ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ಸಂಸದ ಚೌಧರಿ ಸಂತೋಖ್ ಸಿಂಗ್ ಅವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶನಿವಾರ ಪಂಬಾಬ್‌ನಲ್ಲಿ ಸಂಭವಿಸಿದೆ. ರಾಜ್ಯದ ಫಿಲ್ಲೌರ್ ಟೌನ್‌ನಲ್ಲಿ ಯಾತ್ರೆಯ ಸಮಯದಲ್ಲಿ ಸಂಸದ ಚೌಧರಿ ಸಂತೋಖ್ ಕುಸಿದು ಬಿದ್ದಿದ್ದಾರೆ.
ಅಲ್ಲಿಂದ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಅವರು ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. 2019 ರ ಚುನಾವಣೆಯಲ್ಲಿ ಚೌದರಿ ಸಿಂಗ್ ಅವರು 19,491 ಮತಗಳ ಅಂತರದಿಂದ ಜಲಂಧರ್‌ನಿಂದ ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಯಾತ್ರೆಯ ನೇತೃತ್ವ ವಹಿಸಿದ್ದ ರಾಹುಲ್ ಗಾಂಧಿ ಅವರು ಪಾದಯಾತ್ರೆಯನ್ನು ಮಧ್ಯದಲ್ಲಿಯೇ ಬಿಟ್ಟು ಸಂಸದ ಚೌದರಿ ಅವರನ್ನು ಕರೆದುಕೊಂಡು ಹೋಗಿದ್ದ ಆಸ್ಪತ್ರೆಗೆ ಧಾವಿಸಿದರು ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ. ಅವರು ಇಂದು ಜಲಂಧರ್‌ನಲ್ಲಿರುವ ಅವರ ಮನೆಯಲ್ಲಿ ಚೌಧರಿ ಅವರ ಕುಟುಂಬವನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ರಾಹುಲ್ ಗಾಂಧಿಯವರು ಇಂದಿನ ಯಾತ್ರೆಯ ಫೋಟೋ ಕೊಲಾಜ್ ಅನ್ನು ಹಂಚಿಕೊಂಡಿದ್ದು, ಅದರಲ್ಲಿ ಚೌಧರಿ ಅವರು ಇತರ ಪಕ್ಷದ ಸದಸ್ಯರೊಂದಿಗೆ ನಡೆದುಕೊಂಡು ಹೋಗುತ್ತಿರುವುದು ಇವೆ.
“ಶ್ರೀ ಸಂತೋಖ್ ಸಿಂಗ್ ಚೌಧರಿ ಅವರ ಹಠಾತ್ ನಿಧನದಿಂದ ಆಘಾತವಾಗಿದೆ. ಯುವ ಕಾಂಗ್ರೆಸ್‌ನಿಂದ ಬಂದು ಸಂಸತ್ ಸದಸ್ಯರಾಗಿ ತಮ್ಮ ಜೀವನವನ್ನು ಸಾರ್ವಜನಿಕ ಸೇವೆಗೆ ಮುಡಿಪಾಗಿಟ್ಟ ಅವರು ಭೂಮಿಯ ಮೇಲಿನ ಶ್ರಮಶೀಲ ನಾಯಕ, ಧರ್ಮನಿಷ್ಠ ವ್ಯಕ್ತಿ ಮತ್ತು ಕಾಂಗ್ರೆಸ್ ಕುಟುಂಬದ ಬಲವಾದ ಆಧಾರಸ್ತಂಭವಾಗಿದ್ದರು. ಮೃತರ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
श्री संतोख सिंह चौधरी जी के अकस्मात निधन से स्तब्ध हूं।
वो ज़मीन से जुड़े परिश्रमी नेता, एक नेक इंसान और कांग्रेस परिवार के मज़बूत स्तम्भ थे, जिन्होंने युवा कांग्रेस से सांसद तक अपना जीवन जनसेवा को समर्पित किया।
शोकसंतप्त परिवार को अपनी संवेदनाएं व्यक्त करता हूं। pic.twitter.com/1osKsVMugp
— Rahul Gandhi (@RahulGandhi) January 14, 2023
ಪ್ರಸ್ತುತ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಹೇಳಿದ್ದಾರೆ. ನಾಳೆ ಬೆಳಿಗ್ಗೆ ಸಂಸದ ಚೌಧರಿ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ ಎಂದು ವರದಿಯಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಚೌಧರಿ ಅವರ ನಿಧನವು ಪಕ್ಷ ಮತ್ತು ಸಂಘಟನೆಗೆ ದೊಡ್ಡ ಹೊಡೆತವಾಗಿದೆ ಎಂದು ಹೇಳಿದ್ದಾರೆ.
“ನಮ್ಮ ಸಂಸದರಾದ ಶ್ರೀ ಸಂತೋಖ್ ಸಿಂಗ್ ಚೌಧರಿ ಅವರ ಅಕಾಲಿಕ ನಿಧನದ ಬಗ್ಗೆ ತಿಳಿದು ತೀವ್ರ ಆಘಾತ ಮತ್ತು ದುಃಖವಾಗಿದೆ. ಅವರ ಅಗಲಿಕೆ ಪಕ್ಷ ಮತ್ತು ಸಂಘಟನೆಗೆ ದೊಡ್ಡ ಹೊಡೆತವಾಗಿದೆ. ಈ ದುಃಖದ ಸಮಯದಲ್ಲಿ, ನನ್ನ ಹೃದಯವು ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳ ಜೊತೆ ಇರುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಖರ್ಗೆ ಅವರು ಟ್ವೀಟ್ ಮಾಡಿದ್ದಾರೆ.
Extending warm wishes on the many harvest festivities celebrated across India.
May the festivals of Makar Sankranti, Pongal, Suggi Habba, Maghi, Bhogali Bihu, Khichdi, Paush Parva, Uttarayan and Makaravilakku bring joy and prosperity in everyone's lives.
— Mallikarjun Kharge (@kharge) January 14, 2023
ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಮೃತಪಟ್ಟ ಸಂಸದರಿಗೆ ಸಂತಾಪ ಸೂಚಿಸಿದ್ದಾರೆ.


