Homeಕರ್ನಾಟಕಬಳ್ಳಾರಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ: ಮೇಯರ್ ಆಗಿ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ. ಸುಕುಂ...

ಬಳ್ಳಾರಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ: ಮೇಯರ್ ಆಗಿ ಮುಲ್ಲಂಗಿ ನಂದೀಶ್, ಉಪಮೇಯರ್ ಆಗಿ ಡಿ. ಸುಕುಂ ಆಯ್ಕೆ

- Advertisement -
- Advertisement -

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್‌ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್‌ನ ಮುಲ್ಲಂಗಿ ನಂದೀಶ್ ಬಾಬು ಹಾಗೂ ಉಪ ಮೇಯರ್‌ ಆಗಿ ಡಿ. ಸುಕುಂ ಆಯ್ಕೆಯಾಗಿದ್ದಾರೆ.

ಪಾಲಿಕೆಯ 18ನೇ ವಾರ್ಡ್ ಸದಸ್ಯರಾಗಿರುವ ಮುಲ್ಲಂಗಿ ನಂದೀಶ್, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಮೋತ್ಕರ್ ವಿರುದ್ಧ ಗೆಲುವು ದಾಖಲಿಸಿ ಪಾಲಿಕೆಯ 23ನೇ ಮೇಯರ್ ಹುದ್ದೆಗೇರಿದ್ದಾರೆ.

ಉಪ ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸದ ಹಿನ್ನೆಲೆ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಸುಕುಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನಕ್ಕೆ ತಮ್ಮ ಬೆಂಬಲಿಗರನ್ನು ಕಣಕ್ಕಿಳಿಸಲು ಶಾಸಕರಾದ ಬಿ.ನಾಗೇಂದ್ರ ಮತ್ತು ಭರತ್ ರೆಡ್ಡಿ ನಡುವೆ ಪೈಪೋಟಿ ಇತ್ತು. ಕಾಂಗ್ರೆಸ್ ಹೈಕಮಾಂಡ್ ಮಧ್ಯಸ್ಥಿಕೆಯಿಂದ ನಂದೀಶ್‌ಗೆ ಅವಕಾಶ ದೊರೆತಿದೆ.

ಬಳ್ಳಾರಿ ಮಹಾನಗರ ಪಾಲಿಕೆಯ 39 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷ 21 ಸ್ಥಾನಗಳನ್ನು ಹೊಂದಿದೆ. ಐವರು ಪಕ್ಷೇತರರು ಕಾಂಗ್ರೆಸ್ ಬೆಂಬಲಿಸಿರುವ ಹಿನ್ನೆಲೆ, 26 ಸದಸ್ಯರ ಬೆಂಬಲ ದೊರೆತಂತಾಗಿದೆ. ಈ ಹಿನ್ನೆಲೆ ಮೇಯರ್ ಚುನಾವಣೆಯಲ್ಲಿ ಸರಾಗವಾಗಿ ಗೆಲುವು ದಾಖಲಿಸಿದೆ. ಬಿಜೆಪಿ 13 ಸದಸ್ಯರ ಬಲ ಹೊಂದಿದೆ.

ಮೇಯ‌ರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ಸಹಜವಾಗಿಯೇ ಆಕಾಂಕ್ಷಿಗಳು ಹೆಚ್ಚಾಗಿದ್ದರು. ಈ ಪೈಕಿ ಮಾಜಿ ಸಚಿವ ಬಿ. ನಾಗೇಂದ್ರ ಆಪ್ತ ಮುಲ್ಲಂಗಿ ನಂದೀಶ್, ಮುಂಡೂರು ಪ್ರಭಂಜನ್ ಕುಮಾ‌ರ್, ಹಿರಿಯ ಸದಸ್ಯ ಪಿ.ಗಾದೆಪ್ಪನವರು ತಮಗೆ ಅವಕಾಶ ಕಲ್ಪಿಸುವಂತೆ ಕೋರಿದ್ದರು.

ಕಳೆದ ಎರಡು ಬಾರಿ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಚುನಾವಣೆ ನಿಗದಿ ಮಾಡಿ ನೀತಿ ಸಂಹಿತೆ ಕಾರಣದಿಂದ ಮುಂದೂಡಲಾಗಿತ್ತು. ಅಂತಿಮವಾಗಿ ಇಂದು ಚುನಾವಣೆ ನಡೆದಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಮೊಬೈಲ್ ಪತ್ತೆಗೆ ಪೌರ ಕಾರ್ಮಿಕರ ಬಳಕೆ: ಸಮಾಜ ಕಲ್ಯಾಣ ಇಲಾಖೆಯಿಂದ ಬಿಬಿಎಂಪಿಗೆ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...