Homeಮುಖಪುಟಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್

ಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್

- Advertisement -
- Advertisement -

ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳ) ಕಾಯ್ದೆ-1991ರ ಸಾವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿರೋಧಿಸಿ, ಮಧ್ಯಂತರ ಅಥವಾ ಮಧ್ಯ ಪ್ರವೇಶ ಅರ್ಜಿಯನ್ನು ಕಾಂಗ್ರೆಸ್‌ ಗುರುವಾರ (ಜ.16) ಸಲ್ಲಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಆರಾಧಾನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿದ್ದಾರೆ. ಅದು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಮಧ್ಯ ಪ್ರವೇಶಿಸಿದ್ದು, ಅಶ್ವಿನಿ ಕುಮಾರ್ ಅವರ ಅರ್ಜಿ ತಿರಸ್ಕರಿಸುವಂತೆ ಕೋರಿದೆ.

ಭಾರತ ಜಾತ್ಯತೀತತೆಯನ್ನು ರಕ್ಷಿಸಲು ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆ ಅಗತ್ಯವಿದೆ. ಅದರ ವಿರುದ್ದದ ಅರ್ಜಿಯು ದೇಶದ ಜಾತ್ಯತೀತ ತತ್ವಗಳನ್ನು ದುರ್ಬಲಗೊಳಿಸುವ ಪ್ರಯತ್ನ ಎಂದು ಕಾಂಗ್ರೆಸ್ ತನ್ನ ಅರ್ಜಿಯಲ್ಲಿ ಹೇಳಿರುವುದಾಗಿ ಬಾರ್ & ಬೆಂಚ್ ವರದಿ ವಿವರಿಸಿದೆ.

“ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆಯ ಸಾಂವಿಧಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಒತ್ತಿ ಹೇಳಲು ಈ ವಿಷಯದಲ್ಲಿ ನಾವು ಮಧ್ಯಪ್ರವೇಶಿಸುತ್ತಿದ್ದೇವೆ. ಏಕೆಂದರೆ, ಕಾಯ್ದೆಯಲ್ಲಿ ಯಾವುದೇ ಬದಲಾವಣೆಯಾದರೂ, ಅದು ಭಾರತದ ಕೋಮು ಸಾಮರಸ್ಯ ಮತ್ತು ಜಾತ್ಯತೀತಗೆ ಅಪಾಯವನ್ನುಂಟುಮಾಡಬಹುದು. ರಾಷ್ಟ್ರದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಧಕ್ಕೆ ಉಂಟಾಗಬಹುದು” ಎಂದು ಕಾಂಗ್ರೆಸ್ ತನ್ನ ಅರ್ಜಿಯಲ್ಲಿ ಹೇಳಿದೆ.

ಅರ್ಜಿಯಲ್ಲಿ ಜಾತ್ಯತೀತತೆಯ ವಿಷಯದಲ್ಲಿ ತನ್ನ ಬದ್ಧತೆಯನ್ನು ಕಾಂಗ್ರೆಸ್ ಪುನರುಚ್ಚರಿಸಿದೆ ಮತ್ತು ಜನತಾ ದಳದೊಂದಿಗೆ ಲೋಕಸಭೆಯಲ್ಲಿ ಬಹುಮತ ಪಡೆದಾಗ ಆರಾಧನಾ ಸ್ಥಳಗಳ ಕಾಯ್ದೆ ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವುದಾಗಿ ತಿಳಿಸಿದೆ.

ಆರಾಧನಾ ಸ್ಥಳಗಳ ಸಾವಿಂಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಯಲ್ಲಿ ಕಾಯ್ದೆಯು ಹಿಂದೂ, ಸಿಖ್, ಜೈನ ಮತ್ತು ಬೌದ್ಧ ಧರ್ಮದವರಿಗೆ ಮಾತ್ರ ಅನ್ವಯಿಸುತ್ತದೆ ಎಂದು ತಪ್ಪು ಮಾಹಿತಿ ನೀಡಲಾಗಿದೆ. ಕಾಯ್ದೆಯು ಎಲ್ಲಾ ಧರ್ಮಗಳಿಗೂ ಅನ್ವಯಿಸುತ್ತದೆ. ಅದು ಯಾವುದೇ ನಿರ್ಧಿಷ್ಟ ಧರ್ಮ ಮತ್ತು ಸಮುದಾಯವನ್ನು ಒಳಗೊಂಡಿಲ್ಲ ಎಂದು ಕಾಂಗ್ರೆಸ್ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.

ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...