Homeಕರ್ನಾಟಕವಸತಿ ಯೋಜನೆಯಲ್ಲಿ ಭಾರಿ ಲಂಚದ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್; ಆಡಿಯೋ ವೈರಲ್

ವಸತಿ ಯೋಜನೆಯಲ್ಲಿ ಭಾರಿ ಲಂಚದ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್; ಆಡಿಯೋ ವೈರಲ್

- Advertisement -
- Advertisement -

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ವಸತಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಆಡಿಯೋ ಕ್ಲಿಪ್ ಶುಕ್ರವಾರ ಬಹಿರಂಗಗೊಂಡಿದೆ. ಆಡಿಯೋ ಕ್ಲಿಪ್‌ನಲ್ಲಿ, ಶಾಸಕ ಪಾಟೀಲ್ ತಮ್ಮಲ್ಲಿರುವ ಮಾಹಿತಿಯನ್ನು ಬಹಿರಂಗಪಡಿಸಿದರೆ, ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಪಾಯವೇ ಅಲುಗಾಡುತ್ತದೆ ಎಂದು ಹೇಳಿದ್ದಾರೆ. ವಸತಿ ಯೋಜನೆಯಲ್ಲಿ

ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ರಾಜ್ಯ ಬಿಜೆಪಿ ಒತ್ತಾಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆಯನ್ನು ಖಚಿತಪಡಿಸಿಕೊಳ್ಳುವಂತೆಯೂ ಒತ್ತಾಯಿಸಿದೆ.

ದೂರವಾಣಿ ಸಂಭಾಷಣೆಯ ಆಡಿಯೋ ಕ್ಲಿಪ್‌ನಲ್ಲಿ ಕಲಬುರಗಿ ಜಿಲ್ಲೆಯ ಆಳಂದ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕ ಪಾಟೀಲ್ ಮತ್ತು ಸಚಿವ ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರೊಂದಿಗೆ ಮಾತನಾಡುತ್ತಿರುವುದು ಕೇಳಿಬಂದಿದೆ ಎಂದು ವರದಿಯಾಗಿದೆ. ತಮ್ಮ ಕ್ಷೇತ್ರದೊಳಗಿನ ಹಳ್ಳಿಗಳಲ್ಲಿ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಲಂಚದ ಬಗ್ಗೆ ಪಾಟೀಲ್ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಾ, ಈ ಬಗ್ಗೆ ಕಾರ್ಯದರ್ಶಿಯನ್ನು ಪ್ರಶ್ನಿಸಿದ್ದಾರೆ.

“ಲಂಚ ನೀಡಿದವರಿಗೆ ಮಾತ್ರ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ನನ್ನ ಸ್ವಂತ ಸರ್ಕಾರದ ವಿರುದ್ಧ ಈ ದೂರು ನೀಡಲು ನನಗೆ ಬೇಸರವಾಗುತ್ತಿದೆ. ವಿವಿಧ ಗ್ರಾಮಗಳಲ್ಲಿ ಒಟ್ಟು 950 ಮನೆಗಳನ್ನು ಫಲಾನುಭವಿಗಳಿಂದ ಹಣ ಪಡೆದು ಹಂಚಿಕೆ ಮಾಡಲಾಗಿದೆ. ನನ್ನ ಶಿಫಾರಸು ಪತ್ರಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಬದಲಾಗಿ, ಗ್ರಾಮ ಪಂಚಾಯತ್ ಅಧ್ಯಕ್ಷರು ಸಲ್ಲಿಸಿದ ಪಟ್ಟಿಗೆ ಆದ್ಯತೆ ನೀಡಲಾಗಿದೆ” ಎಂದು ಶಾಸಕ ಪಾಟೀಲ್ ಆಡಿಯೊದಲ್ಲಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಆಡಿಯೊದಲ್ಲಿ, ಜಮೀರ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರು ಶಾಸಕ ಪಾಟೀಲ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ. ತಮ್ಮ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸುವಂತೆ ಕೇಳಿದ್ದು, ಅವರಿಗೂ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಆಡಿಯೋ ಕ್ಲಿಪ್ ಬಿಡುಗಡೆಯಾದ ನಂತರ, ಶಾಸಕ ಪಾಟೀಲ್ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆಯನ್ನು ನೀಡಿಲ್ಲ. ಕಾಂಗ್ರೆಸ್ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಈ ಮಧ್ಯೆ, ರಾಜ್ಯದ ಬಿಜೆಪಿ ಆಡಿಯೋ ಕ್ಲಿಪ್ ಬಗ್ಗೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರವನ್ನು ಬೆಂಬಲಿಸುತ್ತದೆ ಎಂದು ಹೇಳಿದೆ.

