Homeಮುಖಪುಟಕಾಂಗ್ರೆಸ್‌ ನಾಯಕತ್ವ: ಪಕ್ಷದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ

ಕಾಂಗ್ರೆಸ್‌ ನಾಯಕತ್ವ: ಪಕ್ಷದ ಮುಖಂಡರಿಂದ ಸೋನಿಯಾ ಗಾಂಧಿಗೆ ಪತ್ರ

ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.

- Advertisement -
- Advertisement -

ಕಾಂಗ್ರೆಸ್‌ ಪಕ್ಷವು ನಾಳೆ ಉನ್ನತ ಮಟ್ಟದ ಸಭೆ ಸೇರುತ್ತಿರುವುದರಿಂದ, 20 ಕ್ಕೂ ಹೆಚ್ಚು ಮುಖಂಡರು ಸೋನಿಯಾ ಗಾಂಧಿಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್‌ ನಾಯಕತ್ವ ಕುರಿತು ಉಲ್ಲೇಖಿಸಿರುವ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಂತರಿಕ ಬಿಕ್ಕಟ್ಟನ್ನು ಪತ್ರದಲ್ಲಿ ಉಲ್ಲೇಖಿಸಿ ಹಿರಿಯ ನಾಯಕರು ಪಕ್ಷದ ನಾಯಕತ್ವದ ವಿಷಯದ ಬಗ್ಗೆ ಚರ್ಚಿಸಿದ್ದಾರೆ.

ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ನಾಳೆ ಆನ್‌ಲೈನ್ ನಲ್ಲಿ ಸಭೆ ಸೇರಲಿದೆ.

ಪತ್ರಕ್ಕೆ ಸಹಿ ಹಾಕಿದವರಲ್ಲಿ ಸಂಸತ್ತಿನ ಸದಸ್ಯರು, ಮಾಜಿ ಸಚಿವರು ಮತ್ತು ಮುಖ್ಯಮಂತ್ರಿಗಳು ಮತ್ತು ಸಿಡಬ್ಲ್ಯೂಸಿ ಸದಸ್ಯರು ಸೇರಿದ್ದಾರೆ.

ಒಂದು ವರ್ಷದ ಹಿಂದೆ, ಲೋಕಸಭಾ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಪಕ್ಷದ ಶೋಚನೀಯ ಸೋಲಿನ ನಂತರ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ ನಂತರ, ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಕಾಂಗ್ರೆಸ್‌ ಪಕ್ಷದ ನಡಾವಳಿಯ ಕುರಿತು ಹಿರಿಯ ಮತ್ತು ಕಿರಿಯ ಮುಖಂಡರ ನಡುವೆ ಕಳೆದ ವರ್ಷ ಭಿನ್ನಾಭಿಪ್ರಾಯ ಆರಂಭವಾಗಿತ್ತು.

73 ವರ್ಷದ ಸೋನಿಯಾ ಗಾಂಧಿ, ಅವರ ಆರೋಗ್ಯದ ಕಾರಣದಿಂದ ಅಧ್ಯಕ್ಷರಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಹುಲ್ ಗಾಂಧಿ, ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸಲು ಪಕ್ಷದೊಳಗೆ ಬಲವಾದ ಒಮ್ಮತವಿದೆ.

ಆದರೆ ಇತ್ತೀಚೆಗೆ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ತಮ್ಮ ಕುಟುಂಬದ ಹೊರಗಿನವರು ಅಧ್ಯಕ್ಷರಾಗಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಹೊಸ ಅಧ್ಯಕ್ಷರು ಆಯ್ಕೆಯಾಗುವವರೆಗೂ ಸೋನಿಯಾ ಗಾಂಧಿ ಮುಂದುವರೆಯಲಿದ್ದಾರೆ: ಕಾಂಗ್ರೆಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...