Homeಮುಖಪುಟಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಪ್ರಕರಣ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ದಮೋಹ್ ಜಿಲ್ಲೆಯ ಜೈನ ದೇವಾಲಯದ ಕುರಿತು X(ಟ್ವಿಟರ್)ನಲ್ಲಿ ತಪ್ಪುದಾರಿಗೆಳೆಯುವ ಪೋಸ್ಟ್‌ ಮಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕೋಟ್ವಾಲಿ ಪೊಲೀಸರು ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆ 153-ಎ (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 177 (ಸುಳ್ಳು ಮಾಹಿತಿ ಒದಗಿಸುವುದು) ಮತ್ತು 505 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ತಿವಾರಿ ಪಿಟಿಐಗೆ ತಿಳಿಸಿದ್ದಾರೆ.

ಎಫ್‌ಐಆರ್  ಬಗ್ಗೆ ಪ್ರತಿಕ್ರಿಯಿಸಿದ ದಿಗ್ವಿಜಯ್ ಸಿಂಗ್, ತಾನು ಸ್ವೀಕರಿಸಿದ ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊಂಡಿದ್ದೇನೆ.ಅಂತಹ ಪ್ರಕರಣಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ನಾನು ನನ್ನ ಜೀವನದುದ್ದಕ್ಕೂ ಹಿಂದೂ, ಮುಸ್ಲಿಂ, ಸಿಖ್ ಜನರ ಸಾಮಾಜಿಕ ಸಾಮರಸ್ಯ ಮತ್ತು ಐಕ್ಯತೆಗಾಗಿ ಕೆಲಸ ಮಾಡಿದ್ದೇನೆ. ಆದರೆ ಬಿಜೆಪಿಗರು ಧಾರ್ಮಿಕ ದ್ವೇಷ  ಹರಡುವ ಮೂಲಕ ಜನರನ್ನು ಪ್ರಚೋದಿಸುತ್ತಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಬಜರಂಗದಳದವರು ಆಗಸ್ಟ್ 26 ರಂದು ಕುಂದಲ್‌ಪುರದ ಜೈನ ದೇವಾಲಯದ ಸಂಕೀರ್ಣವನ್ನು ಧ್ವಂಸಗೊಳಿಸಿದರು ಮತ್ತು ಅಲ್ಲಿ ಶಿವ ಪಿಂಡಿಯನ್ನು ಇರಿಸಿದ್ದಾರೆ ಎಂದು ಆ.27ರ ಪೋಸ್ಟ್ ನಲ್ಲಿ ದಿಗ್ವಿಜಯ್ ಸಿಂಗ್ ಅವರು ಹೇಳಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಮತ್ತು ಡಿಜಿಪಿಗೆ ದಿಗ್ವಿಜಯ್ ಸಿಂಗ್ ಅವರು ಈ ಪೋಸ್ಟ್‌ನ್ನು ಹಂಚಿಕೊಂಡಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಜೈನ ದೇವಾಲಯದ ಕುರಿತ ಸುದ್ದಿ ಸುಳ್ಳು ಮತ್ತು ತಪ್ಪು ದಾರಿಗೆಳೆಯುವಂತದ್ದು ಎಂದು ಹೇಳಿದ್ದಾರೆ. ಕುಂದಲ್ಪುರ ಟ್ರಸ್ಟ್ ಕಮಿಟಿ ಅಧ್ಯಕ್ಷ ಚಂದ್ರಕುಮಾರ್ ಬಜಾಜ್  ದೇವಾಲಯದಲ್ಲಿ ಇಂತಹ ಘಟನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಪೋಸ್ಟ್ ಬಗ್ಗೆ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ಮಧ್ಯಪ್ರದೇಶದ ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ವಿಡಿ ಶರ್ಮಾ, ಜನರನ್ನು ತಪ್ಪು ದಾರಿಗೆಳೆದಿರುವ ಹಿನ್ನೆಲೆ  ಸಿಂಗ್ ಅವರ ಎಕ್ಸ್ ಖಾತೆಯನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ದೆಹಲಿ: ವಿವಿ ಕ್ಯಾಂಪೆಸ್‌ಗೆ ನುಗ್ಗಿ ಎಬಿವಿಪಿ ಕಾರ್ಯಕರ್ತರಿಂದ ದಾಂಧಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

0
ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತರಿಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಹಾಯವಾಣಿ ತೆರೆದಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ ಸಿಂಗ್, "ಹಾಸನ ಜಿಲ್ಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ...