Homeಮುಖಪುಟತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

ತುಕ್ಡೆ-ತುಕ್ಡೆ ಗ್ಯಾಂಗ್‌ಗೆ ಕಾಂಗ್ರೆಸ್ ನಾಯಕತ್ವ: ಸಂಸತ್ತಿನಲ್ಲಿ ಪ್ರಧಾನಿ ಮೋದಿ ಹೇಳಿಕೆ

- Advertisement -
- Advertisement -

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕಾಂಗ್ರೆಸ್ ವಿರುದ್ಧ ಯಾವುದೇ ತಡೆರಹಿತ ದಾಳಿ ನಡೆಸಿದ್ದು, “ಬಹುಸಂಸ್ಕೃತಿ, ವೈವಿಧ್ಯಮಯ ದೇಶವನ್ನು ಆಳಲು ಬ್ರಿಟಿಷರ ಒಡೆದು ಆಳುವ ನೀತಿಯನ್ನು ಕಾಂಗ್ರೆಸ್‌ ಅಳವಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತಂದಿದೆ ಎಂಬ ರಾಹುಲ್ ಗಾಂಧಿಯವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ವಿಭಜಕ ಮನಸ್ಥಿತಿ ಕಾಂಗ್ರೆಸ್‌ಗೆ ಇದೆ” ಎಂದು ದೂರಿದ್ದಾರೆ.

“ಅಂಗ್ರೇಜ್ ಚಲೇ ಗಯೇ (ಬ್ರಿಟಿಷರು ತೊರೆದರು). ಆದರೆ ಒಡೆದು ಆಳುವುದು ಉಳಿದಿದೆ… ಅದಕ್ಕಾಗಿಯೇ ಕಾಂಗ್ರೆಸ್ ತುಕ್ಡೆ ತುಕ್ಡೆ ಗ್ಯಾಂಗ್‌ನ ನಾಯಕನಾಗಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ ವಾರ ಸಂಸತ್ತಿನಲ್ಲಿ ಮಾತನಾಡಿದ್ದ ರಾಹುಲ್‌ ಗಾಂಧಿಯವರು, ಭಾರತವು ರಾಜ್ಯಗಳ ಒಕ್ಕೂಟವೆಂದು ಸಂವಿಧಾನ ಹೇಳುತ್ತದೆ ಎಂಬುದನ್ನು ನೆನಪಿಸಿದ್ದರು. ಆರ್‌ಎಸ್‌ಎಸ್‌ ಸಂವಿಧಾನದ ಮೂಲ ಆಶಯದೊಂದಿಗೆ ಆಡವಾಡುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದರು.

“ನನ್ನ ಅಜ್ಜಿಗೆ (ಮಾಜಿ ಪ್ರಧಾನಿ ಇಂದಿರಾಗಾಂಧಿ) 32 ಬಾರಿ ಗುಂಡು ಹಾರಿಸಿದ್ದರು. ನನ್ನ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಛಿದ್ರಗೊಂಡರು. ಇದು ಏನೆಂದು ನನಗೆ ತಿಳಿದಿದೆ. ದೇಶವನ್ನು ಅರಿತಿದ್ದೇನೆ” ಎಂದಿದ್ದರು.

ಇದನ್ನೂ ಓದಿರಿ: ಇಲ್ಲಿ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರದ್ದು, ಇನ್ನೊಂದು ಬಡವರದ್ದು: ರಾಹುಲ್ ಗಾಂಧಿ

ರಾಹುಲ್‌ ಗಾಂಧಿಯವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಮೋದಿ, “ರಾಷ್ಟ್ರವು ಆಡಳಿತ ಅಥವಾ ಸರ್ಕಾರದ ವ್ಯವಸ್ಥೆ ಅಲ್ಲ – ಇದು ನಮಗೆ ಜೀವಂತ ಆತ್ಮ. 1000 ವರ್ಷಗಳಿಂದ ಜನರು ಅದರೊಂದಿಗೆ ಸಂಪರ್ಕ ಹೊಂದಿದ್ದಾರೆ” ಎಂದು ವಿಷ್ಣು ಪುರಾಣದ ಪುರಾತನ ಪಠ್ಯವನ್ನು ಉಲ್ಲೇಖಿಸಿದ್ದಾರೆ.

