Homeಕರ್ನಾಟಕ'ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..'; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’; ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡ ಎಚ್‌ಡಿಕೆ

- Advertisement -
- Advertisement -

ಕೆರಗೋಡು ಹನುಮಧ್ವಜ ಹೋರಾಟದಲ್ಲಿ ಸೋಮವಾರ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಧರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ತಾವು ಕೇಸರಿ ಶಾಲು ಧರಿಸಿದ್ದನ್ನು ಸಮರ್ಥಿಸಿಕೊಂಡಿರುವ ‘ಜಾತ್ಯತೀತ’ ಪಕ್ಷದ ನಾಯಕ, ‘ಕಾಂಗ್ರೆಸ್ ನಾಯಕರದ್ದು ಸಂಕುಚಿತ ಮನೋಭಾವ..’ ಎಂದು ಟೀಕಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪಕ್ಷದ ನಾಯಕರ, ಕಾರ್ಯಕರ್ತರ ದುಡಿಮೆಯನ್ನು ನಾನು ಕೇಸರಿ ಶಾಲು ಹಾಕಿಕೊಂಡು ಬಿಜೆಪಿಗೆ ಒಪ್ಪಿಸಿಬಿಟ್ಟಿದ್ದೇನೆ ಎಂದು ಸಚಿವರು ಟೀಕೆ ಮಾಡಿದ್ದಾರೆ. ಕೇಸರಿ ಶಾಲು ಅಷ್ಟೇ ಅಲ್ಲ, ದಲಿತ ಸಮಾವೇಶಗಳಿಗೆ ಹೋದಾಗ ನೀಲಿ ಶಾಲನ್ನು ಹಾಕಿಕೊಂಡಿದ್ದೇನೆ. ರೈತರ ಸಮಾವೇಶಕ್ಕೆ ಹೋದಾಗ ಹಸಿರು ಶಾಲು ಹಾಕಿದ್ದೇನೆ. ನಾನು ಮಂಡ್ಯದಲ್ಲಿ ಕೇಸರಿ ಶಾಲು ಹಾಕಿದ್ದೆ ಸರಿ, ನನ್ನ ಉಡುಪು ಬಿಳಿ, ನಮ್ಮ ಪಕ್ಷದ ಬಣ್ಣ ಹಸಿರು. ಆದರೆ, ಕೇಸರಿ ಬಗ್ಗೆ ಮಾತ್ರ ಕಾಂಗ್ರೆಸ್ ನಾಯಕರಿಗೆ ಸಂಕುಚಿತ ಮನೋಭಾವ ಇದೆ’ ಎಂದು ಟೀಕಾಪ್ರಹಾರ ನಡೆಸಿದರು.

