Homeಕರ್ನಾಟಕ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

- Advertisement -
- Advertisement -

“ದಲಿತರು ಅಂದ್ರೆ ಕಾಂಗ್ರೆಸ್‌, ಕಾಂಗ್ರೆಸ್ ಎಂದರೆ ದಲಿತರು” ಎಂದು ಸಿಂಧಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮಾದಿಗ ಸಮುದಾಯದ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸ್ವಾತಂತ್ರ್ಯ ಬಂದಾಗಿನಿಂದ ಇವತ್ತಿನವರೆಗೆ ದಲಿತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಡಾ.ಬಾಬು ಜಗಜೀವನರಾಮ್‌ ಅವರು ಸ್ವಾತಂತ್ರ್ಯ ಬಂದ ಮೇಲೆ ರಚನೆಯಾದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದರು. ಬಹುಶಃ ಜಗಜೀವನರಾಮ್ ಅವರು ಕೊನೆಯವರೆಗೆ ಕೇಂದ್ರ ಸರ್ಕಾರದಲ್ಲಿ ನಿರಂತರವಾಗಿ ಮಂತ್ರಿಯಾಗಿದ್ದ ರಾಷ್ಟ್ರ ನಾಯಕ ಎಂದು ಸ್ಮರಿಸಿದರು.

ಈ ದೇಶದ ಅಭಿವೃದ್ಧಿಯಲ್ಲಿ ಜಗಜೀವನ್ ರಾಮ್ ಅವರ ಪಾತ್ರ ಇದೆ. ಬಾಬಾ ಸಾಹೇಬ್ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟರು. ಈ ಸಂವಿಧಾನ ಎಸ್‌.ಸಿ., ಎಸ್.ಟಿ. ಸಮುದಾಯಕ್ಕೆ ಸವಲತ್ತುಗಳನ್ನು ನೀಡಿತು. ಕಾಂಗ್ರೆಸ್‌ ಸವಲತ್ತುಗಳನ್ನು ಜಾರಿಗೊಳಿಸಿತು ಎಂದರು.

ಬಿಜೆಪಿ ಸ್ವಾತಂತ್ರ್ಯ ಹೋರಾಟದಲ್ಲಿ ಇರಲಿಲ್ಲ. 1925ರಲ್ಲಿ ಆರ್‌ಎಸ್‌ಎಸ್‌ ಹುಟ್ಟಿದ್ದು. 1950ರಲ್ಲಿ ಜನಸಂಘ ಹುಟ್ಟಿತು. ಜನಸಂಘ ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. 1980ನೇ ಇಸವಿಯಲ್ಲಿ ಬಿಜೆಪಿ ಹುಟ್ಟಿತು. ಬಿಜೆಪಿಯವರು ಯಾರಾದರೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದಾರಾ? ದೇಶಕ್ಕಾಗಿ ಪ್ರಾಣ ತೆತ್ತವರಲ್ಲಿ ಮಹಾತ್ಮಗಾಂಧಿಯವರಿಂದ ಹಿಡಿದು ರಾಜೀವ್ ಗಾಂಧಿಯವರೆಗೆ ಕಾಂಗ್ರೆಸ್‌ನವರಾಗಿದ್ದಾರೆ ಎಂದರು.

ಇದನ್ನೂ ಓದಿರಿ: ‘ಜಾತಿ ಸಮಾವೇಶಕ್ಕೆ ಹೋಗುವುದಿಲ್ಲ ಎಂದು ಬಿಜೆಪಿಯವರು ಹೇಳಿದರೆ ರಾಜಕೀಯ ನಿವೃತ್ತಿ’

ದೇಶವನ್ನು ಉದ್ಧಾರ ಮಾಡುತ್ತೇವೆಂದು ಬಿಜೆಪಿ ಹೇಳುತ್ತಿದೆ. ಮೀಸಲಾತಿ ಇವರು ಕೊಟ್ಟರಾ? ಯಾರೋ ಕೆಲವರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ. ಜಿಗಜಿಣಗಿ, ಕಾರಾಜೋಳ ಇವರೆಲ್ಲ ಹೊಟ್ಟೆಪಾಡಿಗೆ ಹೋಗಿದ್ದಾರೆ. ಜಗಜೀವನ ರಾಮ್‌ ಥರದವರನ್ನು ಸೃಷ್ಟಿ ಮಾಡಲು ಇವರಿಂದ ಆಗುತ್ತದೆಯೇ? ಬಾಬು ಜಗಜೀವನರಾಮ್‌ ಅವರ ಮೇಲೆ ನಿಮಗೆ ಗೌರವಿದ್ದರೆ ನೀವು ಕಾಂಗ್ರೆಸ್ ಅನ್ನು ಬೆಂಬಲಿಸಬೇಕು. ದಾರಿ ತಪ್ಪಿಸುವ ಬಿಜೆಪಿಯವರನ್ನು ಬೆಂಬಲಿಸಬೇಡಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧಮ್‌ ಇದ್ದರೆ ಒಂದೇ ವೇದಿಕೆ ಮೇಲೆ ಬರಲಿ. ಯಾರು ಸುಳ್ಳು ಹೇಳುತ್ತಾರೆ, ಸತ್ಯ ಹೇಳುತ್ತಾರೆ ಎಂಬುದು ಗೊತ್ತಾಗುತ್ತದೆ. ಒಂದೇ ವೇದಿಕೆ ಮೇಲೆ ಬರಲು ಏಕೆ ಹೆದರಿಕೆ. ನಾನು ತಯಾರಿದ್ದೇನೆ. ನೀವು ಮಾಡಿರುವ ಕೆಲಸಗಳನ್ನು ಹೇಳಿ. ನಾವು ಏನು ಮಾಡಿದ್ದೇವೆ ಅಂತ ಹೇಳುತ್ತೇನೆ ಎಂದು ಸವಾಲು ಎಸೆದರು.