“ಪ್ರಜಾಸತ್ತಾತ್ಮಕವಾಗಿ ನಮ್ಮನ್ನು ತಡೆಯಲು ಸಾಧ್ಯವಾಗದವರು ಅಶಿಸ್ತಿನ ಮೂಲಕ ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ವಿಫಲರಾಗುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಇಚ್ಛೆ ಕೊನೆಗೊಂಡಿದೆ” ಎಂದಿದ್ದಾರೆ.

ದೇಶಾದ್ಯಂತ ಕೋವಿಡ್ ಹರಡುವಿಕೆಗೆ ಮತ್ತು ಆರಂಭಿಕ ದಿನಗಳಲ್ಲಿ ವಲಸೆ ಬಿಕ್ಕಟ್ಟಿಗೆ ಪ್ರತಿಪಕ್ಷಗಳು ಜವಾಬ್ದಾರರು ಎಂದು ಪ್ರಧಾನಿ ಆರೋಪಿಸಿದ್ದಾರೆ. ಮಹಾರಾಷ್ಟ್ರ ಮತ್ತು ದೆಹಲಿ ಆಡಳಿತದ ಸರ್ಕಾರಗಳತ್ತ ಬೊಟ್ಟುಮಾಡಿದ ಅವರು, “ನೀವು ಕಾರ್ಮಿಕರನ್ನು ಕಷ್ಟಕ್ಕೆ ತಳ್ಳಿದ್ದೀರಿ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಪಾಕ್ ಮತ್ತು ಚೀನಾ ಸ್ನೇಹ ಬೆಳೆಯಲು ಮೋದಿ ಸರ್ಕಾರ ಕಾರಣ: ರಾಹುಲ್ ಗಾಂಧಿ ಟೀಕೆ

ಕಾಂಗ್ರೆಸ್ ಮಿತಿಯನ್ನು ಮೀರಿದೆ. “ಮೊದಲ ಅಲೆಯ ಸಮಯದಲ್ಲಿ ಕಾರ್ಮಿಕರು ತೆರಳಲು ಮತ್ತು ಕರೋನವೈರಸ್ ಹರಡಲು ಕಾಂಗ್ರೆಸ್‌ ಟಿಕೆಟ್ ನೀಡಿತು. ದೆಹಲಿ ಸರ್ಕಾರವು ಬಸ್‌ಗಳನ್ನು ವ್ಯವಸ್ಥೆಮಾಡಿತು” ಎಂದು ಪ್ರಧಾನಿ ಹೇಳಿದರು. “ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಕರೋನಾ ಈ ತೀವ್ರತೆಯನ್ನು ಹೊಂದಿರಲಿಲ್ಲ” ಎಂದು ತಿಳಿಸಿದ್ದಾರೆ.

“ಕೋವಿಡ್ ಸಮಯದಲ್ಲಿ, ಭಾರತೀಯ ಆರ್ಥಿಕತೆಯು ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆದಿದೆ. ರೈತರು ದಾಖಲೆ ಪ್ರಮಾಣದ ಆಹಾರ ಧಾನ್ಯಗಳನ್ನು ಉತ್ಪಾದಿಸಿದರು. ಬಹಳಷ್ಟು ದೇಶಗಳು ಆಹಾರದ ಕೊರತೆಯನ್ನು ಎದುರಿಸಿದವು. ಆದರೆ ಈ ದೇಶವು ಹಸಿವಿನಿಂದ ಸಾಯಲು ಯಾರನ್ನೂ ಬಿಡಲಿಲ್ಲ. ಭಾರತವು 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ನೀಡಲಾಗಿದೆ, ಈಗಲೂ ನೀಡುತ್ತಿದ್ದಾರೆ” ಎಂದರು.

ರಾಹುಲ್‌ ಗಾಂಧಿಯವರು ಸಂಸತ್ತಿನಲ್ಲಿ ರಾಷ್ಟ್ರಪತಿಯವರ ಭಾಷಣವನ್ನು ಉದ್ದೇಶಿಸಿ ಮಾಡಿದ ಭಾಷಣ ಭಾರೀ ಪ್ರಶಂಸೆಗೆ ಒಳಗಾಗಿತ್ತು. ರಾಹುಲ್ ಅವರು ಬಹುತ್ವದ ಬಗ್ಗೆ ಮಾತನಾಡಿದ್ದರು. ಈ ಬಳಿಕ ಪ್ರತಿಕ್ರಿಯೆ ನೀಡಿರುವ ಪ್ರಧಾನಿಯವರು ವಾಗ್ದಾಳಿ ನಡೆಸಿದ್ದಾರೆ.