‘ಕಾಂಗ್ರೆಸ್‌ನವರು ತಿರಂಗದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ತಿರಂಗದಲ್ಲಿ ಕೇಸರಿ, ಬಿಳಿ, ಹಸಿರು ಮೂರು ಬಣ್ಣಗಳಿವೆ. ಕೇಸರಿ ಇಲ್ಲದೆ ತಿರಂಗವನ್ನು ನಾವು ಊಹೆ ಮಾಡಿಕೊಳ್ಳಲು ಆಗುತ್ತದೆಯೇ? ಕಾಂಗ್ರೆಸ್ ಕೇಸರಿ ನೆಪದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕುಮಾರಸ್ವಾಮಿ ಅವರು ಬಂದು ಮಂಡ್ಯದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ ಎಂದು ಹೇಳಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು; ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬ ಮನೋಭಾವನೆಯ ವ್ಯಕ್ತಿ ಅವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಾನು ಮಂಡ್ಯಕ್ಕೆ ಬೆಂಕಿ ಹಚ್ಚಲು ಹೋಗಿರಲಿಲ್ಲ. ಸರ್ಕಾರ ಮಾಡಿರುವ ತಪ್ಪುಗಳನ್ನು ಜನರಿಗೆ ತಿಳಿಸಲು ಹೋಗಿದ್ದೆ. ಗಣರಾಜ್ಯದ ದಿನ ಕೆರಗೋಡುನಲ್ಲಿ ಜನವರಿ 26ರಂದು ಗ್ರಾಮಸ್ಥರು ತ್ರಿವರ್ಣ ದ್ವಜ ಹಾರಿಸಿ ಸಂಜೆ ಅದನ್ನು ಇಳಿಸಿದ್ದಾರೆ. ಆ ಗ್ರಾಮದ ಸರ್ಕಾರಿ ಕಾರ್ಯಕ್ರಮಕ್ಕೆ ಸ್ಥಳಿಯ ಶಾಸಕರನ್ನು ಆಹ್ವಾನ ಮಾಡಿಲ್ಲ ಎಂಬ ಕಾರಣಕ್ಕಾಗಿ ಇದೆಲ್ಲಾ ಶುರು ಮಾಡಿಕೊಂಡಿದ್ದಾರೆ’ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಮಂಡ್ಯದಲ್ಲಿ ಇಂದು ಮಾಧ್ಯಮಗಳ ಜತೆ ಸಚಿವರು ಮಾತನಾಡಿದ್ದನ್ನು ನೋಡಿದೆ. ಅವರ ನಯ ವಿನಯ ನಾಜೂಕುತನವನ್ನು ಗಮನಿಸಿದೆ. ‘ಅತಿ ವಿನಯಂ ದೂರ್ತ ಲಕ್ಷಣಂ’ ಎಂಬಂತೆ ಇತ್ತು ಅವರ ಹಾವಭಾವ’ ಎಂದು ಲೇವಡಿ ಮಾಡಿದರು.

‘ನಮ್ಮ ಹಳೆಯ ಸ್ನೇಹಿತರು ಕೆಲವು ಸಲಹೆಗಳನ್ನು ಕೊಟ್ಡಿದ್ದಾರೆ. ಮಂಡ್ಯ ಜಿಲ್ಲೆ ಹಾಳು ಮಾಡಲು ನಾನು ಮಂಡ್ಯಕ್ಕೆ ಹೊಗಿದ್ದೆ ಅಂದಿದ್ದಾರೆ. ಮಂಡ್ಯದ ಘಟನೆಗೂ ನನಗೂ ಏನು ಸಂಬಂಧ ಇದೆ ಎನ್ನುವುದು ಆ ಜಿಲ್ಲೆಯ ಜನರಿಗೆ ಗೊತ್ತಿದೆ. ನಿಮ್ಮ ಆಡಳಿತ ವೈಫಲ್ಯ, ನಡವಳಿಕೆ ಕೆರಗೋಡು ಘಟನೆಗೆ ಕಾರಣ. ಆದರೆ, ತಮ್ಮ ಹಾಗೂ ಸರ್ಕಾರದ ಹುಳುಕು ಮುಚ್ಚಿಟ್ಟಿಕೊಳ್ಳಲು ನನ್ನ ಮೇಲೆ ಅರೋಪ ಮಾಡುತ್ತಿದ್ದಾರೆ’ ಎಂದು ಕುಮಾರಸ್ವಾಮಿ ಹೇಳಿದರು.

‘ಕೆರಗೋಡು ಗ್ರಾಮದಲ್ಲಿ ಧ್ವಜಸ್ತಂಭ ಇಳಿಸಿದ ಘಟನೆಯ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ಸರ್ಕಾರವೇ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳು ಈ ಘಟನೆಯನ್ನು ಖಂಡಿಸಿವೆ. ಒಟ್ಟಿಗೆ ಪ್ರತಿಭಟನೆ ಮಾಡಿವೆ. ಬಿಜೆಪಿ ನಾಯಕರ ಜತೆ ನಾನೂ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದೇನೆ. ಅಲ್ಲಿ ನಾನು ಏನು ಹೇಳಿದೆ ಎನ್ನುವುದು ಈ ವ್ಯಕ್ತಿಗೆ ಗೊತ್ತಿಲ್ಲವೇ? ನಾನು ತಪ್ಪು ಮಾಡಿದ್ದರೆ ನೇಣಿಗೆ ಹಾಕಿ’ ಎಂದು ಸವಾಲು ಹಾಕಿದರು.

