Homeಮುಖಪುಟ'ಹೊರಗಡೆ ಪೇಪರ್ ಲೀಕ್, ಒಳಗಡೆ ವಾಟರ್ ಲೀಕ್' : ಹೊಸ ಸಂಸತ್‌ ಭವನದಲ್ಲಿ ಸೋರಿಕೆಗೆ ಕಾಂಗ್ರೆಸ್...

‘ಹೊರಗಡೆ ಪೇಪರ್ ಲೀಕ್, ಒಳಗಡೆ ವಾಟರ್ ಲೀಕ್’ : ಹೊಸ ಸಂಸತ್‌ ಭವನದಲ್ಲಿ ಸೋರಿಕೆಗೆ ಕಾಂಗ್ರೆಸ್ ಲೇವಡಿ

- Advertisement -
- Advertisement -

ಉದ್ಘಾಟನೆಗೊಂಡು ವರ್ಷ ತುಂಬುವುದರೊಳಗೆ ಹೊಸ ಸಂಸತ್‌ ಭವನ ಸೋರಲು ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಮುಜುಗರ ತಂದಿಟ್ಟಿದೆ.

ಹೊಸ ಸಂಸತ್ ಭವನಕ್ಕೆ ರಾಷ್ಟ್ರಪತಿಗಳು ಪ್ರವೇಶಿಸುವ ಪಥ ಸೇರಿದಂತೆ ವಿವಿದೆಡೆ ಮಳೆ ನೀರು ಸೋರಿಕೆಯಾಗುತ್ತಿರುವುದು ಮತ್ತು ಅದಕ್ಕೆ ಬಕೆಟ್ ಇಟ್ಟಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ದ ಪ್ರತಿಪಕ್ಷಗಳು ಮುಗಿಬಿದ್ದಿವೆ. ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ಈ ವಿಷಯದ ಕುರಿತು ಮುಂದೂಡಿಕೆ ನಿರ್ಣಯವನ್ನು ಮಂಡಿಸಿದರೆ, ಅಖಿಲೇಶ್ ಯಾದವ್ ಹೊಸ ಸಂಸತ್ತನ್ನು ನಿರ್ಮಿಸಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿದೆ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದು, ಕಲಾಪವನ್ನು ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.

ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಮಾಣಿಕ್ಕಂ ಟ್ಯಾಗೋರ್, “ಹೊರಗೆ ಪೇಪರ್‌ ಲೀಕ್‌, ಸಂಸತ್‌ನ ಒಳಗೆ ವಾಟರ್‌ ಲೀಕ್‌. ಸಂಸತ್‌ ಭವನದಲ್ಲಿ ಇತ್ತೀಚೆಗೆ ಆಗುತ್ತಿರವ ಸೋರಿಕೆ, ಹೊಸ ಕಟ್ಟಡ ಇನ್ನೂ ಹೊಸ ವಾತಾವರಣಕ್ಕೆ ಹೊಂದಿಕೊಂಡಿಲ್ಲ ಎನ್ನುವುದನ್ನು ತೋರಿಸುತ್ತದೆ. ಸಂಸತ್‌ ಭವನ ಪೂರ್ಣಗೊಂಡ ಒಂದೇ ವರ್ಷದಲ್ಲಿ ಈ ರೀತಿಯ ಸಮಸ್ಯೆ ಆಗಿದೆ” ಎಂದು ಬರೆದಿದುಕೊಂಡಿದ್ದಾರೆ.

“ಈ ಸಮಸ್ಯೆಯ ಕುರಿತು ಪರಿಶೀಲಿಸಲು ಕಟ್ಟಡದ ಆಳವಾದ ಪರೀಕ್ಷೆಗಾಗಿ ಎಲ್ಲ ಪಕ್ಷಗಳ ಸಂಸದರನ್ನೊಳಗೊಂಡ ವಿಶೇಷ ಸಮಿತಿಯನ್ನು ರಚಿಸಬೇಕು ಎಂದು ನಾನು ಪ್ರಸ್ತಾಪಿಸುತ್ತಿದ್ದೇನೆ. ಈ ಸಮಿತಿಯು ಸೋರಿಕೆಯ ಕಾರಣಗಳತ್ತ ಗಮನ ಹರಿಸಿ, ವಿನ್ಯಾಸ ಮತ್ತು ಬಳಕೆಯಾಗಿರುವ ಸಾಮಗ್ರಿಗಳ ಮೌಲ್ಯಮಾಪನ ಮಾಡಲಿದೆ ಹಾಗೂ ಅಗತ್ಯ ದುರಸ್ತಿ ಕ್ರಮಗಳನ್ನು ಶಿಫಾರಸು ಮಾಡಲಿದೆ. ಇದರೊಂದಿಗೆ, ಈ ಸಮಿತಿಯು ತಾನು ಪತ್ತೆ ಹಚ್ಚಿದ ಸಂಗತಿಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಮೂಲಕ ನಿರ್ವಹಣಾ ಶಿಷ್ಟಾಚಾರವನ್ನು ಸ್ಥಾಪಿಸಿ, ಪಾರದರ್ಶಕತೆಯನ್ನು ಖಾತರಿ ಪಡಿಸಲಿದೆ” ಎಂದು ತಮಿಳುನಾಡಿನ ವಿರುಧನಗರ್ ಸಂಸದ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವಿಪ್ ಮಾಣಿಕ್ಕಂ ಟ್ಯಾಗೋರ್ ಆಗ್ರಹಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಮೇ 28, 2023 ರಂದು ಹೊಸ ಸಂಸತ್ ಕಟ್ಟಡವನ್ನು ಉದ್ಘಾಟಿಸಿದರು. ಅಂದಾಜು 970 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಸೆಪ್ಟೆಂಬರ್ 19, 2023 ರಂದು ಮೊದಲ ವಿಶೇಷ ಅಧಿವೇಶನ ಕರೆಯಲಾಗಿತ್ತು. ಬ್ರಿಟಿಷರ ಕಾಲದ ಹಳೆಯ ಸಂಸತ್ ಕಟ್ಟಡವನ್ನು ಪಾರಂಪರಿಕ ಆಸ್ತಿಯಾಗಿ ಸಂರಕ್ಷಿಸಲಾಗುತ್ತಿದೆ.

ಇದನ್ನೂ ಓದಿ : ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...