Homeಮುಖಪುಟಛತ್ತೀಸ್‌ಗಢ, ರಾಜಸ್ಥಾನದಲ್ಲಿ 'ED' ದುರ್ಬಳಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್

ಛತ್ತೀಸ್‌ಗಢ, ರಾಜಸ್ಥಾನದಲ್ಲಿ ‘ED’ ದುರ್ಬಳಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ತಮ್ಮ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ಪೂರ್ವಾಗ್ರಹ ಪೀಡಿತವಾಗಿ ಕ್ರಮವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಭಾರತೀಯ ಜನತಾ ಪಕ್ಷವು ಪ್ರತಿಪಕ್ಷಗಳ ವಿರುದ್ಧ ‘ಇಡಿ’ಯನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ. ರಾಜಸ್ಥಾನ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಸಾರಾ ಅವರ ಮೇಲೆ ಇಡಿ ದಾಳಿ, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್‌ಗೆ ನೊಟೀಸ್‌ ನೀಡಿರುವುದು ಮತ್ತು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ವಿರುದ್ಧ ಜಾರಿ ನಿರ್ದೇಶನಾಲಯ ಮಾಡಿರುವ ಆರೋಪಗಳ ಬಗ್ಗೆ ಕೂಡ ನಿಯೋಗ ಚುನಾವಣಾ ಆಯೋಗದ ಗಮನಕ್ಕೆ ತಂದಿದೆ.

ಅಭಿಷೇಕ್ ಮನು ಸಿಂಘ್ವಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರಾದ ತಾಕಿರ್ ಅನ್ವರ್ ಮತ್ತು ಉದಿತ್ ರಾಜ್,  ಅಧಿಕಾರವನ್ನು ದುರುಪಯೋಗ ಮಾಡುತ್ತಿರುವ ಮತ್ತು ಚುನಾವಣಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಇಡಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಚುನಾವಣಾ ಆಯೋಗದ ಭೇಟಿ ಬಳಿಕ ಮಾತನಾಡಿದ ಅಭಿಷೇಕ್ ಮನು ಸಿಂಘ್ವಿ, ಬಿಜೆಪಿಯ ಚುನಾವಣಾ ವಿಭಾಗದ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ನಾವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ಇಡಿ ಛತ್ತೀಸ್‌ಗಢದಲ್ಲಿ ಬಿಜೆಪಿಯ ಚುನಾವಣಾ ಏಜೆಂಟ್‌ನಂತೆ ಕಾರ್ಯನಿರ್ವಹಿಸುತ್ತಿದೆ ಮತ್ತು ಯಾವುದೇ ರೀತಿಯ ಪರಿಶೀಲನೆ ನಡೆಸದೆ ನಮ್ಮ ಮುಖ್ಯಮಂತ್ರಿ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದೆ ಎಂದು ತಾರಿಕ್ ಅನ್ವರ್ ಹೇಳಿದ್ದಾರೆ.

ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರವರ್ತಕರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರಿಗೆ ಸುಮಾರು 508 ಕೋಟಿ ರೂ. ಪಾವತಿಸಿರುವ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ನ.4ರಂದು ಇಡಿ ಹೇಳಿತ್ತು. ಈ ಆರೋಪಗಳ ಬಗ್ಗೆ ಮೋದಿ ತಮ್ಮ ಚುನಾವಣಾ ಪ್ರಚಾರ ಭಾಷಣಗಳಲ್ಲಿ ಉಲ್ಲೇಖಿಸಿ ಬಘೇಲ್ ಅವರನ್ನು ಒಂದು ದಿನವೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಬಿಡಬಾರದು ಮತ್ತು ಮುಖ್ಯಮಂತ್ರಿಗಳ ಕಚೇರಿಯು ಭ್ರಷ್ಟಾಚಾರದ ಕೇಂದ್ರ ಎಂದು ಹೇಳಿದ್ದರು.

ಛತ್ತೀಸ್‌ಗಢದಲ್ಲಿ ನ.4 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಾ, ತಮ್ಮ ಸರ್ಕಾರವು ಸುಮಾರು 80 ಕೋಟಿ ಬಡವರಿಗೆ ಪ್ರತಿ ತಿಂಗಳು 5 ಕೆಜಿ ಉಚಿತ ಆಹಾರ ಪಡಿತರವನ್ನು ಒದಗಿಸುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಿದೆ ಎಂದು ಹೇಳಿದ್ದರು.

ಛತ್ತೀಸ್‌ಗಢದ ದುರ್ಗ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ಮೋದಿ ಮಾಡಿದ ಈ ಘೋಷಣೆ  ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಆದರೆ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿಲ್ಲ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...