Homeಮುಖಪುಟರವೀಂದ್ರನಾಥ ಟ್ಯಾಗೋರ್‌ರ 'ಅಮರ್ ಸೋನಾರ್ ಬಾಂಗ್ಲಾ' ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ...

ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ

- Advertisement -
- Advertisement -

ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ಮುಖಂಡರೊಬ್ಬರು ನೋಬೆಲ್ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್ ಅವರ ಪ್ರಸಿದ್ಧ ಗೀತೆ ‘ಅಮರ್ ಸೋನಾರ್ ಬಾಂಗ್ಲಾ’ (ನನ್ನ ಚಿನ್ನದ ಬಾಂಗ್ಲಾ) ಗೀತೆಯ ಎರಡು ಸಾಲುಗಳನ್ನು ಹಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್ ನಾಯಕ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಬುಧವಾರ (ಅ.29) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕಾನೂನು ಕ್ರಮಕ್ಕೆ ಸೂಚಿಸಿದ್ದಾರೆ.

ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ಸಿಎಂ ನಿರ್ದೇಶನ ಆಡಳಿತಾರೂಢ ಬಿಜೆಪಿಯ ಅಜ್ಞಾನವನ್ನು ಬಿಂಬಿಸುತ್ತದೆ. ಬಿಜೆಪಿ ಬಂಗಾಳಿ ಸಂಸ್ಕೃತಿಯನ್ನು ಅವಮಾನಿಸಿದೆ ಎಂದು ಹೇಳಿದೆ.

ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸೇವಾ ದಳದ ಸಭೆಯಲ್ಲಿ ಪಕ್ಷದ ಹಿರಿಯ ಸದಸ್ಯ ವಿಧುಭೂಷಣ್ ದಾಸ್ ಅವರು ‘ಅಮರ್ ಸೋನಾರ್ ಬಾಂಗ್ಲಾ’ದ ಎರಡು ಸಾಲುಗಳನ್ನು ಹಾಡಿದ್ದಾರೆ ಎನ್ನಲಾಗಿದೆ. ಈ ವಾರದ ಆರಂಭದಲ್ಲಿ ನಡೆದಿರುವ ಸಭೆಯ ವಿಡಿಯೋ ಈಗ ವೈರಲ್ ಆಗಿದ್ದು, ಬಿಜೆಪಿ ಅದನ್ನು ವಿವಾದಕ್ಕೆ ತಿರುಗಿಸಿದ ಬಳಿಕ ಸಿಎಂ ಕ್ರಮಕ್ಕೆ ಸೂಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಕಾಂಗ್ರೆಸ್‌ನಿಂದ ಭಾರತ, ಭಾರತೀಯರಿಗೆ ಅವಮಾನ : ಸಿಎಂ ಶರ್ಮಾ

“ಎರಡು ದಿನಗಳ ಹಿಂದೆ ಶ್ರೀಭೂಮಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಭಾರತದ ರಾಷ್ಟ್ರಗೀತೆಯ ಬದಲಿಗೆ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಲಾಗಿದೆ. ಇದು ಭಾರತದ ಜನರಿಗೆ, ರಾಷ್ಟ್ರಗೀತೆಗೆ ಮಾಡಿದ ಅವಮಾನ. ಅಂತಿಮವಾಗಿ ಈಶಾನ್ಯ ಭಾರತವು ಬಾಂಗ್ಲಾದೇಶದ ಭಾಗವಾಗುತ್ತದೆ ಎಂಬ ಅಲ್ಲಿನ ನಾಯಕರ ಇತ್ತೀಚಿನ ಹೇಳಿಕೆಗೆ ಅನುಗುಣವಾಗಿ ಕಾಂಗ್ರೆಸ್‌ನವರು ನಡೆದುಕೊಂಡಿದ್ದಾರೆ” ಎಂದು ಬುಧವಾರ ನಡೆದ ಸಂಪುಟ ಸಭೆಯ ನಂತರ ಸಿಎಂ ಶರ್ಮಾ ಹೇಳಿದ್ದಾರೆ.