ಸಿದ್ದರಾಮಯ್ಯ ಅವರಿಗಿಂತ ಮೊದಲು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ನಾವಿಲ್ಲಿ ಕೇವಲ ಪ್ರಚಾರಕ್ಕಾಗಿ ಬಂದಿಲ್ಲ. ನಿಮ್ಮ ಜತೆ ನಾವಿದ್ದೇವೆ ಎಂದು ಹೇಳಲು ಬಂದಿದ್ದೇವೆ. ಇದು ಕೇವಲ ಉಪ ಚುನಾವಣೆಯಲ್ಲ. ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ. ಬಿಜೆಪಿಯವರು ಸುಳ್ಳಿನ ಮೇಲೆ ಮನೆ ಕಟ್ಟಲು ಹೊರಟಿದ್ದಾರೆ. ನಾವು ನುಡಿದಂತೆ ನಡೆದಿದ್ದೇವೆ. ಒಂದು ವೇಳೆ ಬಿಜೆಪಿಯವರು ಜನರಿಗೆ ಏನಾದರೂ ನೆರವು ನೀಡಿದ್ದರೆ ಅದರ ಪಟ್ಟಿ ನೀಡಲಿ ಎಂದು ಸವಾಲು ಹಾಕಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಅವರ ಸಂಪುಟದಲ್ಲಿ ಎಚ್. ಆಂಜನೇಯ ಅವರನ್ನು ಸಚಿವರನ್ನಾಗಿ ಮಾಡಿ ಭಾರತ ಸಂವಿಧಾನದ ಆಶಯದಂತೆ ನಡೆದುಕೊಂಡಿದ್ದೇವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳಿಗೆ ಜನಗಣತಿ ಆಧಾರದ ಮೇಲೆ ಅನುದಾನ ನೀಡಬೇಕು ಎಂಬ ಕಾನೂನು ದೇಶದಲ್ಲಿ ತಂದಿದ್ದರೆ ಅದು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯವರು ಇಂತಹ ಒಂದು ತೀರ್ಮಾನ ಮಾಡಿದ್ದರೆ ಹೇಳಲಿ. ಒಂದು ವೇಳೆ ಅವರು ಮಾಡಿದ್ದರೆ ಚುನಾವಣಾ ಭಾಷಣವೇ ಅಗತ್ಯವಿಲ್ಲ. ಬಾಬು ಜಗಜೀವನ್ ರಾಮ್ ಅವರಂತಹ ಮಹಾನ್ ನಾಯಕರು ಕಾಂಗ್ರೆಸ್ ನಲ್ಲಿ ಬೆಳೆದವರು. ಅವರ ಪುತ್ರಿ ಮೀರಾ ಕುಮಾರ್ ಅವರು ಲೋಕಸಭೆ ಸ್ಪೀಕರ್ ಆಗಿದ್ದವರು. ನಾವು ಎಲ್ಲ ವರ್ಗದವರಿಗೆ ಅಧಿಕಾರ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸುತ್ತಿದ್ದೇವೆ ಎಂದರು.

ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 7 ವರ್ಷವಾಗಿದ್ದು, ಕೇಂದ್ರ ಸರ್ಕಾರದ ಸಚಿವರು ನಿಮಗೆ ಕಷ್ಟದ ಸಮಯದಲ್ಲಿ ಏನಾದರೂ ಶ್ರಮ ವಹಿಸಿದ್ದಾರಾ? ಬಡವರಿಗಾಗಿ ಎಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ? ಸಿಂಧಗಿ ಕ್ಷೇತ್ರದ ಮಹಾಜನತೆ ಪ್ರಜ್ಞಾವಂತ, ಬುದ್ಧಿವಂತರಿದ್ದೀರಿ. ನೀವು ನಿಮ್ಮ ಸ್ವಾಭಿಮಾನದ ಮತವನ್ನು ಹಣಕ್ಕೆ ಮಾರಿಕೊಳ್ಳುವುದಿಲ್ಲ. ಬಿಜೆಪಿ ಶಕ್ತಿ ಕೇವಲ ನೋಟಿನಲ್ಲಿದೆ. ನಿಮ್ಮನ್ನು ಖರೀದಿಸಲು ಮುಂದಾಗುತ್ತಾರೆ. ಅವರು ಉತ್ತಮ ಆಡಳಿತ ನೀಡಿಲ್ಲ. ಬಡವರು, ರೈತರಿಗೆ ನೆರವು ನೀಡಿಲ್ಲ. ರೈತರ ಕೃಷಿಗೆ ಬೇಕಾಗಿರುವ ರಸಗೊಬ್ಬರ ಕೊರತೆ ರಾಜ್ಯದಲ್ಲಿ ತಲೆದೋರಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ ಎಂದು ಹೇಳಿದರು.

ಕೋವಿಡ್ ಸಮಯದಲ್ಲಿ ನಷ್ಟ ಅನುಭವಿಸಿದವರಿಗೆ, ಯುವಕರಿಗೆ, ಆಸ್ಪತ್ರೆ ಸೇರಿದವರಿಗೆ, ಸತ್ತವರಿಗೆ ಸರ್ಕಾರ ಪರಿಹಾರದ ಹಣ ಕೊಟ್ಟಿತೇ? ಯಾವುದಾದರೂ ನೆರವು ನೀಡಿದರಾ? ಯಾವುದೂ ಇಲ್ಲ. ನಾವು ಜಾತಿಗಳ ಸಭೆ ಮಾಡಿ ನಿಮ್ಮ ಜತೆ ಇದ್ದೇವೆ ಎಂದು ಧೈರ್ಯ ತುಂಬುತ್ತಿದ್ದೇವೆ ಹೊರತು, ವಿಭಜನೆ ಮಾಡುತ್ತಿಲ್ಲ. ನಾವು ಎಲ್ಲರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತೇವೆ ಎಂದರು.

ಈ ಚುನಾವಣೆಯಲ್ಲಿ ಅಶೋಕ ಮನಗೂಳಿ ಅವರು ಮಾತ್ರ ಅಭ್ಯರ್ಥಿಯಲ್ಲ. ನಾವೆಲ್ಲ ನಿಮ್ಮ ಅಭ್ಯರ್ಥಿಗಳು. ಇಡೀ ಕಾಂಗ್ರೆಸ್ ನಿಮ್ಮ ಬಗ್ಗೆ ಕಾಳಜಿ ಹೊಂದಿದೆ. ಕಾಂಗ್ರೆಸ್ ಇತಿಹಾಸ ನಿಮ್ಮ ಇತಿಹಾಸ, ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವೆಲ್ಲ ಅಧಿಕಾರಕ್ಕೆ ಬಂದಹಾಗೆ. ಇಂದಿರಾ ಗಾಂಧಿ ಅವರು ಕೊಟ್ಟ ಈ ಹಸ್ತ, ನಿಮಗೆ ಪಿಂಚಣಿ, ಭೂಮಿ, ಅಕ್ಕಿ, ಹಲವು ಭಾಗ್ಯಗಳನ್ನು ಕೊಟ್ಟಿದೆ. ಈ ಗುರುತಿಗೆ ಮತ ಹಾಕಿ, ನೀವು ಗೆಲ್ಲಬೇಕು ಎಂದು ಮನವಿ ಮಾಡಿದರು.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ: ರಾಜ್ಯದಲ್ಲಿ ರಸಗೊಬ್ಬರ ಅಭಾವವಿದ್ದು, ಗೊಬ್ಬರ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಹೀಗಾಗಿ ಸರ್ಕಾರ ರೈತರ ಪರಿಸ್ಥಿತಿ ಏನು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಅವರು ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಹೋಗಿ ಮತದಾನ ಮಾಡಿ ಎಂದಿದ್ದರು. ಇಂದು ನಾನು ಕೂಡ ಅದನ್ನೇ ಹೇಳುತ್ತಿದ್ದೇನೆ. ಮತದಾರರು ಮತ ಹಾಕುವ ಮುನ್ನ ಅಡುಗೆ ಅನಿಲದಿಂದ ಬೈಕ್, ಕಾರು, ಆಟೋ, ಟ್ರಾಕ್ಟರ್ ಗೆ ನಮಸ್ಕರಿಸಿ ಮತ ಹಾಕಲಿ ಎಂದು ಡಿ.ಕೆ.ಶಿವಕುಮಾರ್‌‌ ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚಿಸಿ ತಾತಾ ಎಂದು ಸಿಎಂಗೆ ಮನವಿ ಮಾಡಿದ ಪುಟ್ಟ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...