Homeಮುಖಪುಟಅನುರಾಗ್ ಠಾಕೂರ್ ಭಾಷಣಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರಧಾನಿ ಮೋದಿ : ಹಕ್ಕುಚ್ಯುತಿ ದೂರು ನೀಡಿದ ಕಾಂಗ್ರೆಸ್

ಅನುರಾಗ್ ಠಾಕೂರ್ ಭಾಷಣಕ್ಕೆ ಬೆಂಬಲ ವ್ಯಕ್ತಪಡಿಸಿದ ಪ್ರಧಾನಿ ಮೋದಿ : ಹಕ್ಕುಚ್ಯುತಿ ದೂರು ನೀಡಿದ ಕಾಂಗ್ರೆಸ್

- Advertisement -
- Advertisement -

ರಾಹುಲ್ ಗಾಂಧಿ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರ ಭಾಷಣವನ್ನು ಬೆಂಬಲಿಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪ್ರತಿಪಕ್ಷಗಳು ಹಕ್ಕುಚ್ಯುತಿ ದೂರು ನೀಡಿದೆ.

ಜಲಂಧರ್ ಸಂಸದ ಹಾಗೂ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ.

“ಅನುರಾಗ್ ಠಾಕೂರ್ ಅವರು ರಾಹುಲ್ ಗಾಂಧಿ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳನ್ನು ಲೋಕಸಭೆಯ ಕಡತದಿಂದ ತೆಗೆಯಲಾಗಿದೆ. ಆದರೆ, ಪ್ರಧಾನಿಯವರ ತಮ್ಮ ಎಕ್ಸ್ ಖಾತೆಯಲ್ಲಿ ಆಕ್ಷೇಪಾರ್ಹ ಅಂಶಗಳಿರುವ ಸಂಪೂರ್ಣ ಭಾಷಣದ ವಿಡಿಯೋ ಹಂಚಿಕೊಂಡಿದ್ದಾರೆ. ಕೌಲ್ ಮತ್ತು ಶಕ್ಧರ್ ಅವರೂ ಕೂಡ ಆಕ್ಷೇಪಾರ್ಹ ಅಂಶಗಳಿರುವ ವಿಡಿಯೋ ಶೇರ್ ಮಾಡಿದ್ದಾರೆ” ಎಂದು ಚರಂಜಿತ್ ಸಿಂಗ್ ಚನ್ನಿ ದೂರಿನಲ್ಲಿ ತಿಳಿಸಿದ್ದಾರೆ.

ಕಡತದಿಂದ ತೆಗೆದು ಹಾಕಿರುವ ಅಂಶಗಳಿಲ್ಲದ ಭಾಷಣವನ್ನು ಆನ್‌ಲೈನ್ ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮನವಿ ಮಾಡಿದರೂ, ಸಂಸದ್ ಟಿವಿಯು ಎಡಿಟ್ ಮಾಡದಿರುವ ಭಾಷಣವನ್ನೇ ಅಪ್ಲೋಡ್ ಮಾಡಿದೆ. “ಇದು ಭಾರತೀಯ ಸಂಸದೀಯ ಇತಿಹಾಸದಲ್ಲಿ ನಾಚಿಕೆಗೇಡಿನ ಕೆಳಮಟ್ಟವಾಗಿದೆ. ಇದು ಬಿಜೆಪಿ-ಆರೆಸ್ಸೆಸ್ ಹಾಗೂ ಮೋದಿಯವರಲ್ಲಿ ಆಳವಾಗಿ ಬೇರು ಬಿಟ್ಟಿರುವ ಜಾತೀಯತೆಯನ್ನು ಪ್ರತಿಫಲಿಸುತ್ತದೆ” ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಿಡಿಕಾರಿದ್ದಾರೆ.

ಪ್ರಧಾನಿಯ ಈ ನಡೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, “ತೀವ್ರ ಅವಹೇಳನಕಾರಿ ಹಾಗೂ ಅಸಾಂವಿಧಾನಿಕ ಮನಸ್ಥಿತಿಯ ಭಾಷಣವನ್ನು ಹಂಚಿಕೊಳ್ಳುವ ಮೂಲಕ, ಪ್ರಧಾನಿಯು ಗಂಭೀರ ಸಂಸದೀಯ ಹಕ್ಕುಚ್ಯುತಿಯನ್ನು ಪ್ರೋತ್ಸಾಹಿಸಿದ್ದಾರೆ” ಎಂದಿದೆ.

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಜಾತಿಯ ಕುರಿತು ಹೇಳಿಕೆ ನೀಡಿದ್ದು, ಲೋಕಸಭೆಯು ಮಂಗಳವಾರ ಪ್ರತಿಪಕ್ಷಗಳು ಮತ್ತು ಆಡಳಿತ ಪಕ್ಷದ ನಾಯಕರ ನಡುವೆ ಮಾತಿನ ಚಕಮಕಿಗೆ ಸಾಕ್ಷಿಯಾಯಿತು.

ಜಾತಿಗಣತಿ ಕುರಿತ ಕಾಂಗ್ರೆಸ್ ನಿಲುವನ್ನು ಪ್ರಶ್ನಿಸುವ ಸಂದರ್ಭದಲ್ಲಿ ಹಿಮಾಚಲ ಪ್ರದೇಶದ ಹಮೀರ್‌ಪುರದ ಸಂಸದ ಅನುರಾಗ್ ಠಾಕೂರ್ ‘ ತಮ್ಮ ಜಾತಿ ಗೊತ್ತಿಲ್ಲದವರು ಜಾತಿ ಜನಗಣತಿಗಾಗಿ ವಕಾಲತ್ತು ವಹಿಸುತ್ತಿದ್ದಾರೆ’ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ : ಸಂಸತ್ ಬಜೆಟ್ ಅಧಿವೇಶನ: ಸದನದಲ್ಲಿ ಪ್ರತಿಧ್ವನಿಸಿದ ಜಾತಿ ಗಣತಿ, ವೈಯಕ್ತಿಕ ಟೀಕೆಗಿಳಿದ ಬಿಜೆಪಿ ಸಂಸದ ಠಾಕೂರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...