Homeಮುಖಪುಟಮೇಘಾಲಯ: ನಾಲ್ವರು ಕಾಂಗ್ರೆಸ್ ಶಾಸಕರ ಪೈಕಿ ಮೂವರು ಪಕ್ಷಾಂತರ: ಸರಳ ಬಹುಮತ ಗಳಿಸಿದ ಆಡಳಿತರೂಢ ಎನ್‌ಪಿಪಿ

ಮೇಘಾಲಯ: ನಾಲ್ವರು ಕಾಂಗ್ರೆಸ್ ಶಾಸಕರ ಪೈಕಿ ಮೂವರು ಪಕ್ಷಾಂತರ: ಸರಳ ಬಹುಮತ ಗಳಿಸಿದ ಆಡಳಿತರೂಢ ಎನ್‌ಪಿಪಿ

- Advertisement -
- Advertisement -

ಮೇಘಾಲಯದಲ್ಲಿ ಕಾಂಗ್ರೆಸ್‌ನ ನಾಲ್ವರು ಶಾಸಕರಲ್ಲಿ ಮೂವರು ನ್ಯಾಷನಲ್ ಪೀಪಲ್ಸ್ ಪಾರ್ಟಿ(ಎನ್‌ಪಿಪಿ) ಗೆ ಸೇರ್ಪಡೆಗೊಂಡಿದ್ದು, ರಾಜ್ಯ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಸರಳ ಬಹುಮತ ಪಡೆದುಕೊಂಡಿದೆ.

ಸೋಮವಾರ ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರ ಸಮ್ಮುಖದಲ್ಲಿ ಮೂವರು ಶಾಸಕರಾದ ಸೆಲೆಸ್ಟೀನ್ ಲಿಂಗ್ಡೋಹ್, ಚಾರ್ಲ್ಸ್ ಮಾರ್ಂಗಾರ್ ಮತ್ತು ಗೇಬ್ರಿಯಲ್ ವಾಹ್ಲಾಂಗ್ – ಅಧಿಕೃತವಾಗಿ ಎನ್‌ಪಿಪಿಗೆ ಸೇರ್ಪಡೆಗೊಂಡಿದ್ದಾರೆ.

ಈ ಹಿಂದೆ, ಶಾಸಕರು ಪಕ್ಷ ಬದಲಾಯಿಸುತ್ತಾರೆ ಎಂದು ಸುಳಿವು ಸಿಕ್ಕ ಹಿನ್ನೆಲೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ವಿನ್ಸೆಂಟ್ ಪಾಲಾ ಅವರು ಮೂವರನ್ನು ಸಭೆಗೆ ಕರೆದಿದ್ದರು. ಸಭೆಗೆ ಗೈರಾದ ಇಬ್ಬರು ಶಾಸಕರಾದ ನಾಂಗ್‌ಸ್ಟೋಯಿನ್ ಶಾಸಕ ವಹ್ಲಾಂಗ್ ಮತ್ತು ಮಾವಾಟಿ ಶಾಸಕ ಮರ್ಂಗಾರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಮೇಘಾಲಯ ಸ್ಪೀಕರ್ ಥಾಮಸ್ ಸಂಗ್ಮಾ ಅವರು ಮೂವರು ಶಾಸಕರ ಪಕ್ಷರು ಎನ್‌ಪಿಪಿಗೆ ಸೇರಿದ್ದನ್ನು ಪಕ್ಷಾಂತರಕ್ಕೆ ವಿರುದ್ಧವಾಗಿ ‘ವಿಲೀನ’ ಎಂದು ಪರಿಗಣಿಸಿದ್ದರೆ. ಏಕೆಂದರೆ, ಕಾಂಗ್ರೆಸ್‌ನ ಮೂರನೇ ಎರಡರಷ್ಟು ಶಾಸಕರು ಎನ್‌ಪಿಪಿಗೆ ಹಾರಿದ್ದಾರೆ.

“ಕಾಂಗ್ರೆಸ್ ಶಾಸಕರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ನಮ್ಮ ಸರ್ಕಾರದ ಮೇಲಿನ ನಂಬಿಕೆಯ ನಿಜವಾದ ಪ್ರದರ್ಶನವಾಗಿದೆ. ಎನ್‌ಪಿಪಿಗೆ ಕಾಂಗ್ರೆಸ್ ಶಾಸಕರ ವಿಲೀನವು 60 ಸದಸ್ಯರ ಮೇಘಾಲಯ ವಿಧಾನಸಭೆಯಲ್ಲಿ ನಮ್ಮ ಬಲವನ್ನು 31ಕ್ಕೆ ಹೆಚ್ಚಿಸಿದೆ” ಎಂದು ಮುಖ್ಯಮಂತ್ರಿ ಸಂಗ್ಮಾ ಅವರು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಒಟ್ಟು 60 ಸದಸ್ಯ ಬಲದ ಮೇಘಾಲಯ ವಿಧಾನಸಭೆಯಲ್ಲಿ ಎನ್‌ಪಿಪಿ ಪಕ್ಷ 26 ಸ್ಥಾನಗಳನ್ನು ಹೊಂದಿತ್ತು. ಯುನೈಟೆಡ್ ಡೆಮಾಕ್ರಟಿಕ್ ಪಾರ್ಟಿಯ 11, ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್‌ನ ಇಬ್ಬರು, ಬಿಜೆಪಿಯ ಇಬ್ಬರು ಮತ್ತು ಹೆಚ್‌ಎಸ್‌ಪಿಡಿಪಿಯ ಇಬ್ಬರು ಶಾಸಕರ ಬೆಂಬಲದೊಂದಿಗೆ ಸರ್ಕಾರ ರಚಿಸಿತ್ತು. ಇದೀಗ ಕಾಂಗ್ರೆಸ್ ಪಕ್ಷದ ಶಾಸಕ ಸೇರ್ಪಡೆಯೊಂದಿಗೆ ವಿಧಾನಸಭೆಯಲ್ಲಿ ಸರಳ ಬಹುಮತ ಸಾಧಿಸಿದೆ.

ಇದನ್ನೂ ಓದಿ : ಮಹಾರಾಷ್ಟ್ರ | ನರ್ಸರಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಭುಗಿಲೆದ್ದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...