Homeಚಳವಳಿಲಖಿಂಪುರ್‌ ಖೇರಿಗೆ ಪಾದಯಾತ್ರೆ: ಆರೋಪಿಗಳನ್ನು ಬಂಧಿಸದಿದ್ದರೇ ಉಪವಾಸ ಸತ್ಯಾಗ್ರಹ-ನವಜೋತ್ ಸಿಂಗ್ ಸಿಧು

ಲಖಿಂಪುರ್‌ ಖೇರಿಗೆ ಪಾದಯಾತ್ರೆ: ಆರೋಪಿಗಳನ್ನು ಬಂಧಿಸದಿದ್ದರೇ ಉಪವಾಸ ಸತ್ಯಾಗ್ರಹ-ನವಜೋತ್ ಸಿಂಗ್ ಸಿಧು

- Advertisement -
- Advertisement -

ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಗುರುವಾರ ಲಖಿಂಪುರ್‌ ಖೇರಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಮಗನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಅಜಯ್ ಮಿಶ್ರಾ ತೇನಿ ಮಗ ಆಶಿಶ್ ಮಿತ್ರಾನನ್ನು ಬಂಧಿಸದಿದ್ದರೆ ನಾಳೆಯಿಂದ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಉತ್ತರಪ್ರದೇಶದ ಲಖಿಂಪುರ್‌ಗೆ ಪಾದಯಾತ್ರೆ ನಡೆಸುತ್ತಿರುವಾಗ ಕಾಂಗ್ರೆಸ್ ನಾಯಕ, “ಆರೋಪಿಗಳನ್ನು ಬಂಧಿಸದಿದ್ದರೆ, ಅಜಯ್ ಮಿಶ್ರಾ ತೇನಿ ಅವರ ಮಗ ನಾಳೆಯೊಳಗೆ ತನಿಖೆಗೆ ಸಹಕರಿಸದಿದ್ದರೆ, ನಾನು ಉಪವಾಸ ಸತ್ಯಾಗ್ರಹ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಭಾನುವಾರ ನಡೆದ ಲಖಿಂಪುರ್ ಖೇರಿ ಹತ್ಯಾಕಾಂಡದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜೈಲಿನಲ್ಲಿ ಇರಬೇಕಾದವರು ಕಾರ್ಯಕ್ರಮ ಉದ್ಘಾಟಿಸುತ್ತಿದ್ದಾರೆ: ಯೋಗೇಂದ್ರ ಯಾದವ್

ಲಖಿಂಪುರ್ ಖೇರಿಯ ಮಾರ್ಗದಲ್ಲಿದ್ದ ನವಜೋತ್ ಸಿಂಗ್ ಸಿಧು ನೇತೃತ್ವದ ಮೆರವಣಿಗೆಯನ್ನು ಯಮುನಾ ನಗರ (ಹರಿಯಾಣ)-ಸಹರನ್ ಪುರ್ (ಉತ್ತರ ಪ್ರದೇಶ) ಗಡಿಯಲ್ಲಿ ನಿಲ್ಲಿಸಲಾಗಿದೆ.

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಲಖಿಂಪುರ್ ಘಟನೆಯಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಕ್ಕೆ ಪ್ರತ್ಯೇಕವಾಗಿ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಹತ್ಯಾಕಾಂಡದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಎರಡು ದಿನಗಳ ನಂತರ ಗಾಯಾಳು ರೈತ ಮುಖಂಡ ಹೇಳಿಕೆ ನೀಡಿದ್ದು, ಪ್ರತಿಭಟನಾಕಾರರ ಮೇಲೆ ಹರಿದ ಕಾರನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಚಾಲನೆ ಮಾಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ಆದರೆ, ಆಶಿಶ್ ಮಿಶ್ರಾ ರೈತ ಮುಖಂಡರ, ರೈತ ಸಂಘಟನೆಗಳ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ತಾನು ಇರಲಿಲ್ಲ ಎಂದು ವಾದಿಸಿದ್ದಾರೆ. ಸಚಿವ ಅಜಯ್ ಮಿಶ್ರಾ ತೇನಿ ಕೂಡ ತನ್ನ ಮಗ ಸ್ಥಳದಲ್ಲಿ ಇರಲಿಲ್ಲ ಎಂದು ಹೇಳಿದ್ದು, ಕೆಲವರು ಪ್ರತಿಭಟನಾ ನಿರತ ರೈತರೊಂದಿಗೆ ಘರ್ಷಣೆ ಉಂಟಾಗಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದು ‘ದುರದೃಷ್ಟಕರ ಘಟನೆ’ಗೆ ಕಾರಣವಾಯಿತು ಎಂದು ಹೇಳಿದ್ದಾರೆ.


ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡ: ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...