Homeಕರ್ನಾಟಕ68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

- Advertisement -
ದೇಶದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸಂಭ್ರಮಾಚರಣೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ವಿರುದ್ಧ ಯಾವ ಸಾಧನೆಗೆ ಸಂಭ್ರಮಾಚರಣೆ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
“ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದು ಹೇಳಿದ್ದಾರೆ.
- Advertisement -

“ದೇಶದಲ್ಲಿ ಇಲ್ಲಿಯ ವರೆಗೆ 29 ಕೋಟಿ ಜನರಿಗೆ ಎರಡು ಡೋಸ್ ಮತ್ತು 42 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಮಾತ್ರ ನೀಡಲಾಗಿದೆ. 139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ..? ನರೇಂದ್ರಮೋದಿಯವರೇ” ಎಂದು ಪ್ರಶ್ನಿಸಿದ್ದಾರೆ.
“ಘೋಷಿತ ಗುರಿಯಂತೆ ದೇಶದ 103 ಕೋಟಿ ವಯಸ್ಕರಿಗೆ ಡಿಸೆಂಬರ್ 31ರೊಳಗೆ 2 ಡೋಸ್ ನೀಡಲು 206 ಕೋಟಿ ಲಸಿಕೆ ಬೇಕಾಗಿದೆ. ಕೊಟ್ಟಿರುವುದು 100 ಕೋಟಿ ಮಾತ್ರ. ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ” ಎಂದಿದ್ದಾರೆ.

“ಅಮೆರಿಕ 56%, ಚೀನಾ 70% ಜನಸಂಖ್ಯೆಗೆ ಎರಡು ಡೋಸ್ ಕೊರೊನಾ ಲಸಿಕೆ ನೀಡಿ ಬೂಸ್ಟರ್ ಲಸಿಕೆ ನೀಡುವ ಸಿದ್ದತೆಯಲ್ಲಿದೆ. ಭಾರತದಲ್ಲಿ ಕೇವಲ 21% ಜನಸಂಖ್ಯೆಗೆ ಮಾತ್ರ ಎರಡು ಡೋಸ್ ಲಸಿಕೆ ನೀಡಲಾಗಿದೆ. ಯಾವ ಸಾಧನೆಗೆ ಸಂಭ್ರಮ..? ‘ವೈಫಲ್ಯದ ವಿಶ್ವಗುರು’ ಕುಖ್ಯಾತಿಗಾಗಿಯೇ..?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಸುಳ್ಳು ಸಾಧನೆಗಳ ಖಾಲಿ ತಟ್ಟೆ ಬಡಿಯುತ್ತಾ ದೇಶದ ಜನರನ್ನು ಮರುಳು ಮಾಡುತ್ತಾ ಬಂದ ನರೇಂದ್ರ ಮೋದಿ ಅವರೇ? ಮೊದಲು ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಎರಡು ಡೋಸ್ ಲಸಿಕೆ ನೀಡಲು ಗಂಭೀರವಾಗಿ ಸರ್ಕಾರವನ್ನು ತೊಡಗಿಸಿಕೊಳ್ಳಿ. ಸಾಧನೆಯ ಸಂಭ್ರಮಾಚರಣೆ ಆಮೇಲೆ ಮಾಡೋಣ” ಎಂದು ಸಲಹೆ ನೀಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...