Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಓಡಿಹೋದ ಕೇಂದ್ರ ಸಚಿವೆ: 'ತೀಕ್ಷ್ಣ ಪ್ರತಿಕ್ರಿಯೆ' ಎಂದು ಕಾಂಗ್ರೆಸ್...

ಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಓಡಿಹೋದ ಕೇಂದ್ರ ಸಚಿವೆ: ‘ತೀಕ್ಷ್ಣ ಪ್ರತಿಕ್ರಿಯೆ’ ಎಂದು ಕಾಂಗ್ರೆಸ್ ಲೇವಡಿ

- Advertisement -
- Advertisement -

ಲೈಂಗಿಕ ಕಿರುಕುಳ ಆರೋಪಿಯಾಗಿರುವ ಕುಸ್ತಿ ಫೆಡರೆಶನ್ ಮುಖ್ಯಸ್ಥ, ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಶರಣ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರನ್ನು ಮಾಧ್ಯಮದವರ ಪ್ರಶ್ನೆ ಕೇಳಿದಾಗ ಅಲ್ಲಿಂದ ಓಡಿಹೋಗಿದ್ದಾರೆ.

ಕುಸ್ತಿಪಟುಗಳ ಪ್ರತಿಭಟನೆ ಬಗ್ಗೆ ಮಾಧ್ಯಮದವರು ಪ್ರತಿಕ್ರಿಯಿಸಲು ಕೇಳಿದಾಗ ಸಚಿವೆ ಮೀನಾಕ್ಷಿ ಲೇಖಿ ಅವರು ತಕ್ಷಣವೇ ಅಲ್ಲಿಂದ ತೆರಳಲು ಮುಂದಾಗುತ್ತಾರೆ. ಆಗ ಮಾಧ್ಯಮದವರು ಅವರನ್ನು ಹಿಂಬಾಲಿಸಿದಾಗ ಉತ್ತರಿಸದೇ ಓಡಿಹೋಗಿದ್ದಾರೆ. ಸಚಿವರು ಓಡಿಹೋಗುವ ವಿಡಿಯೋ ವೈರಲ್ ಆಗಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ”ಮಹಿಳಾ ಕುಸ್ತಿಪಟುಗಳ ವಿಚಾರವಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ನೀವೇ ನೋಡಿ..” ಎಂದು ಲೇವಡಿ ಮಾಡಿದೆ.

ಮಾಧ್ಯಮದವರು ಕುಸ್ತಿಪಟುಗಳ ಬಗ್ಗೆ ಪ್ರಶ್ನೆ ಕೇಳಿದಾಗ ಸಚಿವೆ ಮೀನಾಕ್ಷಿ ಲೇಖಿ ಅವರು, ”ಚಲೋ, ಚಲೋ, ಚಲೋ” ಎಂದು ಸಚಿವರು ತಮ್ಮ ಕಾರಿನತ್ತ ಧಾವಿಸುತ್ತಿದ್ದರು. ಆಗ ಮಾಧ್ಯಮದ ವರದಿಗಾರರು ಕೇಂದ್ರ ಸಚಿವರನ್ನು ಬೆನ್ನಟ್ಟಲಾಯಿತು. ”ಪ್ರತಿಭಟಿಸುವ ಕುಸ್ತಿಪಟುಗಳ ಬಗ್ಗೆ ನೀವು ಏನು ಹೇಳುತ್ತೀರಿ?” ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಮೀನಾಕ್ಷಿ ಲೇಖಿ, ”ಕಾನೂನು ಪ್ರಕ್ರಿಯೆ ನಡೆಯುತ್ತಿದೆ” ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಪದಕಗಳನ್ನು ಗಂಗಾ ನದಿಗೆ ಹಾಕಲು ಮುಂದಾದ ಕ್ರೀಡಾಪಟುಗಳ ಮನವೊಲಿಸಿದ ರೈತ ನಾಯಕ ಟಿಕಾಯತ್; ಆರೋಪಿ ಬಂಧನಕ್ಕೆ 5 ದಿನಗಳ ಗಡುವು

ಪ್ರತಿಭಟನೆ ಕುರಿತು ಮಂಗಳವಾರದ ಬೆಳವಣಿಗೆ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಳೆದ ಒಂದು ತಿಂಗಳಿನಿಂದ ಕ್ರೀಡಾಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಪ್ರತಿಭಟನಾಕಾರರತ್ತ ತಿರುಗಿಯೂ ನೋಡುತ್ತಿಲ್ಲ. ಹಾಗಾಗಿ ಹೋರಾಟ ತೀವ್ರಗೊಳಿಸಿರುವ ಕ್ರೀಡಾಪಟುಗಳು, ಪ್ರತಿಭಟನೆಯ ಭಾಗವಾಗಿ ಒಲಿಂಪಿಕ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದರು. ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ್ದಾರೆ.

ಖ್ಯಾತ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶಾ ಫೋಗಟ್‌, ಬಜರಂಗ್ ಪೂನಿಯಾ ಹಾಗೂ ಅವರ ನೂರಾರು ಬೆಂಬಲಿಗರು ದೆಹಲಿಯಿಂದ ಹೊರಟು, ಹರಿದ್ವಾರದ ಹರ್ ಕಿ ಪೌರಿ ಘಾಟ್ ತಲುಪಿದರು. ಈ ವೇಳೆ ಸ್ಥಳದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಹಾಕಲಾಗಿತ್ತು.

ಕಣ್ಣೀರು ಹಾಕುತ್ತಿದ್ದ ಸಾಕ್ಷಿ ಮಲಿಕ್, ವಿನೇಶಾ ಹಾಗೂ ಅವರ ಸಂಬಂಧಿ ಸಂಗೀತಾ ಅವರನ್ನು ಸಮಾಧಾನಪಡಿಸಲಾಗುತ್ತಿತ್ತು. ಮತ್ತೊಂದೆಡೆ, ಅವರು ಕುಳಿತಿದ್ದ ಸ್ಥಳವನ್ನು ಬೆಂಬಲಿಗರು ಸುತ್ತುವರಿದಿದ್ದಕ್ಕೆ ‘ಹರ್ ಕಿ ಪೌರಿ’ ಘಾಟ್ ಸಾಕ್ಷಿಯಾಗಿತ್ತು. ನಂತರ, ಕುಸ್ತಿಪಟುಗಳು 20 ನಿಮಿಷಗಳಷ್ಟು ಮೌನಕ್ಕೆ ಮೊರೆ ಹೋದರು. ಬಳಿಕ ತಮ್ಮ ಪ್ರಶಸ್ತಿ ಫಲಕಗಳನ್ನು ಹಿಡಿದುಕೊಂಡು ನದಿ ತೀರದಲ್ಲಿ ಕಣ್ಣೀರು ಹಾಕಿದರು.

ಆರೋಪಿ ಬಿಜೆಪಿಯ ಸಂಸದ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕುಸ್ತಿಪಟುಗಳು ಮಂಗಳವಾರ ಐದು ದಿನಗಳ ಗಡುವು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Such a worst behaviour of elected members for the parliament of india.if they don’t have guts to face our sport’s icons of India they are not worth to represent loksabha election.they should booted.save our international champions.this is nothing but a beti bagav from India

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...