“ಕಾಂಗ್ರೆಸ್ ಸರ್ಕಾರದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಆಗಿದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಕಾಂಗ್ರೆಸ್ ಶಾಸಕ ಶ್ರೀ ಬಸವರಾಜ ರಾಯರೆಡ್ಡಿ ಅವರು ನೀಡಿದ್ದ ಹೇಳಿಕೆಗೆ ಪುಷ್ಟಿ ನೀಡುವಂತೆ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಸಚಿವ ಝಮೀರ್ ಅಹ್ಮದ್‌ ಅವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.” ಎಂದು ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿದ್ದಾರೆ.

“ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 950 ಮನೆಗಳನ್ನು ಲಂಚ ಪಡೆದು ಹಂಚಿಕೆ ಮಾಡಲಾಗಿದೆ ಎಂದು ಆರೋಪ ಮಾಡಿರುವ ಶಾಸಕ ಬಿ.ಆರ್.ಪಾಟೀಲ್ ಅವರು ತಮ್ಮಲ್ಲಿರುವ ಭ್ರಷ್ಟಾಚಾರದ ಮಾಹಿತಿಯನ್ನು ಬಹಿರಂಗ ಪಡಿಸಿದರೆ ಸರ್ಕಾರವೇ ಅಲ್ಲಾಡುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಶಾಸಕ ಬಿ.ಆರ್. ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಲಂಚಗುಳಿತನದ ಬಗ್ಗೆ ತಮಗಿರುವ ಮಾಹಿತಿಯನ್ನು ಬಹಿರಂಗ ಪಡಿಸಬೇಕು ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಬೇಕು ಎಂದು ಆಗ್ರಹಿಸುತ್ತೇನೆ. ಅವರಿಗೆ ಈ ವಿಷಯದಲ್ಲಿ ರಾಜ್ಯ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ.” ಎಂದು ತಿಳಿಸಿದ್ದಾರೆ.

“ಸ್ಪಪಕ್ಷದ ಶಾಸಕರೇ ಭ್ರಷ್ಟಾಚಾರದ ಆರೋಪ ಮಾಡುತ್ತಿರುವಾಗ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ತಮ್ಮ ಸ್ಥಾನದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿದೆ? ಸಿಎಂ ಸಿದ್ದರಾಮಯ್ಯ ಅವರ. ಈ ಕೂಡಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ರಾಜೀನಾಮೆ ಪಡೆದು ಶಾಸಕ ಬಿ.ಆರ್.ಪಾಟೀಲ್ ಅವರ ಮೊಬೈಲ್ ಕರೆ ಆಡಿಯೋ ಆಧಾರದ ಮೇಲೆ ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ ನೀಡಿ” ಎಂದು ಅಶೋಕ್ ಅವರು ಆಗ್ರಹಿಸಿದ್ದಾರೆ. ವಸತಿ ಯೋಜನೆಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

ಮತದಾನದ ವೀಡಿಯೊ, ಫೋಟೋ ಸಂಗ್ರಹ ಸಮಯವನ್ನು 45 ದಿನಗಳಿಗೆ ಕಡಿತಗೊಳಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...