ಸಿಎಂ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಗೌರವ್ ಗೊಗೊಯ್, “ಬಿಜೆಪಿಯ ಆರೋಪಗಳು ರವೀಂದ್ರನಾಥ ಟ್ಯಾಗೋರ್ ಹಾಗೂ ಬಂಗಾಳಿ ಭಾವನೆಗಳು ಮತ್ತು ಸಂಸ್ಕೃತಿಯ’ ಕುರಿತು ಅವರ ಅಜ್ಞಾನವನ್ನು ಸೂಚಿಸುತ್ತದೆ” ಎಂದಿದ್ದಾರೆ.

“ಇದು ರವೀಂದ್ರನಾಥ ಟ್ಯಾಗೋರ್ ರಚಿಸಿದ ಹಾಡು. ಇದು ಬಂಗಾಳಿ ಸಂಸ್ಕೃತಿಯ ಭಾವನೆಗಳನ್ನು ತಿಳಿಸುವ ಹಾಡು. ಬಿಜೆಪಿ ಸದಾ ಬಂಗಾಳಿ ಭಾಷೆ, ಬಂಗಾಳಿ ಸಂಸ್ಕೃತಿ ಮತ್ತು ಬಂಗಾಳದ ಜನರನ್ನು ಅವಮಾನಿಸುತ್ತಾ ಬಂದಿದೆ. ಅವರು ತಮ್ಮ ಅಜ್ಞಾನವನ್ನು ತೋರಿಸಿದ್ದಾರೆ. ರವೀಂದ್ರನಾಥ ಟ್ಯಾಗೋರ್ ಅವರ ಇತಿಹಾಸ ಮತ್ತು ಅವರ ತತ್ವಶಾಸ್ತ್ರದ ಬಗ್ಗೆ ಬಿಜೆಪಿಗರಿಗೆ ತಿಳಿದಿಲ್ಲ. ಬಂಗಾಳದ ಜನರು ಮತ್ತು ಭಾರತದ ವಿವಿಧ ಭಾಗಗಳಲ್ಲಿರುವ ಬಂಗಾಳಿ ಮಾತನಾಡುವ ಜನರನ್ನು ಬಿಜೆಪಿ ಮತಕ್ಕಾಗಿ ಮಾತ್ರ ಬಳಸುತ್ತದೆ. ಅವರ ಸಂಸ್ಕೃತಿ, ಭಾಷೆ ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

ಅಸ್ಸಾಂನ ಶ್ರೀಭೂಮಿ ಜಿಲ್ಲೆಯು ಹೆಚ್ಚಾಗಿ ಬಂಗಾಳಿ ಭಾಷೆ ಮಾತನಾಡುವ ಜನರಿರುವ ಬರಾಕ್ ಕಣಿವೆಯಲ್ಲಿದೆ. ಇದು ಬಾಂಗ್ಲಾದೇಶದ ಗಡಿ ಪ್ರದೇಶವಾಗಿದೆ. 1947ರ ದೇಶ ವಿಭಜನೆ ಈ ಪ್ರದೇಶದ ಮೇಲೆ ಗಮನಾರ್ಹ ಪರಿಣಾಮ ಬೀರಿದೆ.

‘ಅಮರ್ ಸೋನಾರ್ ಬಾಂಗ್ಲಾ’ ಗೀತೆ

‘ಅಮರ್ ಸೋನಾರ್ ಬಾಂಗ್ಲಾ’ 1905ರಲ್ಲಿ ಬ್ರಿಟಿಷ್ ವೈಸ್‌ರಾಯ್ ಲಾರ್ಡ್ ಕರ್ಜನ್ ಬಂಗಾಳವನ್ನು ವಿಭಜನೆ ಮಾಡಿದ್ದನ್ನು ವಿರೋಧಿಸಿ ನಡೆದ ಸ್ವದೇಶಿ ಚಳವಳಿಯ ಸಮಯದಲ್ಲಿ ರವೀಂದ್ರನಾಥ ಟ್ಯಾಗೋರ್ ಅವರು ಬರೆದ ಮಹತ್ವದ ಗೀತೆಯಾಗಿದೆ.

ಲಾರ್ಡ್ ಕರ್ಜನ್ ಬಂಗಾಳವನ್ನು ಹಿಂದೂ ಬಹುಸಂಖ್ಯಾತ ಪಶ್ಚಿಮ ಮತ್ತು ಮುಸ್ಲಿಂ ಬಹುಸಂಖ್ಯಾತ ಪೂರ್ವ ಎಂದು ವಿಭಜಿಸಿದ್ದರು. ಇದನ್ನು ‘ಒಡೆದು ಆಳುವ’ ತಂತ್ರ ಎಂದು ವಿರೋಧಿಸಿ ಸ್ವದೇಶಿ ಚಳವಳಿ ಕಟ್ಟಲಾಗಿತ್ತು.

ಬಂಗಾಳದ ಏಕತೆ, ಹೆಮ್ಮೆ ಮತ್ತು ಪ್ರತಿರೋಧವನ್ನು ಪ್ರೇರೇಪಿಸಲು ಬರೆದ ಗೀತೆಯನ್ನು ಸೆಪ್ಟೆಂಬರ್ 1905 ರಲ್ಲಿ ಬಂಗಾಳಿ ಸಾಹಿತ್ಯ ಪತ್ರಿಕೆ ‘ಭಾರತಿ’ ಮೊದಲ ಬಾರಿಗೆ ಪ್ರಕಟಿಸಿತ್ತು. ಕಲ್ಕತ್ತಾದಲ್ಲಿ (ಕೋಲ್ಕತ್ತಾ) ನಡೆದ ಪ್ರತಿಭಟನಾ ಸಭೆಗಳಲ್ಲಿ ಈ ಗೀತೆಯನ್ನು ಹಾಡಲಾಗಿತ್ತು.

“ನಾನು ವಿಭಜನೆಯನ್ನು ಪ್ರತಿಭಟಿಸಲು ‘ಅಮರ್ ಸೋನಾರ್ ಬಾಂಗ್ಲಾ’ ಬರೆದೆ… ನಾನು ಬಂಗಾಳವನ್ನು ನನ್ನ ತಾಯಿಯಾಗಿ, ಚಿನ್ನವಾಗಿ ಮತ್ತು ಸುಂದರವಾಗಿ ನೋಡಿದೆ” ಎಂದು ಸ್ವತಃ ಟ್ಯಾಗೋರ್ ಅವರು ಈ ಗೀತೆ ಕುರಿತು ಹೇಳಿದ್ದರು.

ಬಂಗಾಳಿ ಸಾಂಸ್ಕೃತಿಕ ಗುರುತು ಮತ್ತು ವಸಾಹತುಶಾಹಿ ವಿರೋಧಿ ಪ್ರತಿರೋಧದ ಸಂಕೇತವಾದ ಈ ಗೀತೆಯನ್ನು ಭಾರತದ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಂಗಾಳದಾದ್ಯಂತ ಶಾಲೆಗಳು, ಪ್ರತಿಭಟನಾ ಸಭೆಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಡಲಾಗಿತ್ತು.

ಬಾಂಗ್ಲಾದೇಶ ರಾಷ್ಟ್ರಗೀತೆ-1971

ಮಾರ್ಚ್–ಡಿಸೆಂಬರ್ 1971ರಲ್ಲಿ ಪೂರ್ವ ಪಾಕಿಸ್ತಾನ ಪಶ್ಚಿಮ ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಲು ‘ಬಾಂಗ್ಲಾದೇಶ ವಿಮೋಚನಾ’ ಹೋರಾಟ ನಡೆಯಿತು.

ಬಾಂಗ್ಲಾದೇಶ ಸ್ವತಂತ್ರ ರಾಷ್ಟ್ರವಾಗಿ ಪಾಕಿಸ್ತಾನದಿಂದ ವಿಮೋಚನೆಗೊಂಡ ಬಳಿಕ, ಅಂದರೆ 13 ಜನವರಿ 1972ರಲ್ಲಿ ಬಾಂಗ್ಲಾದೇಶದ ಮೊದಲ ಗಣರಾಜ್ಯೋತ್ಸವ ಸಮಾರಂಭದಲ್ಲಿ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆಯನ್ನು ಮೊದಲ ಬಾರಿಗೆ ಕೇಳಿಸಲಾಗಿತ್ತು. ಬಳಿಕ 1972ರಲ್ಲಿ ಗೀತೆಯ ಮೊದಲ ಹತ್ತು ಸಾಲುಗಳು ಅಧಿಕೃತವಾಗಿ ಬಾಂಗ್ಲಾದೇಶದ ರಾಷ್ಟ್ರಗೀತೆಯ ಭಾಗವಾದವು.

‘ಥರ್ಡ್‌ ಕ್ಲಾಸ್‌ ವಂಚಕನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’: ಅಸ್ಸಾಂ ಸಿಎಂಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...