ಸಮಾಜದಲ್ಲಿ ಶಾಂತಿಯ ವಾತಾವರಣ ತರುವುದನ್ನು ನಿಮ್ಮಿಂದ ನಾನು ಕಲಿಯಬೇಕಾಗಿಲ್ಲ ಎಂದು ಹೆಸರು ಹೇಳದೆಯೇ ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಮಂಡ್ಯ ಸಕ್ಕರೆ ಕಾರ್ಖಾನೆ ಆರಂಭಿಸಬಹುದಿತ್ತು ಎಂದಿದ್ದಾರೆ ಅವರು, ನನ್ನ ಸರ್ಕಾರದ ಬಜೆಟ್ ಪುಸ್ತಕ ತೆಗೆದು ನೋಡಲಿ. ನಾನು ಏನು ಕೊಟ್ಟಿದ್ದೇನೆ, ಏನೆಲ್ಲಾ ಘೋಷಣೆ ಮಾಡಿದ್ದೇನೆ ಎನ್ನುವುದು ಗೊತ್ತಾಗುತ್ತದೆ’ ಎಂದು ಅವರು ಕಿಡಿಕಾರಿದರು.

‘ಮಂಡ್ಯದಲ್ಲಿ ನಾನು ಮಾತನಾಡುವಾಗಲೂ ಬಹಳ ಸೂಕ್ಷ್ಮವಾಗಿ ಕೆಲವು ವಿಚಾರಗಳನ್ನು ಹೇಳಿದ್ದೇನೆ. ಕೆರಗೋಡು ಜನರ ಭಾವನೆಗಳ ಬಗ್ಗೆ ಮಾತನಾಡಿದ್ದೇನೆ. ಸರ್ಕಾರದ ವೈಫಲ್ಯಗಳ ಬಗ್ಗೆ ಮಾತಾಡಿದ್ದೇನೆ. ನಿಮ್ಮ ಸ್ಥಳೀಯ ಶಾಸಕರಿಗೆ ಹೇಗೆ ಮಾತನಾಡಬೇಕು ಅಂತ ಹೇಳಿಕೊಡಿ’ ಎಂದು ಸಚಿವರಿಗೆ ಟಾಂಗ್ ನೀಡಿದರು.

ನಕಲಿ ದಾಖಲೆ ಸೃಷ್ಟಿ

‘ಕೆರಗೋಡಿನ ವಿಚಾರ ಹೇಗೆ ಆರಂಭವಾಯಿತು ಎನ್ನುವುದು ಎಲ್ಲರಿಗೂ ತಿಳಿದಿದೆ. ಮೊದಲು ಒಂದು ಪಂಚಾಯಿತಿ ನಿರ್ಣಯದಲ್ಲಿ ದ್ವಜಸ್ತಂಭ ಸ್ಥಾಪಿಸಲು ಅನುಮತಿ ಕೇಳಿರುವ ಬಗ್ಗೆ ಉಲ್ಲೇಖ ಇದೆ. ಗೌರಿಶಂಕರ ಸೇವಾ ಟ್ರಸ್ಟ್ 27 ನವೆಂಬರ್ ನಲ್ಲಿ ಅರ್ಜಿ ಕೊಟ್ಟಿದೆ. ಆಗ ಧ್ವಜಸ್ತಂಭಕ್ಕೆ ಡಿಸೆಂಬರ್ 29ರಂದು ಅನುಮತಿ ಕೊಟ್ಟಿದ್ದಾರೆ. ಇಲ್ಲಿ ತಿದ್ದುವ ಕೈಚಳಕ ನಡೆದಿದೆ. ಡಿಸೆಂಬರ್‌ನಲ್ಲಿ ಕೊಟ್ಟಿರುವ ಅನುಮತಿಯಲ್ಲಿ ತ್ರಿವರ್ಣ ದ್ವಜ ಮತ್ತು ಕನ್ನಡ ಭಾವುಟಕ್ಕೆ ಅನುಮತಿ ಅಂತ ಇದೆ’ ಎಂದರು.

