Homeಕರ್ನಾಟಕಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

- Advertisement -
- Advertisement -

ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ತನ್ನ ಮೇಲೆ ಅತ್ಯಾಚಾರ ಎಸಗಿದ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 34 ವರ್ಷದ ಮಹಿಳೆಯೊಬ್ಬರು ಮಂಗಳವಾರ ಬೆಂಗಳೂರಿನ ಸಂಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿಯನ್ನು ಆರೋಪಿ 1 (A1) ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅನ್ನು ಆರೋಪಿ 2 (A2) ಎಂದು ಹೆಸರಿಸಿ ಎಫ್‌ಐಆರ್ ದಾಖಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ಮಹಿಳೆ 2022 ರಲ್ಲಿ ಶಾಸಕರನ್ನು ಭೇಟಿಯಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಾಸಕರು ರೈತರೊಬ್ಬರಿಂದ ಅವರ ಫೋನ್ ಸಂಖ್ಯೆಯನ್ನು ಪಡೆದುಕೊಂಡು, ರಾತ್ರಿಯೂ ಸಹ ಅವರಿಗೆ ಕರೆ ಮಾಡಲು ಪ್ರಾರಂಭಿಸಿದ್ದರು ಎಂದು ದೂರಲಾಗಿದೆ. ಕಾಂಗ್ರೆಸ್ ಶಾಸಕ

ಕೆಲವು ತಿಂಗಳ ನಂತರ, ಶಾಸಕ ಬೆತ್ತಲೆಯಾಗಿ ವೀಡಿಯೊ ಕರೆ ಮಾಡಿ ಹೆಬ್ಬಾಳದಲ್ಲಿರುವ ತನ್ನ ಮನೆಗೆ ಹೋಗುವಂತೆ ಒತ್ತಾಯಿಸಿದ್ದು, ಇದಕ್ಕೆ ಮಹಿಳೆ ನಿರಾಕರಿಸಿದ್ದರು. ಆಗ ರೌಡಿಗಳ ತಂಡವೊಂದು ಶಾಸಕರ ಮನೆಗೆ ಹೋಗದಿದ್ದಲ್ಲಿ ಘೋರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾಗಿ ದೂರು ದಾಖಲಾಗಿದೆ.

ಏಪ್ರಿಲ್‌ ವೇಳೆ ಶಾಸಕ ಮಹಿಳೆಯನ್ನು ಬೆಳಗಾವಿಗೆ ಕರೆದಿದ್ದು, ಅಲ್ಲಿ ಅವರು ಅವರನ್ನು ತಬ್ಬಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದರು. ಈ ವೇಳೆ ಅಲ್ಲಿಗೆ ಬೇರೆ ಜನರು ಬಂದಾಗ ಶಾಸಕ ಕುಲಕರ್ಣಿ ಅವರು ಮಹಿಳೆಯನ್ನು ತೆರಳಲು ಬಿಟ್ಟಿದ್ದರು ಎಂದು ದೂರಲಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ: ದುರಹಂಕಾರ ವಿಪತ್ತಿಗೆ ಕಾರಣ: ಕಾಂಗ್ರೆಸ್‌ ಸೋಲಿಗೆ ಟಿಎಂಸಿ ವ್ಯಂಗ್ಯ

ಆಗಸ್ಟ್ 24 ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ತೆರಳಿದಾಗ ಕೂಡಾ ಶಾಸಕ ಕುಲಕರ್ಣಿ ಅವರು ಮಹಿಳೆಗೆ ಮನೆಗೆ ಬರುವಂತೆ ಒತ್ತಾಯಿಸಿದ್ದರು. ಈ ವೇಳೆ ಮಹಿಳೆ ಆಟೋರಿಕ್ಷಾ ಹಿಡಿದು ಅವರ ಮನೆಗೆ ಹೋಗಿದ್ದರು. ಇದರ ನಂತರ, ಶಾಸಕ ಕುಲಕರ್ಣಿ ಅವರು ಮಹಿಳೆಯನ್ನು ದೇವನಹಳ್ಳಿ ವಿಮಾನ ನಿಲ್ದಾಣದ ಬಳಿಯ ಐವಿಸಿ ರಸ್ತೆಯಲ್ಲಿರುವ ಮನೆಗೆ ಕರೆದೊಯ್ದು ಮೇಲೆ ಅತ್ಯಾಚಾರ ಎಂದು ಆರೋಪಿಸಲಾಗಿದೆ.

ಅವರು ಮತ್ತೆ ಸೆಪ್ಟೆಂಬರ್ 2022 ರಲ್ಲಿ ಹಾವೇರಿಯಲ್ಲಿ ಭೇಟಿಯಾಗಿದ್ದು, ಇದರ ನಂತರ ಮಹಿಳೆ ಮತ್ತು ಶಾಸಕನ ನಡುವಿನ ಫೋನ್ ಸಂಭಾಷಣೆ ಲೀಕ್ ಆಗಿದೆ ಎಂದು ಆರೋಪಿಸಿ ಮಹಿಳೆಗೆ ಶಾಸಕ ಕುಲಕರ್ಣಿ ಅವರು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ.

ಅಕ್ಟೋಬರ್ 2 ರಂದು ಅವರು ಧರ್ಮಸ್ಥಳದ ಬಳಿಯ ಸ್ಥಳವೊಂದಕ್ಕೆ ಕರೆದೊಯ್ದು, ಅಲ್ಲಿ ಶಾಸಕ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದರು. ಮರುದಿನ ಅವರು ಅಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು ಎಂದು ವರದಿಯಾಗಿದೆ. ಧರ್ಮಸ್ಥಳದಲ್ಲಿದ್ದಾಗ ತಮ್ಮ ಸಂಬಂಧವನ್ನು ಬಹಿರಂಗಪಡಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ವರದಿ ಹೇಳಿದೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 506, 504, 201, 366, 376, 323, 354 ಮತ್ತು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...