Homeಕರ್ನಾಟಕಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

ಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

- Advertisement -
- Advertisement -

ಮಹಿಳೆಯರು ಹಿಜಾಬ್ ಧರಿಸದ ಕಾರಣ ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ಹೇಳಿ ವಿದಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ತನ್ನ ಹೇಳಿಕೆಗೆ ಸೋಮವಾರ ವಿಷಾದ ವ್ಯಕ್ತಪಡಿಸಿದ್ದಾರೆ.

ತನ್ನ ಹೇಳಿಕೆಯ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಮೀರ್‌ ಅಹ್ಮದ್, “ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರಗಳನ್ನು ಕಂಡಾಗ ಭಯ ಆತಂಕ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಹಿಜಾಬ್‌, ಬುರ್ಖಾ ಧರಿಸುವುದರಿಂದಾದರೂ ಅತ್ಯಾಚಾರವನ್ನು ತಡೆಗಟ್ಟಬಹುದೇನೋ ಎಂಬ ಮಾತನ್ನು ನಾನು ಆಡಿದ್ದೆ” ಎಂದು ಅವರು ಹೇಳಿದ್ದಾರೆ.

“ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾದವಿದೆ” ಎಂದು ಅವರು ಹೇಳಿದ್ದಾರೆ.

“ಹಿಜಾಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ.

ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣು ಮಕ್ಕಳ ಬಗೆಗಿನ ಕಾಳಜಿ ಇದೆ” ಎಂದು ಜಮೀರ್‌ ತಿಳಿಸಿದ್ದಾರೆ.

“ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ. ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು” ಎಂದು ಅವರು ಹೇಳಿದ್ದಾರೆ.

“ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ. ಹಿಜಾಬ್ – ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ” ಎಂದು ಅವರು ವಿನಂತಿಸಿದ್ದಾರೆ.

ಹಿಂದಿನ ದಿನ, ತನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಪ್ರತಿಪಾದಿಸಿದ್ದ ಅವರು ಕ್ಷಮೆಯಾಚಿಸಲು ನಿರಾಕರಿಸಿದ್ದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುತ್ತಿವೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ” ಎಂದು ಹೇಳಿದ್ದರು.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ ಖಾನ್, “ಹೆಣ್ಣುಮಕ್ಕಳು ಬೆಳೆದ ನಂತರ ತಮ್ಮ ಸೌಂದರ್ಯವನ್ನು ಮರೆಮಾಚಲು ‘ಪರ್ದಾ’ ಧರಿಸುವುದು ಹಿಜಾಬ್‌ನ ಪರಿಕಲ್ಪನೆಯಾಗಿದೆ. ಇಂದು ನಮ್ಮ ದೇಶದಲ್ಲಿ ಅತ್ಯಾಚಾರದ ಪ್ರಮಾಣವು ಅತ್ಯಧಿಕವಾಗಿರುವುದನ್ನು ನೀವು ನೋಡಬಹುದು. ಇದಕ್ಕೆ ಕಾರಣವೆಂದರೆ ಹಲವಾರು ಮಹಿಳೆಯರು, ಘೋಷಾ, ಹಿಜಾಬ್‌ನಲ್ಲಿ ಇಲ್ಲದಿರುವುದು. ಇನ್ನು ಹಿಜಾಬ್ ಧರಿಸಲೇ ಬೇಕು ಎಂಬುದಿಲ್ಲ. ಯಾರು ಇಷ್ಟ ಪಟ್ಟು ತೊಡುತ್ತಾರೆ, ತಮ್ಮ ಸೌಂದರ್ಯವನ್ನು ಮತ್ತೊಬ್ಬರಿಗೆ ತೋರಿಸಬಾರದು ಎಂಬುದಿರುತ್ತೋ ಅವರು ಧರಿಸುತ್ತಾರೆ. ಇದು ಇಂದಿನಿಂದ ಅಲ್ಲ ಜಮಾನದಿಂದಲೂ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...