Homeಮುಖಪುಟ'ಆಪರೇಷನ್ ಸಿಂಧೂರ್‌' ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

- Advertisement -
- Advertisement -

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ.

ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು, ರಕ್ಷಣಾ ಸಚಿವರು ಸಂಸತ್ತಿಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

‘ಆಪರೇಷನ್ ಸಿಂಧೂರ್’ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ರಾಜ್‌ನಾಥ್ ಸಿಂಗ್ ಅವರು ಕಳೆದ ವರ್ಷ ಜುಲೈ 28ರಂದು ಲೋಕಸಭೆಯಲ್ಲಿ ಹೇಳಿಕೆ ನೀಡುವಾಗ, “ನಮ್ಮ ಯಾವುದೇ ಸೈನಿಕರು ಈ ಕಾರ್ಯಾಚರಣೆಯಲ್ಲಿ ಮೃತಪಟ್ಟಿಲ್ಲ” ಎಂದು ತಿಳಿಸಿದ್ದರು. 

ಇತ್ತೀಚೆಗೆ ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದ ಗೋಡೆಯ ಮೇಲೆ ಇದೇ ಕಾರ್ಯಾಚರಣೆಯಲ್ಲಿ ಸಾವಿಗೀಡಾದ ಆರು ಯೋಧರ (ಐವರು ಭೂಸೇನೆ ಹಾಗೂ ಒಬ್ಬರು ವಾಯುಪಡೆ) ಹೆಸರುಗಳನ್ನು ಕೆತ್ತಲಾಗಿದೆ.

ಸರ್ಕಾರದ ಈ ದ್ವಂದ್ವ ನಿಲುವನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್, ಸಚಿವರು ಸದನಕ್ಕೆ ಸುಳ್ಳು ಮಾಹಿತಿ ನೀಡಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರಿಗೆ ಮತ್ತು ಸಂಸತ್ತಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಅವರ ರಾಜೀನಾಮೆಗೆ ಆಗ್ರಹಿಸಿದೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದ್ದು, ಅಂದು ಹರಡುತ್ತಿದ್ದ ತಪ್ಪು ವದಂತಿಗಳಿಗೆ ಕೌಂಟರ್ ನೀಡಲು ರಕ್ಷಣಾ ಸಚಿವರು ಆ ಸಂದರ್ಭಕ್ಕೆ ತಕ್ಕಂತೆ ಆ ಹೇಳಿಕೆ ನೀಡಿದ್ದರೇ ಹೊರತು, ಸಂಸತ್ತನ್ನು ದಾರಿ ತಪ್ಪಿಸುವ ಯಾವುದೇ ಉದ್ದೇಶ ಅವರಿಗಿರಲಿಲ್ಲ ಎಂದು ಹೇಳಿದೆ. ಅಲ್ಲದೆ ಯೋಧರ ತ್ಯಾಗವನ್ನು ಗೌರವಿಸಿ ನಿಯಮಾವಳಿಗಳ ಪ್ರಕಾರವೇ ಯುದ್ಧ ಸ್ಮಾರಕದಲ್ಲಿ ಹೆಸರು ಕೆತ್ತಲಾಗಿದೆ ಸಮರ್ಥಿಸಿಕೊಂಡಿದೆ.

“ಕಳೆದ ವರ್ಷದ ಜುಲೈ 28ರಂದು ಲೋಕಸಭೆಯಲ್ಲಿ ಮಾತನಾಡಿದ್ದ ರಾಜನಾಥ್ ಸಿಂಗ್, ಆಪರೇಷನ್ ಸಿಂಧೂರ್‌ನಲ್ಲಿ ಯಾವುದೇ ಭಾರತೀಯ ಸೈನಿಕರು ಮೃತಪಟ್ಟಿಲ್ಲ ಎಂದು ತಿಳಿಸಿದ್ದರು. ಆದರೆ, ಇತ್ತೀಚೆಗೆ ಕೇಂದ್ರ ಸರ್ಕಾರವೇ ಆ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಆರು ಯೋಧರ ಹೆಸರನ್ನು ಅಧಿಕೃತವಾಗಿ ಬಹಿರಂಗಪಡಿಸಿದೆ” ಎಂದು ವೇಣುಗೋಪಾಲ್ ತಮ್ಮ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ.

“ಆಪರೇಷನ್ ಸಿಂಧೂರ್ ವೇಳೆ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ರಕ್ಷಣಾ ಸಚಿವರು ಸಂಸತ್ತಿನಲ್ಲಿ ಹೇಳಿದ್ದರು. ಆದರೆ, ಈಗ ಆರು ಯೋಧರು ಮೃತಪಟ್ಟಿರುವುದನ್ನು ಸರ್ಕಾರವೇ ಒಪ್ಪಿಕೊಂಡಿದೆ. ಇದರಿಂದ ಸಚಿವರು ಸಂಸತ್ತಿಗೆ ತಪ್ಪು ಮಾಹಿತಿ ನೀಡಿರುವುದು ಅಥವಾ ಮಾಹಿತಿಯನ್ನು ಮರೆಮಾಚಿರುವುದು ಸ್ಪಷ್ಟವಾಗುತ್ತದೆ” ಎಂದು ವೇಣುಗೋಪಾಲ್ ಹೇಳಿದ್ದಾರೆ.

“ಸಂಸತ್ತಿನಲ್ಲಿ ಸಚಿವರು ತಪ್ಪು ಮಾಹಿತಿ ನೀಡುವುದು ಅಥವಾ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡುವುದು ಹಕ್ಕುಚ್ಯುತಿ ಮತ್ತು ಸದನದ ಅವಮಾನಕ್ಕೆ ಸಮಾನವಾಗಿದೆ. ಆದ್ದರಿಂದ, ರಾಜನಾಥ್ ಸಿಂಗ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಅವರು ಲೋಕಸಭೆಯ ಸ್ಪೀಕರ್‌ ಅವರನ್ನು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...