Homeಕರ್ನಾಟಕಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

ಇಂದಿರಾ ಕ್ಯಾಂಟಿನ್ ಮುಚ್ಚದಂತೆ ಸಿಎಂಗೆ ಸಿದ್ದರಾಮಯ್ಯ ಆಗ್ರಹ

"ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈಗ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನಿಸಲಾಗುತ್ತಿದೆ".

- Advertisement -
- Advertisement -

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರಂಭಿಸಲಾಗಿದ್ದ ಇಂದಿರಾ ಕ್ಯಾಂಟಿನ್ ಯೋಜನೆಯನ್ನು ಸ್ಥಗಿತಗೊಳಿಸಲು ಸರ್ಕಾರ ವ್ಯವಸ್ಥಿತವಾಗಿ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್‌ ಯೋಜನೆ ನಿಲ್ಲದ ಹಾಗೆ ನೋಡಿಕೊಂಡು, ಹಸಿದವರ ಹಸಿವನ್ನು ನೀಗಿಸುವ ಕೆಲಸ ಮಾಡಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಇಷ್ಟನ್ನೂ ಮಾಡಲು ಮೀನಾಮೇಷ ಎಣಿಸುವುದನ್ನು ನೋಡಿದರೆ ಬಡವರ ಪರ ಯಡಿಯೂರಪ್ಪರ ಕಾಳಜಿಯ ಕುರಿತು ಸಂದೇಹಗಳು ಹುಟ್ಟುತ್ತಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ದುಡಿಯುವ ಕಾರ್ಮಿಕರು , ಬಡವರು ಮುಂತಾದವರ ಹಸಿವನ್ನು ನೀಗಿಸಲು ಬಿಬಿಎಂಪಿ ಮತ್ತು ಜಿಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲಾಗಿತ್ತು . ಈ ಕ್ಯಾಂಟಿನ್‌ಗಳು ಸುಸೂತ್ರವಾಗಿ ರಾಜ್ಯದ ಉದ್ದಗಲಕ್ಕೂ ಹಸಿದವರ ಹೊಟ್ಟೆ ತುಂಬಿಸುವ ಕೆಲಸವನ್ನು ಮಾಡುತ್ತಿವೆ. ಆದರೆ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ನಂತರ ನಿರಂತರವಾಗಿ ಇಂದಿರಾ ಕ್ಯಾಂಟಿನ್‌ಗಳನ್ನು ವ್ಯವಸ್ಥಿತವಾಗಿ ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಾಣಿಸುತ್ತಿದೆ” ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ರಚನೆ: ಸಿಎಂ ನಡೆಗೆ ಸೊಗಡು ಶಿವಣ್ಣ ತೀವ್ರ ಅಸಮಾಧಾನ

’ಇಂದಿರಾ ಕ್ಯಾಂಟಿನ್‌ ಗಳಿಗೆ ಬಿಡುಗಡೆ ಮಾಡಬೇಕಾದ ಹಣವನ್ನು ನಿಗದಿತವಾಗಿ ಬಿಡುಗಡೆ ಮಾಡದೇ ಸರ್ಕಾರ ಸತಾಯಿಸಲಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಕ್ಯಾಂಟಿನ್‌ಗಳಿಗೆ ಸುಮಾರು 28 ಕೋಟಿಗಳನ್ನು ಬಿಡುಗಡೆ ಮಾಡದೇ ಸುಮಾರು 6 ತಿಂಗಳಿನಿಂದ ಬಾಕಿ ಉಳಿಸಿಕೊಳ್ಳಲಾಗಿದೆ’ ಎಂದು ಪತ್ರದಲ್ಲಿ ಬರೆದಿದ್ದಾರೆ.

’198 ಕ್ಯಾಂಟಿನ್‌ಗಳಿಗೆ ನೀರಿನ ಸಂಪರ್ಕ ಮತ್ತು ಸ್ಯಾನಿಟರಿ ಲೈನನ್ನು ಕೂಡ ಬಿಡಬ್ಲೂಎಸ್ಎಸ್‌ಬಿ ಕಡಿತಗೊಳಿಸಿದೆ. ಅಲ್ಲದೇ 12 ಅಡಿಗೆ ಮನೆಗಳಿಗೂ ನೀರಿನ ಸಂಪರ್ಕವನ್ನು ನಿಲ್ಲಿಸಲಾಗಿದೆ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಇಂದಿರಾ ಕ್ಯಾಂಟಿನ್‌ ಹೆಸರನ್ನು ಬದಲಾಯಿಸಿ ರಾಜಕಾರಣ ಮಾಡಲು ಸಹ ಪ್ರಯತ್ನಿಸಲಾಗಿತ್ತು. ಈ ರೀತಿಯ ಹಲವು ಹುನ್ನಾರಗಳನ್ನು ಮಾಡಿ ಕ್ಯಾಂಟಿನ್‌ಗಳನ್ನು ಮುಚ್ಚಲು ಪ್ರಯತ್ನ ಮಾಡುತ್ತಿರುವಂತೆ ಕಂಡು ಬರುತ್ತಿದ್ದು ಇವೆಲ್ಲ ಬಿಜೆಪಿ ಸರ್ಕಾರ ಹಸಿದವರ, ಬಡವರ, ದೀನರ ಪರವಾಗಿ ಇಲ್ಲ ಎನ್ನುವುದಕ್ಕೆ ಉದಾಹರಣೆಗಳಾಗಿವೆ” ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಅನ್ನದಾತರ ಹೋರಾಟದ ಪರವಾಗಿ ನಾವಿದ್ದೇವೆ: ಸಿದ್ದರಾಮಯ್ಯ

ಇನ್ನು, ’ಇತ್ತೀಚೆಗೆ ಸರ್ಕಾರ ಹಲವು ರೀತಿಯ ದುಂದು ವೆಚ್ಚದ, ಅಗತ್ಯವಿಲ್ಲದ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರು ದುಡಿಮೆ ಇಲ್ಲದೇ ಪರಿತಪ್ಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್‌ಗಳಲ್ಲಿ ಉಚಿತವಾಗಿ ಆಹಾರವನ್ನು ನೀಡಬೇಕೆಂದು ಈ ಹಿಂದೆ ಪತ್ರ ಬರೆದು ಒತ್ತಾಯಿಸಿದ್ದೆವು. ಇದಕ್ಕೆ ಹೆಚ್ಚೆಂದರೆ ವರ್ಷಕ್ಕೆ 200 ರಿಂದ 250 ಕೋಟಿ ರೂಪಾಯಿ ಖರ್ಚು ಬರಬಹುದು. ಆದರೆ, ಹಸಿದವರ ಹೊಟ್ಟೆ ತುಂಬಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟೀನ್ ನಿಲ್ಲದ ಹಾಗೆ ನೋಡಿಕೊಳ್ಳಿ. ಹಸಿದವರ ಹಸಿವನ್ನು ನೀಗಿಸುವ ಕೆಲಸಕ್ಕೆ ಮುಖ್ಯಮಂತ್ರಿಗಳೇ ಖುದ್ದು ಆಸಕ್ತಿ ವಹಿಸಿ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...