ತಾರೆ. “ಮೋದಿ ಚುನಾವಣಾ ವ್ಯವಸ್ಥೆಯನ್ನು ಕೊನೆಗೊಳಿಸುತ್ತಾರೆ. ಮೋದಿಯವರು ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ಒಡೆದು ಆಳುತ್ತಾರೆ. ದಲಿತರು, ಬುಡಕಟ್ಟು ಜನರು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ, ಮೋದಿಯನ್ನು ಕೊಲ್ಲಲು ಸಿದ್ಧರಾಗಬೇಕು” ಎಂದು ಕಾರ್ಯಕರ್ತರಿಗೆ ತಿಳಿಸುತ್ತಾರೆ.

ನಂತರ ಮಾತನಾಡುತ್ತಾ ರಾಜಾ ಪಟೇರಿಯಾ, “ಕೊಲೆ ಎಂದರೆ ಸೋಲು ಎಂಬರ್ಥ” ಎಂದು ಸ್ಪಷ್ಟನೆ ನೀಡುತ್ತಾರೆ. “ನಾನು ಮಹಾತ್ಮ ಗಾಂಧಿಯವರ ಅಹಿಂಸೆಯ ಸಿದ್ಧಾಂತವನ್ನು ಅನುಸರಿಸುತ್ತೇನೆ. ಅಲ್ಪಸಂಖ್ಯಾತರನ್ನು ರಕ್ಷಿಸಲು ಪ್ರಧಾನಿ ಮೋದಿಯನ್ನು ಚುನಾವಣೆಯಲ್ಲಿ ಸೋಲಿಸುವುದು ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ನಮ್ಮನ್ನು ಬಂಧಿಸಿ ಬೊಮ್ಮಾಯಿ ತಮ್ಮ ಕಾಲ ಮೇಲೆ ಕಲ್ಲು ಹಾಕಿಕೊಂಡಿದ್ದಾರೆ: ಅಂಬಣ್ಣ ಅರೋಲಿಕರ್

ಈ ವಿಡಿಯೋ ಪನ್ನಾ ಜಿಲ್ಲೆಯ ಪಾವಾಯಿ ಪಟ್ಟಣದಲ್ಲಿ ವರದಿಯಾಗಿದೆ. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವರಾಜ್ ಸಿಂಗ್ ಚೌಹಾಣ್, “ಕಾಂಗ್ರೆಸ್‌ನ ನೈಜ ಭಾವನೆಗಳು ಬಹಿರಂಗವಾಗಿವೆ” ಎಂದು ಆರೋಪಿಸಿದ್ದಾರೆ.

“ಗೌರವಾನ್ವಿತ ಪ್ರಧಾನಿ ಮೋದಿ ಅವರು ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರು ಇಡೀ ದೇಶದ ಅಭಿಮಾನ ಮತ್ತು ನಂಬಿಕೆಯ ಕೇಂದ್ರವಾಗಿದ್ದಾರೆ. ಕಾಂಗ್ರೆಸ್ ಜನರು ಚುನಾವಣಾ ಯುದ್ಧದಲ್ಲಿ ಪ್ರಧಾನಿಯನ್ನು ಎದುರಿಸಲು ಸಾಧ್ಯವಿಲ್ಲ. ಅವರ ಹತ್ಯೆಯ ಬಗ್ಗೆ ಕಾಂಗ್ರೆಸ್ ನಾಯಕರೊಬ್ಬರು ಮಾತನಾಡುತ್ತಾರೆ. ಇದು ಅಸೂಯೆಯ ಪರಮಾವಧಿ, ಇದು ಅತಿಯಾದ ದ್ವೇಷವಾಗಿದೆ. ಕಾಂಗ್ರೆಸ್‌ನ ನಿಜವಾದ ಭಾವನೆಗಳನ್ನು ಬಹಿರಂಗಪಡಿಸಲಾಗಿದೆ. ಆದರೆ ಅಂತಹ ವಿಷಯಗಳನ್ನು ಸಹಿಸುವುದಿಲ್ಲ, ಎಫ್‌ಐಆರ್ ದಾಖಲಾಗುತ್ತಿದೆ ಮತ್ತು ಕಾನೂನು ಕ್ರಮ ಜರುಗಿಸಲಾಗುತ್ತಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮೋದಿ ಎಂಥ ವ್ಯಕ್ತಿಯೇ ಆಗಿರಲಿ…. ಮೋದಿಯ ಆಡಳಿತ ನನಗೂ ಆಗಲ್ಲ ….. ಆದರೆ ಕೊಲ್ಲಿ ರಿ …. ಎಂಬ ಪದ ಉಪಯೋಗಿಸುವುದು ಯಾವ ನಿಗೂ ಅಧಿಕಾರ ಇಲ್ಲ…..

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...