Homeಮುಖಪುಟಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್‌ ಸಂಸದ ‘ರಾವ್‌ನೀತ್ ಸಿಂಗ್ ಬಿಟ್ಟು’

ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್‌ ಸಂಸದ ‘ರಾವ್‌ನೀತ್ ಸಿಂಗ್ ಬಿಟ್ಟು’

- Advertisement -
- Advertisement -

ಸಂಸತ್ತಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನಕ್ಕಾಗಿ ಅಧೀರ್‌ ರಂಜನ್‌ ಚೌಧರಿ ಅವರ ಬದಲಿಗೆ ಕಾಂಗ್ರೆಸ್ ಮುಖಂಡ ರಾವ್‌ನೀತ್ ಸಿಂಗ್ ಬಿಟ್ಟು ಅವರನ್ನು ಗುರುವಾರ ಲೋಕಸಭೆಯ ಪ್ರತಿಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ.

ಕಾಂಗ್ರೆಸ್‌ನ ಪಶ್ಚಿಮ ಬಂಗಾಳ ಘಟಕದ ಮುಖ್ಯಸ್ಥರೂ ಆಗಿರುವ ಅಧೀರ್‌ ರಂಜನ್‌ ಚೌಧರಿ ಅವರನ್ನು ಮುಂದಿನ ಎರಡು ತಿಂಗಳು ಚುನಾವಣಾ ಪ್ರಚಾರಕ್ಕೆ ಇಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಆತಂಕ: ಒಂದು ವಾರ ನಾಗ್ಪುರ ಲಾಕ್‌ಡೌನ್

1995 ರಲ್ಲಿ ಹತ್ಯೆಗೀಡಾದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬೀಂತ್ ಸಿಂಗ್ ಅವರ ಮೊಮ್ಮಗ ಬಿಟ್ಟು ಅವರನ್ನು ಆಗಸ್ಟ್‌ ತಿಂಗಳಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್‌ನ ವಿಪ್ ಆಗಿ ನೇಮಿಸಲಾತ್ತು.

ಲೋಕಸಭೆಯಲ್ಲಿ ಕಾಂಗ್ರೆಸ್‌‌ ಉಪನಾಯಕ ಆಗಿರುವ ಗೌರವ್ ಗೊಗೊಯ್ ಕೂಡ ಅಸ್ಸಾಂನಲ್ಲಿ ನಡೆಯುವ ಚುನಾವಣೆಯಲ್ಲಿ ನಿರತರಾಗಿರುವುದರಿಂದ, ಬಿಟ್ಟು ಅವರು ಲೋಕಸಭೆಯಲ್ಲಿ ಪಕ್ಷದ ಕಾರ್ಯತಂತ್ರದ ಉಸ್ತುವಾರಿ ವಹಿಸಲಿದ್ದಾರೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಬಿಜೆಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...