ಒಕ್ಕೂಟ ಸರ್ಕಾರದ ನೀತಿಗಳು, ಕೇಂದ್ರಿಕರಣ, ನಿರುದ್ಯೋಗ, ಬಡತನ ಸೇರಿದಂತೆ ಹಲವು ವಿಷಯಗಳ ಮೇಲೆ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ, “ಈಗ ಎರಡು ವಿಭಿನ್ನ ಭಾರತಗಳಿವೆ, ಒಂದು ಶ್ರೀಮಂತರ ಭಾರತ ಮತ್ತು ಇನ್ನೊಂದು ಬಡವರದ್ದು. ಇವೆರಡರ ನಡುವಿನ ಅಂತರ ಹೆಚ್ಚುತ್ತಿದೆ. ಬಿಜೆಪಿಯು ಭಾರತವನ್ನು ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದರು.

“ನೀವು ಮೇಕ್ ಇನ್ ಇಂಡಿಯಾ, ಮೇಕ್ ಇನ್ ಇಂಡಿಯಾ ಎಂದು ಮಾತನಾಡುತ್ತಲೇ ಇರುತ್ತೀರಿ. ಮೇಕ್ ಇನ್ ಇಂಡಿಯಾ ಎಂಬುದು ಇನ್ನು ಸಾಧ್ಯವಿಲ್ಲ. ‘ಮೇಡ್ ಇನ್ ಇಂಡಿಯಾ’ ಎಂಬುದನ್ನು ನಾಶ ಮಾಡಿದ್ದೀರಿ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಬೆಂಬಲ ನೀಡಬೇಕು, ಇಲ್ಲದಿದ್ದರೆ ‘ಮೇಕ್ ಇನ್ ಇಂಡಿಯಾ’ ಸಾಧ್ಯವಿಲ್ಲ. ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಮಾತ್ರ ಉದ್ಯೋಗಗಳನ್ನು ಸೃಷ್ಟಿಸಬಲ್ಲವು. ನೀವು ಮೇಡ್ ಇನ್ ಇಂಡಿಯಾ, ನ್ಯೂ ಇಂಡಿಯಾ, ಸ್ಟಾರ್ಟ್-ಅಪ್ ಇಂಡಿಯಾ ಇತ್ಯಾದಿಗಳ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ. ಆದರೆ, ನಿರುದ್ಯೋಗ ಹೆಚ್ಚುತ್ತಿದೆ” ಎಂದು ದೇಶದ ನಿರುದ್ಯೋಗದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಆಡಳಿತಾರೂಢ ಬಿಜೆಪಿಯು ಭಾರತದಲ್ಲಿ “ರಾಜ” ಎಂಬ ಕಲ್ಪನೆಯನ್ನು ಮರಳಿ ತಂದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ನಾವು 1947 ರಲ್ಲಿ ರಾಜನ ಕಲ್ಪನೆಯನ್ನು ಒಡೆದು ಹಾಕಿದ್ದೇವೆ. ಈಗ ರಾಜನ ಕಲ್ಪನೆ ಮತ್ತೆ ಬಂದಿದೆ. ಒಬ್ಬ ರಾಜ, ಒಬ್ಬ ಶೆಹನ್ ಶಾ, ಒಬ್ಬ ಆಡಳಿತಗಾರರ ಯಜಮಾನ, ಒಬ್ಬ ಯಜಮಾನರ ಯಜಮಾನ ಆಗಿದೆ. ಇದು ರಾಜ್ಯಗಳ ಒಕ್ಕೂಟದ ಕಲ್ಪನೆ ಮತ್ತು ರಾಜನ ಕಲ್ಪನೆಯ ನಡುವಿನ ಘರ್ಷಣೆ” ಎಂದು ಮೋದಿಯವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದರು.


ಇದನ್ನೂ ಓದಿರಿ: ರಾಹುಲ್ ಗಾಂಧಿ ಲೋಕಸಭಾ ಭಾಷಣ: ಬಿಜೆಪಿಯಿಂದ ಟೀಕೆ, ಕಾಂಗ್ರೆಸ್‌ನಿಂದ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...