Homeಮುಖಪುಟಪಹಲ್ಗಾಮ್ ಭಯೋತ್ಪಾದಕ ದಾಳಿ: ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕರು

ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕರು

- Advertisement -
- Advertisement -

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಒಗ್ಗಟ್ಟಿನಿಂದ ನಿಭಾಯಿಸುವ ಸಲುವಾಗಿ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕೆಂದು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೋಮವಾರ (ಏ.28) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ, “ಭಯೋತ್ಪಾದಕ ದಾಳಿಯು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ” ಎಂದು ಹೇಳಿದ್ದಾರೆ.

“ಈ ನಿರ್ಣಾಯಕ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾವು ಯಾವಾಗಲೂ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಭಾರತ ತೋರಿಸಬೇಕು. ಅದಕ್ಕಾಗಿ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕು.ಅಧಿವೇಶನದಲ್ಲಿ ಜನರ ಪ್ರತಿನಿಧಿಗಳು ತಮ್ಮ ಏಕತೆ ಮತ್ತು ದೃಢಸಂಕಲ್ಪವನ್ನು ಪ್ರದರ್ಶಿಸಬಹುದು. ಹಾಗಾಗಿ, ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯಬೇಕೆಂದು ನಾವು ವಿನಂತಿಸುತ್ತೇವೆ” ಎಂದಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪತ್ರದಲ್ಲೂ ರಾಹುಲ್ ಗಾಂಧಿ ಹೇಳಿದ್ದನ್ನೇ ಉಲ್ಲೇಖಿಸಿದ್ದು, “ಏಕತೆ ಮತ್ತು ಒಗ್ಗಟ್ಟು ಅತ್ಯಗತ್ಯವಾದ ಈ ಸಂದರ್ಭದಲ್ಲಿ, ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನವನ್ನು ಆದಷ್ಟು ಬೇಗ ಕರೆಯುವುದು ಮುಖ್ಯ ಎಂದು ವಿರೋಧ ಪಕ್ಷ ನಂಬುತ್ತದೆ” ಎಂದು ಬರೆದಿದ್ದಾರೆ.

“ಇದು ಏಪ್ರಿಲ್ 22, 2025ರಂದು ಪಹಲ್ಗಾಮ್‌ನಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಕ್ರೂರ ಭಯೋತ್ಪಾದಕ ದಾಳಿಯನ್ನು ಎದುರಿಸುವ ನಮ್ಮ ಸಾಮೂಹಿಕ ಸಂಕಲ್ಪ ಮತ್ತು ಇಚ್ಛಾಶಕ್ತಿಯ ಪ್ರಬಲ ಪ್ರದರ್ಶನವಾಗಲಿದೆ.ಹಾಗಾಗಿ,ಅಧಿವೇಶನ ಕರೆಯಬೇಕು ಎಂಬುದು ನಮ್ಮ ಆಶಯ” ಎಂದು ಖರ್ಗೆ ಹೇಳಿದ್ದಾರೆ.

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸದ ಮನೋಜ್ ಝಾ ಮತ್ತು ಸಿಪಿಐ ಸಂಸದ ಪಿ. ಸಂದೋಷ್ ಕುಮಾರ್ ಸೇರಿದಂತೆ ಹಲವಾರು ವಿರೋಧ ಪಕ್ಷದ ಸದಸ್ಯರು ರಾಷ್ಟ್ರದ ಇಚ್ಛೆಯನ್ನು ವ್ಯಕ್ತಪಡಿಸಲು ಮತ್ತು ಏಕತೆಯ ಸಂದೇಶವನ್ನು ಕಳುಹಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವಂತೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಮಧ್ಯೆ ಕಾಂಗ್ರೆಸ್ ನಾಯಕರೂ ಪತ್ರ ಬರೆದಿದ್ದಾರೆ.

ರಾಜ್ಯಸಭೆಯ ಸದಸ್ಯರಾಗಿರುವ ಸಂದೋಷ್ ಕುಮಾರ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರಿಗೆ ಬರೆದ ಪತ್ರದಲ್ಲಿ, ವಿಶೇಷ ಅಧಿವೇಶನವು ಪಕ್ಷಾತೀತವಾಗಿ ಸದಸ್ಯರು ಒಟ್ಟಾಗಿ ಸೇರಿ ನಷ್ಟಕ್ಕೆ ಶೋಕ ವ್ಯಕ್ತಪಡಿಸಲು ಮತ್ತು ರಾಷ್ಟ್ರದ ಇಚ್ಛೆಯನ್ನು ವ್ಯಕ್ತಪಡಿಸಲು ಅವಕಾಶ ನೀಡುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಭಯೋತ್ಪಾದಕ ದಾಳಿಯು ಪ್ರಾಣ ಕಳೆದುಕೊಂಡವರ ಸಂಬಂಧಿಕರನ್ನು ದುಃಖದಲ್ಲಿ ಮುಳುಗಿಸಿದೆ. ಮಾತ್ರವಲ್ಲದೆ ನಮ್ಮ ರಾಷ್ಟ್ರದ ಸಾಮೂಹಿಕ ಆತ್ಮಸಾಕ್ಷಿಯನ್ನು ನಡುಗಿಸಿದೆ ಎಂದು ಅವರು ಹೇಳಿದ್ದಾರೆ.

“ಈ ಕಷ್ಟದ ಸಮಯದಲ್ಲಿ, ಜನರ ಸರ್ವೋಚ್ಚ ಧ್ವನಿಯಾದ ನಮ್ಮ ಸಂಸತ್ತು ನಮ್ಮ ಆಳವಾದ ದುಃಖವನ್ನು ವ್ಯಕ್ತಪಡಿಸಲು, ಬಲಿಪಶುಗಳಿಗೆ ಗೌರವ ಸಲ್ಲಿಸಲು ಮತ್ತು ಭಯೋತ್ಪಾದನೆಯ ವಿರುದ್ಧ ನಮ್ಮ ರಾಷ್ಟ್ರದ ದೃಢ ಸಂಕಲ್ಪವನ್ನು ಪುನರುಚ್ಚರಿಸಲು ಒಗ್ಗಟ್ಟಿನಿಂದ ಒಟ್ಟಾಗಿ ಬರುವುದು ಅತ್ಯಗತ್ಯ” ಎಂದಿದ್ದಾರೆ.

ಸ್ವತಂತ್ರ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಅವರೂ ರಾಜಕೀಯ ಪಕ್ಷಗಳು ಮೇ ತಿಂಗಳಲ್ಲಿ ಸಾಧ್ಯವಾದಷ್ಟು ಬೇಗ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವಂತೆ ಸರ್ಕಾರವನ್ನು ಒತ್ತಾಯಿಸುವಂತೆ ವಿನಂತಿಸಿದ್ದರು.

1990ರ ಕಸ್ಟಡಿ ಸಾವು ಪ್ರಕರಣ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...