Homeಮುಖಪುಟಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ: ವಿಡಿಯೋ ನೋಡಿ

ಇಂಜಿನಿಯರ್ ಮೇಲೆ ಕೊಳಚೆ ನೀರು ಸುರಿದಿದ್ದ ಕಾಂಗ್ರೆಸ್ ಶಾಸಕನ ಬಂಧನ: ವಿಡಿಯೋ ನೋಡಿ

- Advertisement -
- Advertisement -

ಮಹರಾಷ್ಟ್ರದ ಕಾಂಗ್ರೆಸ್ ಶಾಸಕ ನಿತೀಶ್ ರಾಣೆ ಇಂದು ಮುಂಬೈ ಸಮೀಪದ ಮುಂಬೈ ಗೋವಾ ಹೆದ್ದಾರಿ ಬಳಿ ತನ್ನ ಬೆಂಬಲಿಗರೊಡನೆ ಇಂಜಿನಿಯರ್ ಮೆಲೆ ಕೊಳಚೆ ನೀರು ಸುರಿದು, ಕಂಬಕ್ಕೆ ಕಟ್ಟಿ ಅವಮಾನಿಸಿದ ಘಟನೆ ಸಂಭವಿಸಿದೆ. ಮಾಧ್ಯಮಗಳೆದುರೆ ಈ ಘಟನೆ ಜರುಗಿದ್ದು ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದಲ್ಲದೇ ಆ ಕಾಂಗ್ರೆಸ್ ಶಾಸಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.

(ವಿಡಿಯೋ ಕೃಪೆ: ಎಎನ್ಐ)

ವಾರದಹಿಂದೆ ಬಿಜೆಪಿ ಶಾಸಕ ಆಕಾಶ್ ವರ್ಗಿಯ ಎಂಬುವವರು ಬ್ಯಾಟ್‍ನಿಂದ ಅಧಿಕಾರಗಳ ಮೇಲೆ ಹಲ್ಲೆ ನಡೆಸಿದ್ದರು. ಎರಡು ದಿನಗಳ ಹಿಂದೆ ತಾನೇ ತೆಲಂಗಾಣದಲ್ಲಿ ಮಹಿಳಾ ಫಾರೆಸ್ಟ್ ರೇಂಜ್ ಆಫಿಸರ್ ಮೇಲೆ ಶಾಸಕನ ತಮ್ಮ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದನ್ನು. ಆ ಘಟನೆಗಳು ಮಾಸುವ ಮುನ್ನವೇ ಈ ಶಾಸಕನ ದುವರ್ತನೆ ನಡೆದಿದೆ.

ಮುಂಬೈ – ಗೋವಾ ಬಳಿಯ ಕನಕವಲ್ಲಿ ಎಂಬಲ್ಲಿ ರಸ್ತೆ ಮತ್ತು ಸೇತುವೆ ಕಾಮಗರಿ ನಡೆಯುತ್ತಿತ್ತು. ಪರಿಶೀಲನೆಗೆಂದು ಬಂದ ಶಾಸಕ ನಿತೀಶ್ ರಾಣೆ ಕೆಲಸ ಪೂರ್ಣಗೊಂಡಿಲ್ಲದಿರುವುದರಿಂದ ಜನರಿಗೆ ತೊಂದರೆಯಾಗುತ್ತದೆ ಎಂದು ಸಿಡಿಮಿಡಿಗೊಂಡಿದ್ದರು. ಆ ಸಂದರ್ಭದಲ್ಲಿ ಕೋಪದಿಂದ ಉಪ ಇಂಜಿನಿಯರ್ ಪ್ರಕಾಶ್ ಶೆಡ್ಕರ್ ಮೇಲೆ ಕಾಮಗಾರಿ ವಿಳಂಬ ಮಾಡಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡ ಶಾಸಕ ಅಲ್ಲಿ ತಮ್ಮ ಬೆಂಬಲಿಗರು ತುಂಬಿಟ್ಟಿದ್ದ ಕೊಳಚೆ ನೀರನ್ನು ಸುರಿದಿದ್ದಾರೆ. ನಂತರ ಅವರ ಬೆಂಬಲಿಗರು ಇಂಜಿನಿಯರ್ ಅನ್ನು ಕಂಬಕ್ಕೆ ಕಟ್ಟಿದ್ದರು ಎಂದು ಸಹ ಹೇಳಲಾಗುತ್ತಿದೆ.

ಘಟನೆ ಕುರಿತು 50ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ದಾಖಲಾಗಿದ್ದು ಇಬ್ಬರನ್ನು ಬಂಧಿಸಲಾಗಿತ್ತು. ಸ್ವಲ್ಪ ಸಮಯ ತಲೆಮರೆಸಿಕೊಂಡಿದ್ದ ಶಾಸಕ ತೀಶ್ ರಾಣೆ ಈಗ ಶರಣಾಗಿದ್ದಾರೆ.  ಇವರು ಈ ಹಿಂದೆಯೂ ಸಹ 2017ರಲ್ಲಿ ಸಭೆಯೊಂದರಲ್ಲಿ ಸ್ಥಿಮಿತತೆ ಕಳೆದುಕೊಂಡು ಹಿರಿಯ ಅಧಿಕಾರಿಯ ಮೆಲೆ ಮೀನು ಎಸೆದಿದ್ದರು.

ಹಿಂದೆ ಕಾಂಗ್ರೆಸ್ ನಾಯಕರಾಗಿದ್ದು ಹಾಲಿ ಬಿಜೆಪಿಯಿಂದ ರಾಜ್ಯಸಭಾ ಸದಸ್ಯರಾಗಿರುವ ನಿತೀಶ್ ರಾಣೆಯವರ ತಂದೆ ನಾರಾಯಣ್ ರಾಣೆಯವರು ಘಟನೆಯನ್ನು ಖಂಡಿಸಿದ್ದಾರೆ. “ರಸ್ತೆ ವಿಷಯವಾಗಿ ಪ್ರತಿಭಟನೆ ಮಾಡುತ್ತಿದ್ದದ್ದು ಸರಿ, ಆದರೆ ಆತನ ವರ್ತನೆ ಅನಪೇಕ್ಷಣೀಯ. ಆತ ಮತ್ತು ಆತನ ಬೆಂಬಲಿಗರು ಹಿಂಸೆ ಮಾಡಿರುವು ಸರಿಯಾದುದಲ್ಲ, ಈ ವಿಚಾರವಾಗಿ ಆತನನ್ನು ಬೆಂಬಲಿಸುವುದಿಲ್ಲ ಎಂದಿದ್ದಾರೆ”.
ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...