Homeಮುಖಪುಟಕರ್ನಾಟಕದಲ್ಲಿ ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮೈಮರೆಯಬಾರದು: ಪ್ರಶಾಂತ್ ಕಿಶೋರ್ ಎಚ್ಚರಿಕೆ ಸಂದೇಶ

ಕರ್ನಾಟಕದಲ್ಲಿ ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮೈಮರೆಯಬಾರದು: ಪ್ರಶಾಂತ್ ಕಿಶೋರ್ ಎಚ್ಚರಿಕೆ ಸಂದೇಶ

- Advertisement -
- Advertisement -

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಗೆ ಸಿಲುಕಿದ ಬಿಜೆಪಿ 66 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೀರಾ ಕಳಪೆ ಸಾಧನೆ ಮಾಡಿದರೆ, 135 ಸ್ಥಾನಗಳಲ್ಲಿ ಗೆಲ್ಲುವುದರೊಂದಿಗೆ ಭಾರೀ ಬಹುಮತ ಗಳಿಸಿರುವ ಕಾಂಗ್ರೆಸ್ ಶೀಘ್ರದಲ್ಲೇ ಸರ್ಕಾರ ರಚನೆ ಮಾಡಲಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್‌ಗೆ ರಾಜಕೀಯ ತಂತ್ರಗಾರ ಹಾಗೂ ಚುನಾವಣಾ ಚಾಣಕ್ಯ ಎಂದೇ ಕರೆಯಿಸಿಕೊಳ್ಳುವ ಪ್ರಶಾಂತ್ ಕಿಶೋರ್ ಎಚ್ಚರಿಕೆ ನೀಡಿದ್ದಾರೆ.

ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ನಡೆಸುತ್ತಿರುವ ಪ್ರಶಾಂತ್ ಕಿಶೋರ್ ಮಾತನಾಡಿ, ”ಕರ್ನಾಟಕದ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎನ್ನುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ, ಕರ್ನಾಟಕ ವಿಧಾನಸಭೆ ಗೆದ್ದ ಖುಷಿಯಲ್ಲಿ ಬೀಗಬೇಡಿ” ಎಂದು ಎಚ್ಚರಿಸಿದ್ದಾರೆ.

ದೇಶದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಪ್ರಶಾಂತ್ ಕಿಶೋರ್, ”ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಅಭಿನಂದಿಸುತ್ತೇನೆ. ಆದರೆ, ಇದನ್ನು ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಪರಿಗಣಿಸಬಾರದು. ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೈಮರೆಯಬಾರದು” ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ.

”2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಕಡಿಮೆ ಸ್ಥಾನ ಗಳಿಸಿತು. ಅಲ್ಲದೇ, 2019ರಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆದ್ದರೂ, ಕೆಲವೇ ತಿಂಗಳುಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ನೆಲಕಚ್ಚಿತು ಎಂಬುದನ್ನು ಮರೆಯಬಾರದು” ಎಂದು ಪ್ರಶಾಂತ್ ಕಿಶೋರ್ ನೆನಪಿಸಿದ್ದಾರೆ.

ಇದನ್ನೂ ಓದಿ: ಸಿಎಂ ಸ್ಥಾನದ ಹಗ್ಗಜಗ್ಗಾಟಕ್ಕೆ ಬಿತ್ತು ಬ್ರೇಕ್: ಸಿದ್ದು-ಸಿಎಂ, ಡಿಕೆಶಿ-ಡಿಸಿಎಂ; ಇಂದು ಶಾಸಕಾಂಗ ಸಭೆ

”2012ರಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿತ್ತು. ಬಳಿಕ ಎರಡು ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಉತ್ತರಪ್ರದೇಶದ 80 ಸ್ಥಾನಗಳಲ್ಲಿ 73 ಸ್ಥಾನ ಬಾಚಿಕೊಂಡಿತು” ಎಂದು ತಿಳಿಸಿದರು.

ಪ್ರಶಾಂತ್ ಕಿಶೋರ್ ಅವರು 2012ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಪ್ರಚಾರ ಕಾರ್ಯಕ್ರಮದ ಪ್ರಮುಖ ತಂತ್ರಗಾರರಾಗಿ ಕೆಲಸ ಮಾಡಿದ ನಂತರ ಪ್ರಸಿದ್ಧಿಯಾಗಿದ್ದರು. ಆ ಬಳಿಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ತಂತ್ರಗಾರನಾಗಿದ್ದರು.

ಈ ವೇಳೆ ಬಿಜೆಪಿ ಯಶಸ್ವಿ ಪ್ರಯತ್ನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್ ಅವರಿಗೆ ಬೇಡಿಕೆ ಹೆಚ್ಚಾಯಿತು. ಬಿಜೆಪಿ ವಾರ್ ರೂಂನಿಂದ ಹೊರಬಂದ ಅವರು, ನಂತರ ಬಿಹಾರದಲ್ಲಿ ನಿತೀಶ್ ಕುಮಾರ್, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್, ತಮಿಳುನಾಡಿನಲ್ಲಿ ಎಂಕೆ ಸ್ಟಾಲಿನ್, ಆಂಧ್ರಪ್ರದೇಶದಲ್ಲಿ ಜಗನ್‌ಮೋಹನ್ ರೆಡ್ಡಿ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಚುನಾವಣಾ ತಂತ್ರಗಾರಿಕೆ ರೂಪಿಸಿದ್ದರು.

2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಬಳಿಕ ಪ್ರಶಾಂತ್ ಕಿಶೋರ್ ಅವರು ಚುನಾವಣಾ ತಂತ್ರಗಾರಿಕೆಗೆ ವಿಧಾಯ ಹೇಳಿದ್ದರು. ಆ ಬಳಿಕ ದೇಶಾದ್ಯಂತ ನೆಲಕಚ್ಚಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಮರುಜೀವ ನೀಡಲು ಪ್ರಯತ್ನಪಟ್ಟರು. ಆದರೆ, ಪಕ್ಷದಲ್ಲಿ ಅವರ ಮಾತಿಗೆ ಮನ್ನಣೆ ಸಿಗದ ಕಾರಣ, ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ಆರಂಭಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...