‘ಅಷ್ಟೇ ಅಲ್ಲ… ಕೆರಗೋಡು ಗ್ರಾಮದಲ್ಲಿ ದ್ವಜಸ್ತಂಭದ ಸ್ಥಳದಲ್ಲಿ ನಾನಾ ಪ್ರತಿಮೆಗಳನ್ನು ನಿರ್ಮಾಣ ಮಾಡಲು, ಬೇರೆ ಬೇರೆ ಸಮಯದಲ್ಲಿ ದಾಖಲೆಗಳನ್ನು ಸೃಷ್ಟಿ ಮಾಡಲಾಗಿದೆ. ಅರ್ಜಿಗಳನ್ನು ಕೊಡಿಸಲಾಗಿದೆ. ಇದೆಲ್ಲವೂ ಪೂರ್ವಯೋಜಿತವಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಮಾಡಲಾಗಿದೆ’ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

‘ಸೋಮವಾರ ಸಂಜೆ ಆರು ಗಂಟೆಗೆ ಪಿಡಿಓ ನ ಸಸ್ಪೆಂಡ್ ಮಾಡಲು ಆದೇಶ ಮಾಡಲಾಗಿದೆ. ಆದರೆ, ಶಾಸಕ ಸಸ್ಪೆಂಡ್ ಮಾಡುತ್ತೇನೆ ಎಂದು ಹೇಳಿಕೆ ಕೊಟ್ಟ ಮೇಲೆ ನಿಮ್ಮ ಸರ್ಕಾರದ ಆದೇಶ ಬಂದಿದೆ. ಇದೆಲ್ಲಾ ಏನು ಸೂಚಿಸುತ್ತದೆ’ ಎಂದು ಅವರು ಪ್ರಶ್ನಿಸಿದರು.

‘ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ರಾಮಮಂದಿರ ಕಟ್ಟಿದ್ದು ಜನರ ದೇಣಿಗೆಯ ಹಣದಿಂದ. ಸಿದ್ದರಾಮಯ್ಯ ಅವರ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿದ್ದು ಜನರ ತೆರಿಗೆ ಹಣದಿಂದ’ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

‘ಅಯೋಧ್ಯೆ ವಿಚಾರದಲ್ಲಿ ಮೋದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಇವರು ಗ್ಯಾರಂಟಿಗಳ ವಿಷಯದಲ್ಲಿ ಮಾಡಿದ್ದೇನು? ರಾಜಕೀಯವನ್ನೇ ಮಾಡಿದರು, ಅಲ್ಲವೇ? ನಾನು ಕೂಡ ಹಿಂದೆ ಮಂದಿರಕ್ಕೆ ಹಣ ಸಂಗ್ರಹ ಮಾಡಿರುವ ಬಗ್ಗೆ ಲೆಕ್ಕ ಕೇಳಿದ್ದೇನೆ. ರಾಮನ ಬಗ್ಗೆ ನಂಬಿಕೆ ಇರಿಸಿರಿಕೊಂಡಿರುವ ಕುಟುಂಬಗಳು ದೇಣಿಗೆ ಕೊಟ್ಟಿದ್ದಾರೆ. ಇವರು ರಾಜ್ಯದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಬೇಕಾದರೆ, ಅವುಗಳನ್ನು ಜಾರಿ ಮಾಡಿದ ಸಂದರ್ಭದಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ,ರಾಹುಲ್ ಗಾಂಧಿ ಅವರನ್ನು ಕರೆಸಿ ಕಾರ್ಯಕ್ರಮ ಮಾಡಬಹುದಾ? ಅವರಿಗೂ ರಾಜ್ಯಕ್ಕೂ ಏನು ಸಂಬಂಧ? ಗ್ಯಾರಂಟಿಗಳ ಹಣ ಕಾಂಗ್ರೆಸ್ ಪಕ್ಷದ ಖಜಾನೆಯದ್ದಾ? ಅದು ಜನರ ತೆರಿಗೆ ಹಣ. ಜನರ ದುಡ್ಡಿನಲ್ಲಿ ಇವರು ರಾಜಕೀಯ ಮಾಡಬಹುದಾದರೆ, ಮೋದಿ ಅವರು ಮಾಡಬಾರದ’ ಎಂದು ನರೇಂದ್ರ ಮೋದಿ ನಡೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ; ಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ; ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...